ತುರುವೇಕೆರೆ | ಇವನಾರವ ಎನ್ನದೇ ಇವ ನಮ್ಮವ ಎನ್ನುವಂತೆ ವೀರಶೈವ ಲಿಂಗಾಯಿತ ಸಮಾಜ ಬಾಳಬೇಕಿದೆ : ಕೇಂದ್ರ ಸಚಿವ ವಿ. ಸೋಮಣ್ಣ

Date:

ಬುದ್ದ, ಬಸವವಣ್ಣ, ಅಂಬೇಡ್ಕರ್ ಇಡೀ ವಿಶ್ವದ ಭೂಪಟದಲ್ಲಿ ದೊಡ್ಡ ಸಂಪತ್ತು ಎಂದು ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ತಿಳಿಸಿದರು.

- Advertisement -

ತುರುವೇಕೆರೆ ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ತಾಲ್ಲೂಕು ಘಟಕ, ಮಹಿಳಾ ಮತ್ತು ಯುವ ಘಟಕದ ಹಾಗೂ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಗುರು ಶ್ರೀ ಬಸವೇಶ್ವರ ಜಯಂತಿ, ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, 12 ನೇ ಶತಮಾನದಲ್ಲಿಯೇ ಅನುಭವ ಮಂಟಪವನ್ನು ನಿರ್ಮಿಸಿದ್ದ ಬಸವಣ್ಣರನ್ನು ಇಂದು ವಿಶ್ವವೇ ಮೆಚ್ಚದೆ. ಬಸವಣ್ಣರು ಹಾಕಿಕೊಟ್ಟ ಮಾರ್ಗದಲ್ಲಿ ಅವರ ವಿಚಾರಧಾರೆಗಳು, ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು ಜೀವನ ನಡೆಸಬೇಕಿದೆ. ಇವನ್ಯಾರವ ಇವನಾರವ ಎನ್ನದೇ ಇವ ನಮ್ಮವ ಎನ್ನುವಂತೆ ವೀರಶೈವ ಲಿಂಗಾಯಿತ ಸಮಾಜ ಬಾಳಬೇಕಿದೆ. ಬೇರೆಯವರನ್ನು ಬಹಳ ಗೌರವ, ಪ್ರೀತಿ ವಿಶ್ವಾಸದಿಂದ ಕಾಣುವ ವೀರಶೈವ ಲಿಂಗಾಯಿತ ಸಮಾಜ ಸಣ್ಣ ಪುಟ್ಟ ತಪ್ಪುಗಳಿಂದ ಎರಡು ಮೂರು ಗುಂಪುಗಳಾಗುತ್ತಿದೆ. ಇದನ್ನು ಬಿಡಬೇಕು ಎಲ್ಲರೂ ಒಗ್ಗಾಟ್ಟಾಗಿ ಸಮಾಜ ಕಟ್ಟುವ ಕೆಲಸವನ್ನು ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಬಸವಣ್ಣ ಕೇವಲ ವೀರಶೈವ ಲಿಂಗಾಯಿತ ಸಮಾಜಕ್ಕೆ ಮಾತ್ರ ಸೀಮಿತರಾಗಿಲ್ಲ. ಪ್ರತಿಭಾ ಪುರಸ್ಕಾರ ಕೇವಲ ಲಿಂಗಾಯಿತ ಸಮಾಜಕ್ಕೆ ಮೀಸಲು ಮಾಡಬೇಡಿ 12 ನೇ ಶತಮಾನದಲ್ಲಿಯೇ ಜಾತಿಯತೆಯನ್ನು ತೊಡೆದು ಹಾಕಿ ಸಮಾನತೆ ಸಾರಿದ ಮಹಾನ್ ಪುರುಷರು ಅವರ ಆಶಯದಂತೆ ಮುಂದಿನ ದಿನಗಳಲ್ಲಿ ಎಲ್ಲ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಮಾಡಿ ನಾನು ಸಹ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿಯೇ ತುರುವೇಕೆರೆ ಕ್ಷೇತ್ರದಲ್ಲಿ ಅತ್ಯಧಿಕ ಮತಗಳು ಸಂದಾಯವಾಗಿದೆ. ಸಂಸದನಾಗಿ ಆಯ್ಕೆಯಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದದಿಂದ ಕೇಂದ್ರದ ಮಂತ್ರಿಯಾಗುವ ಅವಕಾಶ ಸಿಕ್ಕಿದೆ. ಮಂತ್ರಿಯಾಗಿ 4 ತಿಂಗಳಲ್ಲಿ ಕೆಲವು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದೇನೆ. ನಿಮ್ಮ ನಿರೀಕ್ಷೆಯಂತೆ ಇನ್ನು ಹೆಚ್ಚಿನ ಅಭಿವೃದ್ದಿ ಮಾಡುತ್ತೇನೆ. ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದು ವಿ.ಸೋಮಣ್ಣ ಹೇಳಿದರು.

ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ ಸಚಿವ ವಿ. ಸೋಮಣ್ಣ ಉತ್ತಮ ಕೆಲಸಗಾರರು. ಅಭಿವೃದ್ದಿ ಬಗ್ಗೆ ಸದಾ ಚಿಂತನೆ ನಡೆಸುವವರು. ಲೋಕಸಬಾ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಯಾಗಿದ್ದಾಗ ವಿರೋಧ ಪಕ್ಷದವರು ಹೊರಗಿನವರು ಎಂದು ಭಾಷಣ ಮಾಡುತ್ತಿದ್ದರು. ನಾನು ಅಧಿಕ ಮತಗಳಿಂದ ಗೆಲವು ಸಾಧಿಸುತ್ತೀರಿ ಎಂದು ಅಂದೇ ಅವರಿಗೆ ಭರವಸೆ ನೀಡಿದ್ದೆ. ಅದರಂತೆ 1 ಲಕ್ಷದ 73 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಿದರು. ನಿಮ್ಮಗಳ ಮತಗಳಿಗೆ ಮೌಲ್ಯ ಬಂದಿದೆ. ಸೋಮಣ್ಣ ಅದೃಷ್ಟವಂತರು. ವಿಧಾನ ಸಭೆಯಲ್ಲಿ ಎರಡು ಕಡೆ ಸೋತಿದ್ದರು. ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಕೇಂದ್ರ ಸಚಿವರಾಗಿದ್ದಾರೆ. ಜಿಲ್ಲೆಯನ್ನು ಹೆಚ್ಚಿನ ಅಭಿವೃದ್ದಿ ಮಾಡಲಿ ಎಂದು ಹಾರೈಸಿದರು.

ಕೇಂದ್ರ ಸಚಿವ ವಿ.ಸೋಮಣ್ಣ ಕಾರ್ಯಕ್ರಮಕ್ಕೆ ಆಗಮಿಸಲು ಸುಮಾರು ಎರಡು ಗಂಟೆ ತಡವಾಗಿದ್ದರಿಂದ ವೇದಿಕೆಯಲ್ಲಿ ಹಲವರು ಬಸವಣ್ಣರ ವಚನಗಳನ್ನು ಹಾಡಿ ರಂಜಿಸಿದರೆ. ಶಾಸಕ ಎಂ.ಟಿ.ಕೃಷ್ಣಪ್ಪ ಮೈಕ್ ಹಿಡಿದು ಚನ್ನಪ್ಪ ಚನ್ನೇಗೌಡ ಎಂಬ ಜಾನಪದ ಹಾಡು ಹಾಡಿ ಜನರನ್ನು ರಂಜಿಸಿ ಚಪ್ಪಾಳೆ ಗಿಟ್ಟಿಸಿದರು.

ಈ ಸಂಧರ್ಭದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ಮಾಜಿ ಸಂಸದ ಜಿ.ಎಸ್.ಬಸವರಾಜುರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಸಮಾಜದ ಪ್ರತಿಭಾವಂತ ವಿದ್ಯಾರ್ಥೀ ಹಾಗೂ ಪೋಷಕರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸಿದ್ದ ಗೋಡೆಕೆರೆ ಸಂಸ್ಥಾನ ಮಠದ ಚಿರಪಟ್ಟಾದ್ಯಕ್ಷರಾದ ಮೃತ್ಯಂಜಯದೇಶಿಕೇಂದ್ರ ಸ್ವಾಮೀಜಿ, ಕಾಡಸಿದ್ದೇಶ್ವರ ಮಠದ ಕರಿವೃಷಭದೇಶಿಕೇಂದ್ರ ಶಿವಯೋಗಿಶ್ವರ ಮಹಾಸ್ವಾಮಿಗಳು ಆಶೀರ್ವಾದ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ತಾಲೂಕು ಅಧ್ಯಕ್ಷ ಎಸ್.ಎಂ. ಕುಮಾರಸ್ವಾಮಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಮಾಜಿ ಶಾಸಕರಾದ ಹೆಚ್.ಬಿ.ನಂಜೇಗೌಡ, ಎಂ.ಡಿ.ಲಕ್ಷ್ಮೀ ನಾರಾಯಣ್, ತಹಶೀಲ್ದಾರ್ ಎ.ಎನ್. ಕುಂ.ಇ ಅಹಮದ್, ಬಿಇಓ ಸೋಮಶೇಖರ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಆಶಾ ರಾಜಶೇಖರ್, ಸದಸ್ಯ ಯಜಮಾನ್ ಮಹೇಶ್, ನೊಳಂಬ ಲಿಂಗಾಯಿತ ಸಂಘದ ನಿರ್ದೇಶಕ ಎಂ.ದೇವರಾಜು, ವೀರಶೈವ ಲಿಂಗಾಯಿತ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ, ಜಿಲ್ಲಾಧ್ಯಕ್ಷ ಡಾ.ಪರಮೇಶ್, ತಾಲೂಕು ಯುವ ಘಟಕದ ಅಧ್ಯಕ್ಷ ಎನ್. ಯೋಗೀಶ್, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾವತಿ, ನೌಕರರ ಸಂಘದ ಜಿಲ್ಲಾಧ್ಯಕ್ಷ ಉಮೇಶ್, ಸಮಾಜ ಮುಖಂಡರಾದ ಉಮೇಶ್, ಷಣ್ಮುಕಪ್ಪ, ಯೋಗಾನಂದ್, ವಿಜಯಕುಮಾರ್, ಕೈಲಾಶ್, ಪರಶಿವಮೂರ್ತಿ, ಗುರುರಾಜ್ ಕಾರ್ಯದರ್ಶಿ ಶಿವಾನಂದಯ್ಯ ಖಜಾಂಚಿ ಸುರೇಶ್, ಉಪನ್ಯಾಸಕಿ ರೂಪಶ್ರೀ ಸೇರಿದಂತೆ ಇದ್ದರು.

ವರದಿ – ನಾಗಭೂಷಣ್ ತುರುವೇಕೆರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...