ತುರುವೇಕೆರೆ | ಮುನಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲಕ್ಷ್ಮೀ ವೆಂಕಟೇಶ್ ಆಯ್ಕೆ

Date:

ತುರುವೇಕೆರೆ ತಾಲೂಕಿನ ಮುನಿಯೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಲಕ್ಷ್ಮೀ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಈ ಹಿಂದಿನ ಅಧ್ಯಕ್ಷರಾಗಿದ್ದ ವೈ.ಗಂಗಣ್ಣ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು. ತೆರವಾದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. 16 ಸದಸ್ಯರ ಬಲ ಹೊಂದಿರುವ ಗ್ರಾಮ ಪಂಚಾಯತಿ ಅಧ್ಯಕ್ಷ ಚುನಾವಣೆಗೆ 12 ಸದಸ್ಯರು ಭಾಗವಹಿಸಿದ್ದರು. 4 ಸದಸ್ಯರು ಗೈರು ಹಾಜರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಅಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀ ವೆಂಕಟೇಶ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಗ್ರೇಡ್ 2 ತಹಸೀಲ್ದಾರ್ ಸುಮತಿ ನೂತನ ಅಧ್ಯಕ್ಷರಾಗಿ ಲಕ್ಷ್ಮೀ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯಾಗಿ ಎಂ.ಟಿ.ವೀಣಾ ಮುಂದುವರೆದಿದ್ದಾರೆ. ಅಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ನೂತನ ಅಧ್ಯಕ್ಷರ ಬೆಂಬಲಿಗರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ವರಮಹಾಲಕ್ಷಮ್ಮ, ರಾಜೇಶ್ವರಿ, ಎಂ.ಜಿ.ವಿಶ್ವಮೂರ್ತಿ, ಪುಷ್ಪಲತಾ, ಜಿ.ಕಾಂತರಾಜು, ಜಿ.ಗಂಗಾಧರಸ್ವಾಮಿ, ಕಾವ್ಯ, ಬಿ.ಆರ್.ರವೀಶ್, ಕಮಲ ಪಂಚಾಯಿತಿ ಕಾರ್ಯದರ್ಶಿ ಕಲಾವತಿ ಮುದ್ದಕ್ಕನವರು. ಪಟ್ಟಣ ಪಂಚಾಯಿತಿ ಸದಸ್ಯ ಚಿದಾನಂದ್, ನಾಮಿನಿ ಸದಸ್ಯ ರುದ್ರೇಶ್, ಗ್ರಾಮದ ಮುಖಂಡರಾದ ಎಂ.ಡಿ.ಮೂರ್ತಿ, ಪ್ರಕಾಶ್, ಲಿಂಗರಾಜು ಸೇರಿ ಇತರರು ಅಭಿನಂದಿಸಿದರು.

ವರದಿ – ನಾಗಭೂಷಣ್ ತುರುವೇಕೆರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...