ಬೆಳಗಾವಿ | ಇಬ್ಬರು ದಲಿತ ಯುವಕರನ್ನು ಮರಕ್ಕೆ ಕಟ್ಟಿ ಹಲ್ಲೆ: ದೂರು-ಪ್ರತಿದೂರು ದಾಖಲು

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೊಡಚಿ ಎಂಬ ಗ್ರಾಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರು ಯುವಕರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.

- Advertisement -

ಹಲ್ಲೆಗೊಳಗಾಗಿರುವ ಓರ್ವ ಸಂತ್ರಸ್ತ ಯುವಕನ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಘಟನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ದೂರುಗಳು ಕಟಕೋಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಹಲ್ಲೆ ಮಾಡಿದವರು ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಹಲ್ಲೆಗೊಳಗಾಗಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಎರಡೂ ಸಮುದಾಯದ ಮಂದಿ ಕಟಕೋಳ ಪೊಲೀಸ್ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಿಸಿದ್ದಾರೆ.

ಈರಣ್ಣ ವಿಠಲ ನಾಯ್ಕರ (18) ಹಾಗೂ ಲಕ್ಷ್ಮಣ ಮಲ್ಲಪ್ಪ ಚಿಪ್ಪಲಕಟ್ಟಿ (19) ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.

ಆಗಸ್ಟ್ 5ರಂದು ಈ ಹಲ್ಲೆ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು, ವಿಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್ ಆದ ಬಳಿಕ ಆ.11ರಂದು ಕಟಕೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಲಿಂಗಾಯತ ಸಮಾಜದ ಈರಣ್ಣ ಸಂಗಪ್ಪ ಪಾಕನಟ್ಟಿ, ಬಸನಗೌಡ ನಿಂಗನಗೌಡ ಪಾಟೀಲ, ಪ್ರದೀಪ ಈರಣ್ಣ ಪಾಕನಟ್ಟಿ, ಮಹಾಂತೇಶ ಲಕ್ಷ್ಮಣ ಪಾಕನಟ್ಟಿ, ಸಚಿನ್‌ ದಾನಪ್ಪ ಪಾಕನಟ್ಟಿ, ನಿಂಗರಾಜ ಈರಪ್ಪ ಪಾಕನಟ್ಟಿ, ಸಂಗಪ್ಪ ನಿಂಗಪ್ಪ ಪಾಕನಟ್ಟಿ ಅವರ ವಿರುದ್ಧ ಕೊಲೆ ಯತ್ನ, ಮಾರಣಾಂತಿಕ ಹಲ್ಲೆ ಹಾಗೂ ಜಾತಿ ನಿಂದನೆ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಕಟಕೋಳ ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಸಂಬಂಧ ವಿಠಲ ಲಕ್ಷ್ಮಣ ನಾಯ್ಕರ ಎನ್ನುವವರು ದೂರು ನೀಡಿದ್ದಾರೆ. ‌ದೂರಿನಲ್ಲಿ, “ಆರೋಪಿಗಳು ಹಾಗೂ ನಮ್ಮ ಜಮೀನು ಅಕ್ಕಪಕ್ಕದಲ್ಲಿವೆ. ಜಮೀನಿಗೆ ಹೋಗಲು ದಾರಿ ಏಕೆ ಬಿಡುವುದಿಲ್ಲ ಎಂದು ಜಗಳ ತೆಗೆದು ಬಳಿಕ ಆರೋಪಿಗಳು ಯುವಕರನ್ನು ಮರಕ್ಕೆ ಕಟ್ಟಿ ಹೊಡೆದಿದ್ದಾರೆ. ಕುಡಗೋಲು ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾರೆ. ಅಲ್ಲದೇ, ಕೀಳು ಪದ ಬಳಸಿ ಜಾತಿ ನಿಂದನೆ ಮಾಡಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ.

ಈ ದೂರಿಗೆ ಪ್ರತಿ ದೂರು ನೀಡಿರುವ ಲಿಂಗಾಯತ ಸಮುದಾಯದ ರಮೇಶ್ ಲಕ್ಷ್ಮಣ್ ಪಾಕನಟ್ಟಿ ಎಂಬುವವರು, “ಈ ಘಟನೆ ಜಮೀನು ವಿವಾದಕ್ಕೆ ಸಂಬಂಧಿಸಿಲ್ಲ. ಈ ಇಬ್ಬರೂ ಯುವಕರು ನನ್ನ 14 ವರ್ಷದ ಅಪ್ರಾಪ್ತ ಮಗಳಿಗೆ ಕಿರುಕುಳ ನೀಡುತ್ತಿದ್ದರು. ಆಕೆ ಶಾಲೆಗೆ ಹೋಗುವಾಗ ಬರುವಾಗ ಬೈಕ್‌ ಮೂಲಕ ಬೆನ್ನಟ್ಟಿ ಬರುತ್ತಿದ್ದರು. ಪ್ರೀತಿಸುವಂತೆ ಕಾಡಿಸುತ್ತಿದ್ದರು. ಮೊಬೈಲ್ ನಂಬರ್ ಕೊಡು, ಇಲ್ಲದಿದ್ದರೆ ಸುಮ್ಮನೇ ಬಿಡುವುದಿಲ್ಲವೆಂದು ಬೆದರಿಕೆ ಹಾಕುತ್ತಿದ್ದರು” ಎಂದು ದೂರಿನಲ್ಲಿ ಉಲ್ಲೇಖ ಮಾಡಿರುವುದಾಗಿ ತಿಳಿದುಬಂದಿದೆ.

ಎರಡೂ ಕಡೆಯ ದೂರನ್ನು ಸ್ವೀಕರಿಸಿರುವ ಕಟಕೋಳ ಪೊಲೀಸರು, ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರೇನ್ ಸ್ಟ್ರೋಕ್ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದು ಅವಶ್ಯ: ನರರೋಗ ತಜ್ಞ ಡಾ. ರಾಕೇಶ ಎ.ವಿ

ಮೆದುಳಿನ ಪಾರ್ಶ್ವವಾಯು (ಬ್ರೇನ್ ಸ್ಟ್ರೋಕ್) ಸಂಭವಿಸಿದಾಗ ತಕ್ಷಣ ವೈದ್ಯಕೀಯ ನೆರವು ಪಡೆಯುವುದು...

ಬಾಗಲಕೋಟೆ | ಬಸವೇಶ್ವರ ಬ್ಯಾಂಕ್ ರಾಜ್ಯದ ಆರ್ಥಿಕ ಭೂಪಟದಲ್ಲಿ ಗುರುತಿಸಿಕೊಂಡಿದೆ: ಪ್ರಕಾಶ ತಪಶೆಟ್ಟಿ

ವರ್ತಕರ ಹಿತಾಸಕ್ತಿಗಾಗಿ ಸ್ಥಾಪನೆಯಾದ ಬಸವೇಶ್ವರ ಸಹಕಾರಿ ಬ್ಯಾಂಕ್, ಶೇರುದಾರರು, ವರ್ತಕರು ಹಾಗೂ...

ಬಾದಾಮಿ | ಆಸ್ಪತ್ರೆ, ಶಾಲೆಗೆ ಸಿಇಒ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ನೋಟಿಸ್

ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಕಾಪಾಡುವ...

ರಾಯಚೂರು | ಬಿಸಿಎಂ-ಬಿ ವರ್ಗಕ್ಕೆ ಒಂದು ಸ್ಥಾನವೂ ಮೀಸಲಿಲ್ಲ, ಕರಡು ಅಧಿಸೂಚನೆ ತಿದ್ದುಪಡಿಗೆ ಆಗ್ರಹ: ಚಂದ್ರಶೇಖರ ಪಾಟೀಲ್

ರಾಯಚೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆಯಲ್ಲಿ ಬಿಸಿಎಂ-ಬಿ (...