ಅಧಿವೇಶನ | ವಿಧಾನ ಪರಿಷತ್‌ನಲ್ಲೂ ಎರಡು ಮಹತ್ವದ ವಿಧೇಯಕ ಅಂಗೀಕಾರ

Date:

ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದ್ದ ಎರಡು ಮಹತ್ವದ ವಿಧೇಯಕಗಳನ್ನು ಮಂಗಳವಾರ ವಿಧಾನ ಪರಿಷತ್‌ನಲ್ಲೂ ಸುದೀರ್ಘ ಚರ್ಚೆಯ ನಂತರ ಅಂಗೀಕರಿಸಲಾಗಿದೆ.

- Advertisement -

ಕರ್ನಾಟಕ ಸಾರ್ವಜನಿಕ ಸಂಗ್ರಹಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ 2023 ಹಾಗೂ ಕರ್ನಾಟಕ ಸರಕು ಮತ್ತು ಸೇವೆಗಳ (ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆ ಅಂಗೀಕಾರ ಮಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ ಕೆ ಪಾಟೀಲ್ ಅವರು ಮಸೂದೆಗಳನ್ನು ಮಂಡಿಸಿ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ಕಾಯ್ದೆ ಮೇಲೆ ಅನೇಕ ಸದಸ್ಯರು ಮಾತನಾಡಿದರು. ಸದಸ್ಯರಾದ ಡಿ.ಎಸ್.ಅರುಣ್, ನವೀನ್‌, ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಮುನಿರಾಜು ಗೌಡ ಸೇರಿದಂತೆ ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಿದರು. ಇನ್ನು ಜೆಡಿಎಸ್‌ ಪರವಾಗಿ ಮರಿತಿಬ್ಬೇಗೌಡ, ಟಿ.ಎ.ಶರವಣ, ಭೋಜೇಗೌಡ ಸೇರಿ ಹಲವು ಸದಸ್ಯರು ಈ ಬಗ್ಗೆ ಮಾತನಾಡಿದರು.

“ಸಣ್ಣ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಸೋರಿಕೆಯಾಗುತ್ತಿರುವ ತೆರಿಗೆಯನ್ನು ತಡೆಗಟ್ಟಲು ಬಿಗಿ ಕ್ರಮ ಕೈಗೊಳ್ಳಬೇಕು” ಎಂಬ ಸಲಹೆಗಳು ವ್ಯಕ್ತವಾದವು.

ಸಚಿವ ಎಚ್‌ ಕೆ ಪಾಟೀಲ್‌ ಉತ್ತರಿಸಿ, “ವಿಧೇಯಕ ತಿದ್ದುಪಡಿಯಿಂದ ಯಾರು ಕೂಡ ಆತಂಕ ಪಡಬೇಕಾದ ಅಗತ್ಯವಿಲ್ಲ. ಎಲ್ಲರನ್ನು ಗಮನದಲ್ಲಿಟ್ಟುಕೊಂಡೇ ತಿದ್ದುಪಡಿ ಮಾಡಲಾಗಿದೆ. ಸದಸ್ಯರ ಅಭಿಪ್ರಾಯ ಮನ್ನಿಸಲಾಗುವುದು” ಎಂದರು. ಬಳಿಕ ವಿಧೇಯಕವನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಅಂಗೀಕಾರ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...