ಬೀದರ್‌ | ಬಸ್‌ನಲ್ಲಿ 10 ಲಕ್ಷ ರೂ. ಮೌಲ್ಯದ ಗಾಂಜಾ ಸಾಗಾಟ; ಇಬ್ಬರ ಬಂಧನ

Date:

ಮಹಾರಾಷ್ಟ್ರದ ಸಾರಿಗೆ ಬಸ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೀದರ್‌ನ ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಗಾಂಜಾ ಸಾಗಾಟ ಮಾಡುತ್ತಿದ್ದ ಮಹಾರಾಷ್ಟ್ರದ ಮಧುಕರ್ ಮತ್ತು ಅಮರ್ ಬಂಧಿತ ಆರೋಪಿಗಳು. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಆರೋಪಿಗಳಿಂದ 10 ಲಕ್ಷ ರೂ. ಮೌಲ್ಯದ 10 ಕೆ.ಜಿ ಗಾಂಜಾವನ್ನು ಬೀದರ್ ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತೆಲಂಗಾಣದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಮಾಹಿತಿ ಆಧರಿಸಿ ಬೀದರ್ – ತೆಲಂಗಾಣ ಗಡಿಯಲ್ಲಿ ಬಸ್ ತಡೆದು ತಪಾಸಣೆ ಮಾಡಿದಾಗ ಗಾಂಜಾ ಖದೀಮರು ಸಿಕ್ಕಿ ಬಿದ್ದಿದ್ದಾರೆ. ತಲಾ 2 ಕೆಜಿಯ ಐದು ಪ್ಯಾಕೆಟ್ ಗಳಲ್ಲಿ ಸಾಗಾಟ ಮಾಡುತ್ತಿದ್ದರು. ಎನ್‌ಡಿಪಿಎಸ್‌ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ‌.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ತನಿಖೆಗೆ ಸಮಿತಿ ರಚನೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಯುವಕನನ್ನು...

ಚಿತ್ರದುರ್ಗ | ಶೋಷಿತ ಸಮುದಾಯಗಳ ಪ್ರಗತಿಯ ಹರಿಕಾರ ಬಿ ಕೃಷ್ಣಪ್ಪ

ದಲಿತ, ಶೋಷಿತ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಿದ ಪ್ರೊ.ಬಿ ಕೃಷ್ಣಪ್ಪ ಅವರು ಸ್ಮರಣೀಯ...

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...