ತುರುವೇಕೆರೆ | ಅಂಬೇಡ್ಕರ್‌ ಭವನದ  ಒತ್ತವರಿ ಜಾಗ ತೆರವು ಭರವಸೆ : ಅಹೋರಾತ್ರಿ ಧರಣಿ ಅಂತ್ಯ

Date:

ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್‌ ಭವನದ ಜಾಗವನ್ನು ಒತ್ತುವರಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತಹಸೀಲ್ದಾರ್‌ ನೀಡಿದ ಭರವಸೆಯ ಮೇರೆಗೆ ಸೋಮವಾರದಿಂದ ಪಟ್ಟಣ ಪಂಚಾಯಿತಿಯ ಆವರಣದಲ್ಲಿ ಆರಂಭಗೊಂಡಿದ್ದ ಅಹೋರಾತ್ರಿ ಧರಣಿ ಅಂತ್ಯವಾಯಿತು.

- Advertisement -

 ಅಂಬೇಡ್ಕರ್‌ ಭವನದ ಜಾಗವನ್ನು ದೇವರಾಜ್‌ ಎಂಬುವವರು ಒತ್ತುವರಿ ಮಾಡಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಾರೆಂದು ಆರೋಪಿಸಿ ತಾಲೂಕು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಪದಾದಿಕಾರಿಗಳು ತಾಲೂಕು ಸಂಚಾಲಕ ಬಾಣಸಂದ್ರ ಕೃಷ್ಣ ಮಾದಿಗ, ಜಿಲ್ಲಾ ಸಂಘಟಕ ಮುರುಳಿ ಕುಂದೂರು, ಬಡಾವಣೆ ಶಿವಣ್ಣ, ಸುನಿಲ್‌ ಸೇರಿದಂತೆ ಹಲವರ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಕೂಡಲೇ ಅಕ್ರಮವಾಗಿ ಕಟ್ಟಲಾಗಿರುವ ಕಟ್ಟಡವನ್ನು ತೆರವುಗೊಳಿಸುವಂತೆ ಆಗ್ರಹಿಸಿದರು. ಆದರೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕೆಲ ಕಾರಣಗಳಿಂದಾಗಿ ಕಟ್ಟಡ ತೆರವುಗೊಳಿಸಲು ಸಾಧ್ಯವಿಲ್ಲ. ಕಾಲಾವಕಾಶ ನೀಡಿ ಎಂದು ಮನವಿ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

 ಆದರೆ ಪ್ರತಿಭಟನಾಕಾರರು ಅಕ್ರಮ ಕಟ್ಟಡವನ್ನು ಒಡೆಯುವ ತನಕ ತಮ್ಮ ಪ್ರತಿಭಟನೆ ನಡೆಸುವುದಾಗಿ ಘೋಷಿಸಿ ಅಹೋರಾತ್ರಿ ಧರಣಿ ನಡೆಸಿದರು. ರಾತ್ರಿಯೇ ತಹಸೀಲ್ದಾರ್‌ ಕುಂಇ ಅಹಮದ್‌ ರವರು ಧರಣಿ ನಿರತರೊಂದಿಗೆ ಮಾತನಾಡಿ ಮನವೊಲಿಸಲು ಪ್ರಯತ್ನಿಸಿದರು. ಆದರೆ ಪ್ರಯೋಜನವಾಗಲಿಲ್ಲ. 

 ಮಂಗಳವಾರ ಪ್ರತಿಭಟನೆಯ ರೂಪ ಬದಲಾಗತೊಡಗಿತು. ಜಿಲ್ಲಾ ದಲಿತ ಸಂಘರ್ಷ ಸಮಿತಿಯ(ಅಂಬೇಡ್ಕರ್‌ ವಾದ) ಸಂಚಾಲಕ ಕುಂದೂರು ತಿಮ್ಮಯ್ಯ ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಹಾಗೂ ಜಿಲ್ಲೆಯ ಕೆಲವು ತಾಲೂಕಿನಿಂದಲೂ ದಲಿತ ಮುಖಂಡರು ಆಗಮಿಸಿ ಪ್ರತಿಭಟನೆ ತೀವ್ರಗೋಳಿಸಿದರು. 

 ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪುನಃ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್‌ ಕುಂ ಇ ಅಹಮದ್‌ ರವರು ಪಟ್ಟಣ ಪಂಚಾಯ್ತಿಯ ಪ್ರಭಾರ ಅಧ್ಯಕ್ಷೆ ಭಾಗ್ಯ ರವರ ಅಧ್ಯಕ್ಷತೆಯಲ್ಲಿ ಎಲ್ಲಾ ಸದಸ್ಯರ ತುರ್ತು ಸಭೆ ಕರೆದು ಚರ್ಚಿಸಿದರು. ಈ ವೇಳೆ ಎಲ್ಲರೂ ಸ್ಥಳಕ್ಕೆ ತೆರಳಿ ವಾಸ್ತವಾಂಶ ಅರಿಯುವುದು ಸರಿ ಎಂದು ನಿರ್ಧರಿಸಿದರು.

 ಈ ವೇಳೆ ಸ್ಥಳಕ್ಕೆ ತೆರಳಿದ ಅಧಿಕಾರಿಗಳಿಗೆ ಕಟ್ಟಡ ಕಟ್ಟುವ ಸಂಬಂಧ ಕಟ್ಟಡದ ಮಾಲೀಕರಾದ ದೇವರಾಜ್‌ ರವರು ಪಟ್ಟಣ ಪಂಚಾಯಿತಿಯಿಂದ ಯಾವುದೇ ಅನುಮತಿ ಪಡೆದಿಲ್ಲ ಎಂಬುದು ತಿಳಿಯಿತು. ಅಲ್ಲದೇ ಅವರ ನಿವೇಶನದ ಅಳತೆಗಿಂತ ಹೆಚ್ಚಿನ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದು ಗೊತ್ತಾಯಿತು. ಹೀಗಾಗಿ ದೇವರಾಜ್‌ ರವರು ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ತೆರವುಗೊಳಿಸುವ ನಿರ್ಧಾರಕ್ಕೆ ಬರಲಾಯಿತು. 

 ಸ್ಥಳ ವೀಕ್ಷಣೆ ಮಾಡಿದ ನಂತರ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತು ಸದಸ್ಯರೊಂದಿಗೆ ಮಾತನಾಡಿದ ತಹಸೀಲ್ದಾರ್‌ ಕುಂಇ ಅಹಮದ್‌ ರವರು ಈ ಕ್ಷಣದಿಂದಲೇ ಒತ್ತುವರಿ ಮಾಡಿ ಕಟ್ಟಲಾಗಿರುವ ಕಟ್ಟಡವನ್ನು ತೆರವು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಇದರಿಂದ ಸಮಾಧಾನಗೊಂಡ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅಧಿಕಾರಿಗಳು ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಂಬಿಕೆ ಇರುವುದರಿಂದ ಕೂಡಲೇ ಪ್ರತಿಭಟನೆಯನ್ನು ಅಂತ್ಯಗೊಳಿಸಿರುವುದಾಗಿ ಘೋಷಿಸಿದರು.

 ಪ್ರತಿಭಟನೆಯಲ್ಲಿ ಮುಖಂಡರಾದ ಬಾಣಸಂದ್ರ ಕೃಷ್ಣ ಮಾದಿಗ, ಮುರುಳಿ ಕುಂದೂರು, ಜಿಲ್ಲಾ ಸಂಘಟನಾ ಸಂಚಾಲಕ ಕೆ.ಎಚ್.ರಂಗನಾಥ್‌ ಕಂಠಲಗೆರೆ, ಎರೆಕಟ್ಟೆ ರಮೇಶ್‌, ಇರ್ಫಾನ್‌, ಬಡಾವಣೆ ಶಿವರಾಜ್‌, ಕುಣಿಕೇನಹಳ್ಳಿ ಜಗದೀಶ್‌, ಮಾಯಸಂದ್ರ ಸುಬ್ರಹ್ಮಣ್ಯ, ಡೊಂಕಿಹಳ್ಳಿ ರಾಮಯ್ಯ, ಬೀಚನಹಳ್ಳಿ ರಾಮಣ್ಣ, ಸುನಿಲ್‌, ಆಕಾಶ್‌, ಕೀರ್ತಿ, ಅಮ್ಮಸಂದ್ರ ರೋಹಿತ್‌, ಭೋವಿ ಸಮಾಜದ ಅಧ್ಯಕ್ಷ ಮಹಲಿಂಗಯ್ಯ, ಪ್ರಸಾದ್‌, ಜಗದೀಶ್‌ (ರಾಯ), ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ವರದಿ -ಎಸ್. ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...