ತುರುವೇಕೆರೆ | ಒಂದೇ ದಿನ  ಐವರ ಮೇಲೆ ಚಿರತೆ ದಾಳಿ :  ಭಯಭೀತರಾದ ಗ್ರಾಮಸ್ಥರು

Date:

ತುರುವೇಕೆರೆ  ತಾಲೂಕಿನ ಗೋಣಿತುಮಕೂರು, ದೇವೀಹಳ್ಳಿ ಮತ್ತು ನಡುವನಹಳ್ಳಿಯಲ್ಲಿ ಚಿರತೆಯ ದಾಳಿಗೆ 5 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

- Advertisement -

 ಬುಧವಾರ ಮಧ್ಯಾಹ್ನ 2.30 ರ ಸುಮಾರಿನಲ್ಲಿ ನಡುವನಹಳ್ಳಿಯ ವನಜಾಕ್ಷಮ್ಮ (43) ಎಂಬುವವರು ತಮ್ಮ ತೋಟದಲ್ಲಿ ಕೃಷಿ ಕಾಯಕದಲ್ಲಿ ತೊಡಗಿರುವ ವೇಳೆ ಚಿರತೆ ಏಕಾಏಕಿ ದಾಳಿ ನಡೆಸಿ ಈಕೆಯ ಕೈ ಮತ್ತು ತೋಳನ್ನು ಬಲವಾಗಿ ಕಚ್ಚಿದೆ. ವನಜಾಕ್ಷಮ್ಮ ಕೂಗಿಕೊಂಡ ಕೂಡಲೇ ಅಕ್ಕಪಕ್ಕದ ತೋಟದಲ್ಲಿದ್ದ ರೈತಾಪಿಗಳು ಗಲಾಟೆ ಮಾಡಿದ ಕೂಡಲೇ ಚಿರತೆ ಅಲ್ಲಿಂದ ಕಾಲು ಕಿತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ...

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ ಅನರ್ಹ ವ್ಯಕ್ತಿಯನ್ನೂ ಸೇರಿಸಿಲ್ಲ ಎಂದು ಚುನಾವಣಾ ಆಯೋಗ ಹೇಳುತ್ತದೆ. ಆದರೆ, ಮತದಾರರ ಪಟ್ಟಿಯಲ್ಲಿರುವ ಅಂಕಿಅಂಶಗಳು ಮತ್ತು ದಾಖಲೆಗಳು ಬೇರೆಯದ್ದೇ ಕಥೆ...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

  ಮೂರು ಗಂಟೆಯ ವೇಳೆಗೆ ಗೋಣಿತುಮಕೂರಿನ ಹುಚ್ಚಮ್ಮ (70) ಎಂಬುವವರು ತಮ್ಮ ತೋಟದ ಬಳಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ದಿಢೀರನೆ ದಾಳಿ ಮಾಡಿದ ಚಿರತೆ ಹುಚ್ಚಮ್ಮರ ಕಿವಿ, ಮುಖವನ್ನು ಪರಚಿ ತೀವ್ರವಾಗಿ ಗಾಯ ಮಾಡಿದೆ. ಈಕೆಯೂ ಕೂಗಿಕೊಂಡಾಗ ಅಕ್ಕಪಕ್ಕದವರು ಬಂದ ವೇಳೆ ಚಿರತೆ ನಾಪತ್ತೆ ಆಗಿದೆ.

 ಗೋಣಿತುಮಕೂರಿನ ಹೊರವಲಯದಲ್ಲಿರುವ ಬೋರೇಗೌಡ (67) ಎಂಬುವವರ ಮನೆ ಬಳಿ ಬಂದ ಚಿರತೆ ಬೋರೇಗೌಡರ ಮೇಲೂ ದಾಳಿ ಮಾಡಿದೆ. ಅಲ್ಲದೇ ಅವರ ತಗಡಿನ ಶೆಡ್‌ ಒಳಗೆ ನುಗ್ಗಿದೆ.ಕೂಡಲೇ ಬೋರೇಗೌಡರು ಬಾಗಿಲು ಹಾಕಿದ್ದಾರೆ. ಚಿರತೆ ಸತತವಾಗಿ ದಾಳಿ ಮಾಡುತ್ತಿರುವ ಬಗ್ಗೆ ಮತ್ತು ಬೋರೇಗೌಡರ ಮನೆ ಬಳಿ ಬಂಧಿಯಾಗಿರುವ ಸುದ್ದಿ ಹರಡುತ್ತಿದ್ದಂತೆ ಮನೆ ಬಳಿ ಜನರು ಜಮಾಯಿಸಿದ್ದಾರೆ. ಆ ವೇಳೆಗೆ ಅರಣ್ಯ ಇಲಾಖಾ ಸಿಬ್ಬಂದಿ ಸಹ ದೌಡಾಯಿಸಿದ್ದರು. ಜನರ ಜಮಾವಣೆ ಮತ್ತು ಗಲಾಟೆ ಹೆಚ್ಚುತ್ತಿದ್ದಂತೆ ಗಾಬರಿಗೊಂಡ ಚಿರತೆ ತಗಡಿನ ಬಾಗಿಲನ್ನು ನೂಕಿ ಹೊರಬಂದು ನೂರಾರು ಜನರಿದ್ದ ಕಡೆಯೇ ಓಡಿ ಹೋಗಿದೆ. ಆ ವೇಳೆ ಅಲ್ಲಿದ್ದ ಸಣ್ಣ ನಿಂಗಯ್ಯ(50) ಎಂಬುವವರ ಮೇಲೆ ದಾಳಿ ಮಾಡಿದೆ. ಅವರ ಬೆನ್ನಿಗೆ ಕಚ್ಚಿ, ಉಗುರಿನಿಂದ ಗಾಯ ಮಾಡಿ ಪಲಾಯನ ಮಾಡಿದೆ. ಈ ಸಂಧರ್ಭಧಲ್ಲಿ ಜನರ ಜಂಗಾಬಲವೇ ಉಡುಗಿಹೋಗಿದೆ.

 ಈ ವೇಳೆ ತಹಸೀಲ್ದಾರ್‌ ಕುಂಇ ಅಹಮದ್‌ ಹಾಗೂ ಅವರ ಸಿಬ್ಬಂದಿ ಸಹ ಹಾಜರಿದ್ದರು. ಎಲ್ಲರೂ ಚಿರತೆಯ ದಾಳಿಗೆ ಕಕ್ಕಾಬಿಕ್ಕಿಯಾದರು. ಈ ಘಟನೆ ಆದ ಕೆಲವೇ ನಿಮಿಷಗಳಲ್ಲಿ ಗೋಣಿತುಮಕೂರಿನಿಂದ ಕೆಲವೇ ದೂರವಿರುವ ದೇವಿಹಳ್ಳಿಯ ಹೊರವಲಯದಲ್ಲಿ ತಮ್ಮ ಮನೆಯ ಬಳಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಶೇಖರಯ್ಯ (50) ಎಂಬುವವರ ಮೇಲೆ ದಿಡೀರನೇ ಎರಗಿ ಅವರ ಕಾಲನ್ನು ಬಲವಾಗಿ ಕಚ್ಚಿ ಗಾಯಗೊಳಿಸಿದೆ. ಅಲ್ಲದೇ ಅವರ ಮನೆಯೊಳಗೆ ಸೇರಿಕೊಂಡಿದೆ. ಕೂಡಲೇ ಜಾಗೃತರಾದ ಮನೆಯವರು ಚಿರತೆಯನ್ನು ಕೂಡಿ ಹಾಕಿದ್ದಾರೆ. 

  ಇಲ್ಲಿಯ ಸರ್ಕಾರಿ ಆಸ್ಪತ್ರೆಗೆ ಚಿರತೆಯಿಂದ ಗಾಯಗೊಂಡವರು ಪ್ರತಿ ಅರ್ಧಗಂಟೆಗೊಮ್ಮೆ ಚಿಕಿತ್ಸೆಗೆ ಆಗಮಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಹುಚ್ಚಮ್ಮ, ವನಜಾಕ್ಷಮ್ಮ, ಬೋರೇಗೌಡ, ಮತ್ತು ಶೇಖರಯ್ಯನವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. 

  ಚಿರತೆ ದಾಳಿಯಿಂದ ಗಾಯಗೊಂಡಿರುವ ಗಾಯಾಳುಗಳ ಖರ್ಚನ್ನು ಅರಣ್ಯ ಇಲಾಖೆಯಿಂದ ಭರಿಸಲಾಗುವುದು. ಅಲ್ಲದೇ ಯಾರಿಗೂ ಪ್ರಾಣಾಪಾಯವಿಲ್ಲವೆಂದು ವೈದ್ಯರು ಹೇಳಿದ್ದಾರೆ ಎಂದು ಚಿಕ್ಕನಾಯಕನಹಳ್ಳಿ ವಲಯ ಅರಣ್ಯಾಧಿಕಾರಿ ಅಮಿತ್ ತಿಳಿಸಿದ್ದಾರೆ.

 ಜನರ ಮೇಲೆ ದಾಳಿ ಮಾಡಿರುವ ಚಿರತೆ ಐದಾರು ಮೇಕೆಗಳ ಮೇಲೂ ದಾಳಿ ಮಾಡಿದೆ. ಮರಿ ಚಿರತೆಗಳು ಸೇರಿದಂತೆ ಐದಾರು ಚಿರತೆಗಳು ಇದ್ದು. ಅರಣ್ಯಾಧಿಕಾರಿ ಎಲ್ಲವನ್ನೂ ಸೆರೆ ಹಿಡಿಯಬೇಕೆಂದು ಗೋಣಿತುಮಕೂರು ಗ್ರಾಮದ ನಂದೀಶ್ ಕುಮಾರ್, ಚಂದನ್ ಮತ್ತು ರಂಗಸ್ವಾಮಿ ಒತ್ತಾಯಿಸಿದ್ದಾರೆ.

 ಮೈಸೂರಿನಿಂದ ಅರವಳಿಕೆ ತಜ್ಞರು ಬರುತ್ತಿದ್ದಾರೆ. ತಡರಾತ್ರಿವರೆಗೂ ಚಿರತೆ ಸೆರೆ ಕಾರ್ಯಚರಣೆ ನಡೆಯಲಿದೆ ಎಂದು ಅರಣ್ಯ ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಅರಣ್ಯಾಧಿಕಾರಿ ಶಶಿಧರ್ ಮತ್ತು ಭರತ್ ಹಾಗು ಅರಣ್ಯ ಇಲಾಖಾ ಸಿಬ್ಬಂದಿಗಳು ದೇವಿಹಳ್ಳಿಯ ಶೇಖರಯ್ಯನವರ ಮನೆ ಬಳಿ ಬೀಡುಬಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

ರಾಯಚೂರು | ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಇಲ್ಲಿಯ ಅಶೋಕ ನಗರ ಪ್ರದೇಶದಲ್ಲಿ ಸಿಎಚ್ ಪೌಡರ್‌ ಮಿಶ್ರಿತ ಸೇಂದಿ ಮಾರಾಟ...

ರಾಯಚೂರು | ಬಿಚ್ಚಾಲಿ ಗ್ರಾಮದ 188 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದ 188 ಕುಟುಂಬಗಳಿಗೆ ಸೋಮವಾರ ಶಾಸಕ ಬಸನಗೌಡ...

ಹಾವೇರಿ‌ | ಎನ್‌ಎಸ್‌ಎಸ್ ರಾಜ್ಯಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಡಾ. ಶಮಂತ್ ಕುಮಾರ್ ಕೆ.ಎಸ್. ಆಯ್ಕೆ

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು, ರಾಜ್ಯ...