ತುರುವೇಕೆರೆ | 1.40 ಕೋಟಿ ವೆಚ್ಚದಲ್ಲಿ ಜಲಜೀವನ್ ಯೋಜನೆಯಡಿ ಮನೆ ಮನೆಗೆ ನೀರು : ಶಾಸಕ ಎಂ. ಟಿ. ಕೃಷ್ಣಪ್ಪ

Date:

Advertisements

 ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಜಲ ಜೀವನ್ ಯೋಜನೆಯಡಿ ತಾಲೂಕಿನ ನಾಲ್ಕು ಗ್ರಾಮಗಳಿಗೆ ಸುಮಾರು 1.40 ಕೋಟಿ ವೆಚ್ಚದಲ್ಲಿ ಮನೆ ಮನೆಗೆ ಗಂಗೆ ಹರಿಸುವ ಸಲುವಾಗಿ ಶಾಸಕ ಎಂ.ಟಿ.ಕೃಷ್ಣಪ್ಪ  ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.

 ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿ ಯಲ್ಲದಬಾಗಿ, ಹಟ್ಟಿಹಳ್ಳಿ ಮತ್ತು ಒಬ್ಬೆ ನಾಗಸಂದ್ರ ಗ್ರಾಮದಲ್ಲಿ ತಲಾ 30 ಲಕ್ಷ ರೂ ವೆಚ್ಚದ ಕಾಮಗಾರಿ. ಮಾಯಸಂದ್ರ ಹೋಬಳಿಯ ಮುದಿಗೆರೆ ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡುವ ಮೂಲಕ ಕಾಮಾಗಾರಿಗಳಿಗೆ ಚಾಲನೆ ನೀಡಿದರು.

 ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಮನೆಯ ಬಳಿಗೆ ಶುದ್ದ ಕುಡಿಯುವ ನೀರು ಪೂರೈಸಲು ಕೇಂದ್ರ ಸರ್ಕಾರದ ಮಹತ್ವಾಕ್ಷೆ ಯೋಜನೆಯಾಗಿದೆ. ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಕಾಮಗಾರಿ ಕಳಪೆಯಾಗದಂತೆ ಎಚ್ಚರ ವಹಿಸಬೇಕು ಎಂದು ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿ ಗುಣಮಟ್ಟ ಕಾಪಾಡಬೇಕು ಎಂದು ಎಚ್ಚರಿಸಿದರು.

Advertisements

ಇದೆ ಸಂಧರ್ಭದಲ್ಲಿ ಮುಖಂಡರಾದ ವೆಂಕಟೇಶ್ ಕೃಷ್ಣಪ್ಪ, ಯಲ್ಲದಬಾಗಿ ಸೋಮಶೇಖರ್, ದಂಡಿನಶಿವರ ರಾಜಕುಮಾರ್, ಬಡಗರಹಳ್ಳಿ ತ್ಯಾಗರಾಜು, ವೆಂಕಾಟಾಪುರ ಯೋಗೀಶ್, ದುಂಡಾ ಸುರೇಶ್, ಇಂಜಿನಿಯರ್ ರವಿಕುಮಾರ್ ಗುತ್ತಿಗೆದಾರರಾದ ವಿಠಲದೇವರಹಳ್ಳಿ ಹರೀಶ್, ಮುದಿಗೆರೆ ಕೆಂಪೇಗೌಡ, ಶ್ರೀಶೈಲ ಸೇರಿದಂತೆ ಇತರರು ಇದ್ದರು. 

ವರದಿ – ಎಸ್. ನಾಗಭೂಷಣ್

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X