ಹೊಸಪೇಟೆ ಹೊರವಲಯದಲ್ಲಿ ಎರಡು ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತರನ್ನು ಹೊಸಪೇಟೆಯ ಉಮಾ(45), ಕೆಂಚವ್ವ(80), ಭಾಗ್ಯ(32), ಅನಿಲ್(30), ಗೋಣಿಬಸಪ್ಪ(65), ಯುವರಾಜ(4) ಮತ್ತು ಭೀಮಲಿಂಗ(50) ಎಂದು ಗುರುತಿಸಲಾಗಿದೆ.
ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸ್ಥಳಕ್ಕೆ ಮರಿಯಮ್ಮನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇವರೆಲ್ಲರೂ ಹೊಸಪೇಟೆ ಮೂಲದವರಾಗಿದ್ದಾರೆ. ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದರು. ಇನ್ನು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.