ತುರುವೇಕೆರೆ | ಒಂದೇ ದಿನ  ಐವರ ಮೇಲೆ ಚಿರತೆ ದಾಳಿ :  ಭಯಭೀತರಾದ ಗ್ರಾಮಸ್ಥರು

Date:

Advertisements

ತುರುವೇಕೆರೆ  ತಾಲೂಕಿನ ಗೋಣಿತುಮಕೂರು, ದೇವೀಹಳ್ಳಿ ಮತ್ತು ನಡುವನಹಳ್ಳಿಯಲ್ಲಿ ಚಿರತೆಯ ದಾಳಿಗೆ 5 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

 ಬುಧವಾರ ಮಧ್ಯಾಹ್ನ 2.30 ರ ಸುಮಾರಿನಲ್ಲಿ ನಡುವನಹಳ್ಳಿಯ ವನಜಾಕ್ಷಮ್ಮ (43) ಎಂಬುವವರು ತಮ್ಮ ತೋಟದಲ್ಲಿ ಕೃಷಿ ಕಾಯಕದಲ್ಲಿ ತೊಡಗಿರುವ ವೇಳೆ ಚಿರತೆ ಏಕಾಏಕಿ ದಾಳಿ ನಡೆಸಿ ಈಕೆಯ ಕೈ ಮತ್ತು ತೋಳನ್ನು ಬಲವಾಗಿ ಕಚ್ಚಿದೆ. ವನಜಾಕ್ಷಮ್ಮ ಕೂಗಿಕೊಂಡ ಕೂಡಲೇ ಅಕ್ಕಪಕ್ಕದ ತೋಟದಲ್ಲಿದ್ದ ರೈತಾಪಿಗಳು ಗಲಾಟೆ ಮಾಡಿದ ಕೂಡಲೇ ಚಿರತೆ ಅಲ್ಲಿಂದ ಕಾಲು ಕಿತ್ತಿದೆ.

  ಮೂರು ಗಂಟೆಯ ವೇಳೆಗೆ ಗೋಣಿತುಮಕೂರಿನ ಹುಚ್ಚಮ್ಮ (70) ಎಂಬುವವರು ತಮ್ಮ ತೋಟದ ಬಳಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ದಿಢೀರನೆ ದಾಳಿ ಮಾಡಿದ ಚಿರತೆ ಹುಚ್ಚಮ್ಮರ ಕಿವಿ, ಮುಖವನ್ನು ಪರಚಿ ತೀವ್ರವಾಗಿ ಗಾಯ ಮಾಡಿದೆ. ಈಕೆಯೂ ಕೂಗಿಕೊಂಡಾಗ ಅಕ್ಕಪಕ್ಕದವರು ಬಂದ ವೇಳೆ ಚಿರತೆ ನಾಪತ್ತೆ ಆಗಿದೆ.

Advertisements

 ಗೋಣಿತುಮಕೂರಿನ ಹೊರವಲಯದಲ್ಲಿರುವ ಬೋರೇಗೌಡ (67) ಎಂಬುವವರ ಮನೆ ಬಳಿ ಬಂದ ಚಿರತೆ ಬೋರೇಗೌಡರ ಮೇಲೂ ದಾಳಿ ಮಾಡಿದೆ. ಅಲ್ಲದೇ ಅವರ ತಗಡಿನ ಶೆಡ್‌ ಒಳಗೆ ನುಗ್ಗಿದೆ.ಕೂಡಲೇ ಬೋರೇಗೌಡರು ಬಾಗಿಲು ಹಾಕಿದ್ದಾರೆ. ಚಿರತೆ ಸತತವಾಗಿ ದಾಳಿ ಮಾಡುತ್ತಿರುವ ಬಗ್ಗೆ ಮತ್ತು ಬೋರೇಗೌಡರ ಮನೆ ಬಳಿ ಬಂಧಿಯಾಗಿರುವ ಸುದ್ದಿ ಹರಡುತ್ತಿದ್ದಂತೆ ಮನೆ ಬಳಿ ಜನರು ಜಮಾಯಿಸಿದ್ದಾರೆ. ಆ ವೇಳೆಗೆ ಅರಣ್ಯ ಇಲಾಖಾ ಸಿಬ್ಬಂದಿ ಸಹ ದೌಡಾಯಿಸಿದ್ದರು. ಜನರ ಜಮಾವಣೆ ಮತ್ತು ಗಲಾಟೆ ಹೆಚ್ಚುತ್ತಿದ್ದಂತೆ ಗಾಬರಿಗೊಂಡ ಚಿರತೆ ತಗಡಿನ ಬಾಗಿಲನ್ನು ನೂಕಿ ಹೊರಬಂದು ನೂರಾರು ಜನರಿದ್ದ ಕಡೆಯೇ ಓಡಿ ಹೋಗಿದೆ. ಆ ವೇಳೆ ಅಲ್ಲಿದ್ದ ಸಣ್ಣ ನಿಂಗಯ್ಯ(50) ಎಂಬುವವರ ಮೇಲೆ ದಾಳಿ ಮಾಡಿದೆ. ಅವರ ಬೆನ್ನಿಗೆ ಕಚ್ಚಿ, ಉಗುರಿನಿಂದ ಗಾಯ ಮಾಡಿ ಪಲಾಯನ ಮಾಡಿದೆ. ಈ ಸಂಧರ್ಭಧಲ್ಲಿ ಜನರ ಜಂಗಾಬಲವೇ ಉಡುಗಿಹೋಗಿದೆ.

 ಈ ವೇಳೆ ತಹಸೀಲ್ದಾರ್‌ ಕುಂಇ ಅಹಮದ್‌ ಹಾಗೂ ಅವರ ಸಿಬ್ಬಂದಿ ಸಹ ಹಾಜರಿದ್ದರು. ಎಲ್ಲರೂ ಚಿರತೆಯ ದಾಳಿಗೆ ಕಕ್ಕಾಬಿಕ್ಕಿಯಾದರು. ಈ ಘಟನೆ ಆದ ಕೆಲವೇ ನಿಮಿಷಗಳಲ್ಲಿ ಗೋಣಿತುಮಕೂರಿನಿಂದ ಕೆಲವೇ ದೂರವಿರುವ ದೇವಿಹಳ್ಳಿಯ ಹೊರವಲಯದಲ್ಲಿ ತಮ್ಮ ಮನೆಯ ಬಳಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಶೇಖರಯ್ಯ (50) ಎಂಬುವವರ ಮೇಲೆ ದಿಡೀರನೇ ಎರಗಿ ಅವರ ಕಾಲನ್ನು ಬಲವಾಗಿ ಕಚ್ಚಿ ಗಾಯಗೊಳಿಸಿದೆ. ಅಲ್ಲದೇ ಅವರ ಮನೆಯೊಳಗೆ ಸೇರಿಕೊಂಡಿದೆ. ಕೂಡಲೇ ಜಾಗೃತರಾದ ಮನೆಯವರು ಚಿರತೆಯನ್ನು ಕೂಡಿ ಹಾಕಿದ್ದಾರೆ. 

  ಇಲ್ಲಿಯ ಸರ್ಕಾರಿ ಆಸ್ಪತ್ರೆಗೆ ಚಿರತೆಯಿಂದ ಗಾಯಗೊಂಡವರು ಪ್ರತಿ ಅರ್ಧಗಂಟೆಗೊಮ್ಮೆ ಚಿಕಿತ್ಸೆಗೆ ಆಗಮಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಹುಚ್ಚಮ್ಮ, ವನಜಾಕ್ಷಮ್ಮ, ಬೋರೇಗೌಡ, ಮತ್ತು ಶೇಖರಯ್ಯನವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. 

  ಚಿರತೆ ದಾಳಿಯಿಂದ ಗಾಯಗೊಂಡಿರುವ ಗಾಯಾಳುಗಳ ಖರ್ಚನ್ನು ಅರಣ್ಯ ಇಲಾಖೆಯಿಂದ ಭರಿಸಲಾಗುವುದು. ಅಲ್ಲದೇ ಯಾರಿಗೂ ಪ್ರಾಣಾಪಾಯವಿಲ್ಲವೆಂದು ವೈದ್ಯರು ಹೇಳಿದ್ದಾರೆ ಎಂದು ಚಿಕ್ಕನಾಯಕನಹಳ್ಳಿ ವಲಯ ಅರಣ್ಯಾಧಿಕಾರಿ ಅಮಿತ್ ತಿಳಿಸಿದ್ದಾರೆ.

 ಜನರ ಮೇಲೆ ದಾಳಿ ಮಾಡಿರುವ ಚಿರತೆ ಐದಾರು ಮೇಕೆಗಳ ಮೇಲೂ ದಾಳಿ ಮಾಡಿದೆ. ಮರಿ ಚಿರತೆಗಳು ಸೇರಿದಂತೆ ಐದಾರು ಚಿರತೆಗಳು ಇದ್ದು. ಅರಣ್ಯಾಧಿಕಾರಿ ಎಲ್ಲವನ್ನೂ ಸೆರೆ ಹಿಡಿಯಬೇಕೆಂದು ಗೋಣಿತುಮಕೂರು ಗ್ರಾಮದ ನಂದೀಶ್ ಕುಮಾರ್, ಚಂದನ್ ಮತ್ತು ರಂಗಸ್ವಾಮಿ ಒತ್ತಾಯಿಸಿದ್ದಾರೆ.

 ಮೈಸೂರಿನಿಂದ ಅರವಳಿಕೆ ತಜ್ಞರು ಬರುತ್ತಿದ್ದಾರೆ. ತಡರಾತ್ರಿವರೆಗೂ ಚಿರತೆ ಸೆರೆ ಕಾರ್ಯಚರಣೆ ನಡೆಯಲಿದೆ ಎಂದು ಅರಣ್ಯ ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಅರಣ್ಯಾಧಿಕಾರಿ ಶಶಿಧರ್ ಮತ್ತು ಭರತ್ ಹಾಗು ಅರಣ್ಯ ಇಲಾಖಾ ಸಿಬ್ಬಂದಿಗಳು ದೇವಿಹಳ್ಳಿಯ ಶೇಖರಯ್ಯನವರ ಮನೆ ಬಳಿ ಬೀಡುಬಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X