ತುರುವೇಕೆರೆ | ಅನುಭವದಲ್ಲಿದ್ದ ಜಮೀನು ಬೇರೆಯವರ ಹೆಸರಿಗೆ : ತಾಲೂಕು ಕಚೇರಿ ಆವರಣದಲ್ಲೇ ವಿಷ ಸೇವಿಸಿದ ರೈತ

Date:

ತನ್ನ ಅನುಭವದಲ್ಲಿದ್ದ ಜಮೀನನ್ನು ಬೇರೆಯವರ ಹೆಸರಿಗೆ ಕಂದಾಯ ಇಲಾಖಾ ಅಧಿಕಾರಿಗಳು ದಾಖಲಾತಿ ಸೃಷ್ಠಿಸಿ ತನಗೆ ವಂಚಿಸಿದ್ದಾರೆಂದು ಆರೋಪಿಸಿ ತಾಲೂಕಿನ ದೊಡ್ಡಾಘಟ್ಟದ ರೈತ ವಿಕಲ ಚೇತನ ಜಯಕುಮಾರ್‌ (50) ಎಂಬುವವರು ತಾಲೂಕು ಕಚೇರಿಯ ಆವರಣದಲ್ಲೇ ವಿಷ ಸೇವಿಸಿರುವ ಘಟನೆ ವರದಿಯಾಗಿದೆ.

- Advertisement -

 ಗುಬ್ಬಿ  ತಾಲೂಕಿನ ದೊಡ್ಡಾಘಟ್ಟದ ನಿವಾಸಿ ಲಕ್ಕಪ್ಪ ಎಂಬುವವರ ಮಗ ಜಯಕುಮಾರ್‌ ಎಂಬುವವರು ತಮ್ಮ ಪಿತ್ರಾರ್ಜಿತ ಆಸ್ತಿಯನ್ನು ಅನುಭವಿಸುತ್ತಿದ್ದರು. ತಮ್ಮ ಜೀವನೋಪಾಯಕ್ಕಾಗಿ ಅಮ್ಮಸಂದ್ರದಲ್ಲಿ ಸಣ್ಣ ಟೀ ಅಂಗಡಿಯನ್ನು ಇಟ್ಟುಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದಾರೆಂದು ಹೇಳಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

 ಈ ಮಧ್ಯೆ ತಮ್ಮ ತಂದೆಯವರ ಹೆಸರಿನಲ್ಲಿದ್ದ ಸುಮಾರು 1.02 ಗುಂಟೆ ಜಮೀನು ಮತ್ತು ೧೧ ಗುಂಟೆ ಜಮೀನನ್ನು ಅದೇ ಗ್ರಾಮದ ಕೃಷ್ಣಪ್ಪ ಮತ್ತು ಗಂಗಮ್ಮ ಎಂಬುವವರ ಹೆಸರಿಗೆ ಮಾಡಲಾಗಿದೆ ಎಂದು ಹೇಳಲಾಗಿದೆ. ಕಳೆದ ತಿಂಗಳ ತನಕವೂ ತಮ್ಮ ತಂದೆಯವರ ಹೆಸರಿನಲ್ಲಿ ಬರುತ್ತಿದ್ದ ದಾಖಲೆಗಳು ಇತ್ತೀಚೆಗೆ ಕೃಷ್ಣಪ್ಪ ಮತ್ತು ಗಂಗಮ್ಮ ಎಂಬುವವರ ಹೆಸರಿಗೆ ಮಾಡಲಾಗಿದೆ ಎಂದು ಸದರಿ ಜಯಕುಮಾರ್‌ ಗೆ ತಿಳಿದುಬಂದಿದೆ. ಈ ಸಂಬಂಧ ಜಯಕುಮಾರ್‌, ಕಂದಾಯ ಇಲಾಖಾ ಅಧಿಕಾರಿಗಳಿಗೆ ತಕರಾರು ಅರ್ಜಿಯನ್ನೂ ಸಹ ನೀಡಿದ್ದಾರೆ, ಅಲ್ಲದೇ ನ್ಯಾಯಾಲಯದ ಮೊರೆಯನ್ನೂ ಸಹ ಹೊಕ್ಕಿದ್ದಾರೆ ಎಂದು ತಿಳಿದುಬಂದಿದೆ. 

 ಮಂಗಳವಾರ ತಾಲೂಕು ಕಛೇರಿಗೆ ಬಂದಿದ್ದ ಜಯಕುಮಾರ್‌ ತಮ್ಮ ಜಮೀನಿಗೆ ಸಂಬಂಧಿಸಿದಂತೆ ಪಹಣಿ ತೆಗೆದುಕೊಂಡ ವೇಳೆ ತಮ್ಮ ಅನುಭವದಲ್ಲಿರುವ ಮತ್ತು ತಮ್ಮ ತಂದೆಯ ಹೆಸರಿನಲ್ಲಿದ್ದ ಜಮೀನು ಅದೇ ಗ್ರಾಮದ ಕೃಷ್ಣಪ್ಪ ಮತ್ತು ಗಂಗಮ್ಮ ಎಂಬುವವರ ಹೆಸರಿಗೆ ಆಗಿರುವುದನ್ನು ಕಂಡು ಹೌಹಾರಿದ್ದಾರೆ. ಅಲ್ಲಿಯೇ ಇದ್ದ ಕಂದಾಯ ಇಲಾಖಾ ಅಧಿಕಾರಿ ಲೋಕೇಶ್‌ ಎಂಬುವವರನ್ನು ಕೇಳಲಾಗಿ ಈ ಸ್ವತ್ತು ಕೃಷ್ಣಪ್ಪ ಮತ್ತು ಗಂಗಮ್ಮ ನವರ ಹೆಸರಿಗೆ ಆಗಿ ಹೋಗಿದೆ. ಈಗೇನೂ ಮಾಡಲು ಸಾಧ್ಯವಿಲ್ಲ. ಸಿವಿಲ್‌ ನ್ಯಾಯಾಲಯಕ್ಕೆ ಹೋಗಿ ಇತ್ಯರ್ಥಪಡಿಸಿಕೊಳ್ಳಿ ಎಂದು ಹೇಳಿದ್ದಾರೆ. ಇದರಿಂದ ಗಾಬರಿಗೊಂಡ ಜಯಕುಮಾರ್‌ ತಮ್ಮೊಂದಿಗೆ ತಂದಿದ್ದ ವಿಷವನ್ನು ಕಛೇರಿಯ ಆವರಣದಲ್ಲೇ ಕುಡಿದರು ಎಂದು ಹೇಳಲಾಗಿದೆ.

 ವಿಷ ಕುಡಿದ ಕೆಲವೇ ನಿಮಿಷಗಳಲ್ಲಿ ತಮ್ಮ ಗ್ರಾಮದ ಕುಮಾರಸ್ವಾಮಿ ಎನ್ನುವವರಿಗೆ ಕರೆ ಮಾಡಿ ತಮಗೆ ಜಮೀನಿನ ವಿಚಾರದಲ್ಲಿ ಅನ್ಯಾಯವಾಗಿದೆ. ಹಾಗಾಗಿ ತಾವು ವಿಷ ಕುಡಿಯುತ್ತಿರುವುದಾಗಿ ಹೇಳಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಮಾರಸ್ವಾಮಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಬೇರೆ ಆಸ್ಪತ್ರೆಗೆ ದಾಖಲಿಸಲು ವೈದ್ಯರು ಸೂಚಿಸಿದ್ದಾರೆ. 

 ತುಮಕೂರಿನಲ್ಲಿ ಜಿಲ್ಲಾಧಿಕಾರಿಗಳ ಸಭೆಗೆ ತೆರಳಿದ್ದ ತಹಸೀಲ್ದಾರ್‌ ಎನ್. ಎ. ಕುಂಇ ಅಹಮದ್‌ ರವರು ವಿಷಯ ತಿಳಿದ ಕೂಡಲೇ ಕಂದಾಯ ಇಲಾಖಾಧಿಕಾರಿಗಳಾದ ಶಿವಕುಮಾರ್ ಮತ್ತು ಮಲ್ಲಿಕಾರ್ಜುನ್ ರವರನ್ನು ಸರ್ಕಾರಿ ಆಸ್ಪತ್ರೆಗೆ ಕಳಿಸಿ ವಾಸ್ತವಾಂಶವನ್ನು ಸಂಗ್ರಹಿಸಿದ್ದಾರೆ. ‌

 ಸದ್ಯ ರೈತ ಜಯಕುಮಾರ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. 

ವರದಿ – ಎಸ್. ನಾಗಭೂಷಣ್ ತುರುವೇಕೆರೆ 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...