ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ತುಷಾರ್ ಗಿರಿನಾಥ್ ಸೂಚನೆ

Date:

Advertisements

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲ ವಲಯ ಆಯುಕ್ತರಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

“ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

Advertisements

“ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್/ಬ್ಯಾನರ್ ಗಳನ್ನು ಪಾಲಿಕೆಯಿಂದ ತೆರವುಗೊಳಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್.ಐ.ಆರ್ ದಾಖಲಿಸಲಾಗುತ್ತಿದೆ. ಆದರೂ ಸಾರ್ವಜನಿಕ ಸ್ಥಳ, ರಸ್ತೆ ಬದಿ ಫ್ಲೆಕ್ಸ್ ಅಳವಡಿಸುವುದು ಮಾತ್ರ ನಿಯಂತ್ರಣವಾಗುತ್ತಿಲ್ಲ. ಆದ್ದರಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಜಾಹೀರಾತು ಅಳವಡಿಕೆಗೆ ನಿಯಂತ್ರಣ ತರಬೇಕು” ಎಂದರು.

ರಾತ್ರಿ ವೇಳೆ ಪ್ರಹರಿ ವಾಹನಗಳ ಮೂಲಕ ಗಸ್ತು

“ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ರಾತ್ರಿ ವೇಳೆ ಹೆಚ್ಚಾಗಿ ಅಳವಡಿಸುತ್ತಾರೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಒಂದು ಪ್ರಹರಿ ವಾಹನವನ್ನು ನಿಯೋಜಿಸಿ ಪ್ರಮುಖ ರಸ್ತೆಗಳಲ್ಲಿ ಗಸ್ತು ತಿರುಗುವ ಮೂಲಕ ಪರಿಶೀಲನೆ ಹಾಗೂ ಅನಧಿಕೃತ ಫ್ಲೆಕ್ಸ್/ಬ್ಯಾನರ್ ಅಳವಡಿಸುವುದರ ಮೇಲೆ ನಿಗಾವಹಿಸಬೇಕು” ಎಂದು ಹೇಳಿದರು.

ದೂರುಗಳಿಗೆ ಕೂಡಲೆ ಸ್ಪಂದಿಸಿ

“ಬೆಂಗಳೂರು ನಗರದಲ್ಲಿ ಕಾಲಮಿತಿಯೊಳಗಾಗಿ ಹಾಗೂ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ‘ರಸ್ತೆ ಗುಂಡಿ ಗಮನ’ ಮೊಬೈಲ್ ಅಫ್ಲಿಕೇಷನ್ ಅನ್ನು ಅನಾವರಣಗೊಳಿಸಿದ್ದು, ಅದರ ಬಗ್ಗೆ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ತಂತ್ರಾಂಶದ ಮೂಲಕ ನಾಗರಿಕರಿಂದ ಬರುವ ದೂರುಗಳನ್ನು ತ್ವರಿತವಾಗಿ ಮುಚ್ಚಬೇಕು. ಜೊತೆಗೆ ನಗರದ ಪ್ರಮುಖ ರಸ್ತೆಗಳಲ್ಲಿರುವ ಗುಂಡಿಗಳನ್ನು ಆದ್ಯತೆ ಮೇರೆಗೆ ಮುಚ್ಚಲು ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಿ

ನಗರದಲ್ಲಿ ಸರಾಸರಿ 200 ಡೆಂಘೀ ಪ್ರಕರಣಗಳು ಕಂಡುಬರುತ್ತಿವೆ. ಪ್ರತಿ ವಾರ್ಡ್‌ನಲ್ಲಿ ಔಷಧಿ ಸಿಂಪಡಣೆಗಾಗಿ ಸ್ಪ್ರೇಯರ್ ಹಾಗೂ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದ್ದು, ಈ ಪೈಕಿ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲು ಸೂಚಿಸಲಾಯಿತು.

ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಶಿವಾನಂದ್ ಕಲ್ಕೆರೆ, ವಲಯ ಆಯುಕ್ತರಾದ ಡಾ. ಆರ್.ಎಲ್ ದೀಪಕ್, ಶಿವಾನಂದ್ ಕಪಾಶಿ, ರಮೇಶ್, ಕರೀಗೌಡ, ಪ್ರೀತಿ ಗೆಹ್ಲೋಟ್, ಸ್ನೇಹಲ್, ವಿನೋತ್ ಪ್ರಿಯಾ, ರಮ್ಯಾ, ಪ್ರಧಾನ ಅಭಿಯಂತರರಾದ ಡಾ. ಪ್ರಹ್ಲಾದ್, ಮುಖ್ಯ ಅಭಿಯಂತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X