ಕುಷ್ಟಗಿ | ಭೀಕರ ಅಪಘಾತ: 6 ಮಂದಿ ಸಾವು, ಎದೆ ನಲುಗಿತು ಎಂದ ಸಿಎಂ

Date:

ಲಾರಿ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಎಳೆಯ ಮಕ್ಕಳು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಭಾನುವಾರ ಸಂಜೆ ಸಂಭವಿಸಿದೆ.

ವಿಜಯಪುರದಿಂದ ಬೆಂಗಳೂರಿನತ್ತ ಹೊರಟಿದ್ದ ನತಧೃಷ್ಟ ಇಂಡಿಕಾ ಕಾರು, ಕುಷ್ಟಗಿ ತಾಲೂಕಿನ ಗುಡಿ ಕಲಕೇರಿ ಸಾಮಾಜಿಕ ಅರಣ್ಯ ವಲಯದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಾರ್ಗಮಧ್ಯೆ ಟಯರ್ ಸ್ಫೋಟಗೊಂಡು ರಸ್ತೆಯ ಇನ್ನೊಂದು ಬದಿಗೆ ಬಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ ಹಾಗೂ ಮಕ್ಕಳಾದ ರಾಖಿ, ರಶ್ಮಿಕಾ ಸ್ಥಳದಲ್ಲೇ ಸಾವಿಗೀಡಾದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಅಪ್ಪಳಿಸಿದ ಕಾರಿನ ಅರ್ಧ ಭಾಗ ಲಾರಿಯೊಳಕ್ಕೇ ಸಿಲುಕಿಕೊಂಡಿದ್ದು, ಶವಗಳನ್ನು ಹೊರತೆಗೆಯುವುದು ಸ್ಥಳೀಯರಿಗೆ ಮತ್ತು ಪೊಲೀಸರಿಗೆ ಹರಸಾಹಸವಾಗಿ ಪರಿಣಮಿಸಿತ್ತು.

ಎರಡು ಲಕ್ಷ ರೂಪಾಯಿ ಪರಿಹಾರ


“ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.

ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.

ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ.’ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...