ಬೆಂಗಳೂರು | ಬೈಕಿನಲ್ಲಿ ಡ್ರಾಪ್ ಕೊಡದ ನೆಪ: ಮಂಗಳೂರು ಮೂಲದ ನೌಕರ ಸಹಿತ ಇಬ್ಬರಿಗೆ ಹಲ್ಲೆ; ಓರ್ವನ ಬಂಧನ

Date:

ಬೈಕಿನಲ್ಲಿ ತೆರಳುವಾಗ ಕೈ ತೋರಿಸಿದರೂ ಡ್ರಾಪ್ ಕೊಡಲಿಲ್ಲ ಎಂಬ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೋರ್ವ ಮಂಗಳೂರು ಮೂಲದ ನೌಕರ ಸಹಿತ ಇಬ್ಬರಿಗೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಸಮೀಪ ಭಾನುವಾರ ರಾತ್ರಿ ನಡೆದಿದೆ.

- Advertisement -

ಹಲ್ಲೆಗೊಳಗಾದ ವ್ಯಕ್ತಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಅಹ್ಮದ್ ಸೈಫ್ ಕಕ್ಕಿಂಜೆ(25) ಹಾಗೂ ಲಾಡ್ಜ್‌ವೊಂದರಲ್ಲಿ ನೌಕರರಾಗಿರುವ ಅಬ್ದುಲ್ ಲತೀಫ್(50) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಹಲ್ಲೆ ನಡೆಸಿದ ವ್ಯಕ್ತಿಯನ್ನು ಜಾಲಹಳ್ಳಿ ಸಮೀಪದ ನಿವಾಸಿ ಕಿರಣ್ ಎಂದು ಗುರುತಿಸಲಾಗಿದೆ. ಸದ್ಯ ಘಟನೆಯ ಬಗ್ಗೆ ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ಕಿರಣ್‌ನನ್ನು ಪೊಲೀಸರು ಬಂಧಿಸಿದ್ದಾರೆ.

WhatsApp Image 2025 11 10 at 11.50.58 AM
ಹಲ್ಲೆ ನಡೆಸಿದ್ದ ಆರೋಪಿ ಕಿರಣ್

ಏನಿದು ಘಟನೆ?
ಅಹ್ಮದ್ ಸೈಫ್ ಹಾಗೂ ಆಫಿನ್ ಎಂಬ ಯುವಕರು ಬಸವೇಶ್ವರ ಬಸ್‌ ನಿಲ್ದಾಣದಿಂದ ಜಾಲಹಳ್ಳಿ ಸಮೀಪದಲ್ಲಿರುವ ತಮ್ಮ ರೂಮಿನ ಕಡೆಗೆ ಬೈಕಿನಲ್ಲಿ ಬರುತ್ತಿದ್ದರು. ಈ ವೇಳೆ ಆರೋಪಿ ಕಿರಣ್ ಬೈಕಿನಲ್ಲಿ ಬರುತ್ತಿದ್ದವರಿಗೆ ಕೈ ತೋರಿಸಿ ಲಿಫ್ಟ್ ಕೇಳಿದ್ದಾನೆ. ಈ ವೇಳೆ ಉತ್ತರಿಸಿದ್ದ ಯುವರು, ಈಗಾಗಲೇ ಬೈಕಿನಲ್ಲಿ ಇಬ್ಬರಿದ್ದೇವೆ. ಹಾಗಾಗಿ, ಡ್ರಾಪ್ ಕೊಡಲು ಆಗುವುದಿಲ್ಲ ಎಂದು ತಿಳಿಸಿ ಮುಂದೆ ಸಾಗಿದ್ದಾರೆ. ಆ ಬಳಿಕ ಯುವಕರನ್ನು ಹಿಂಬಾಲಿಸಿಕೊಂಡು ಬಂದಿದ್ದ ಕಿರಣ್, ಬೈಕಿನಲ್ಲಿ ಡ್ರಾಪ್ ಕೊಡದ್ದನ್ನೇ ನೆಪ ಮಾಡಿಕೊಂಡು ವಾಗ್ವಾದ ನಡೆಸಿದ್ದಾನೆ. ವಾಗ್ವಾದ ಮಾಡಿದ್ದಲ್ಲದೇ ಬೈಕಿನ ಕೀ ಕಸಿದುಕೊಂಡು, ಹಲ್ಲೆ ಕೂಡ ನಡೆಸಿದ್ದಾನೆ.

ಇದೇ ಸಂದರ್ಭದಲ್ಲಿ ಪಕ್ಕದ ರೂಮಿನಲ್ಲಿದ್ದ ಸಂತ್ರಸ್ತ ಗಾಯಾಳು ಅಬ್ದುಲ್ ಲತೀಫ್ ಅವರು ಶಾಫಿ ಮಸೀದಿಯ ಬಳಿಯಲ್ಲಿ ವಾಸವಿದ್ದು, ಏನೋ ಗಲಾಟೆ ಆಗುತ್ತಿದೆ ಎಂದು ಮಸೀದಿಯಿಂದ ಹೊರಗಡೆ ಬಂದು ವಿಚಾರಿಸಿದ್ದಾರೆ. ಈ ವೇಳೆ ಉದ್ರಿಕ್ತನಾದ ಆರೋಪಿ ಕಿರಣ್ ತನ್ನ ಕೈಯ್ಯಲ್ಲಿದ್ದ ಟೀ ಕಪ್‌ನಿಂದ ಲತೀಫ್ ಅವರಿಗೂ ಹಲ್ಲೆ ನಡೆಸಿದ್ದಾನೆ.

Capture 29

ಹಲ್ಲೆ ನಡೆಸಿದ ಪರಿಣಾಮ ಲತೀಫ್ ಅವರ ಮುಖಕ್ಕೆ ಗಂಭೀರ ಗಾಯವಾಗಿ, ರಕ್ತ ಕೂಡ ಬಂದಿದೆ. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಯಿತು. ಹಲ್ಲೆ ನಡೆಸಿರುವ ದೃಶ್ಯವು ಸ್ಥಳೀಯ ಮಸೀದಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಸ್ಥಳಕ್ಕಾಗಮಿಸಿದ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಪದಾಧಿಕಾರಿಗಳು, ಆರೋಪಿಯನ್ನು ಕೂಡಲೇ ಬಂಧಿಸುವಂತೆ ಪೊಲೀಸರಲ್ಲಿ ಒತ್ತಾಯಿಸಿದ್ದಾರೆ. ಆ ಬಳಿಕ ಗಂಗಮ್ಮನ ಗುಡಿ ಪೊಲೀಸರು, ಮನೆಯಲ್ಲಿದ್ದ ಅಡಗಿ ಕೂತಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಂಡು, ಘಟನೆಯ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಹಲ್ಲೆಗೊಳಗಾದ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ಬೆಂಗಳೂರಿನ ವಕೀಲೆ ಸೌಧ ಅಕ್ಕರಂಗಡಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ. ಹಲ್ಲೆ ಘಟನೆಯನ್ನು ಬ್ಯಾರಿಸ್ ಸೆಂಟ್ರಲ್ ಕಮಿಟಿಯು ಖಂಡಿಸಿದ್ದು, ದೂರದ ಊರಿನಿಂದ ಬಂದು ದುಡಿಯುತ್ತಿರುವವರಿಗೆ ಈ ರೀತಿಯಲ್ಲಿ ವಿನಾಃಕಾರಣ ಹಲ್ಲೆ ನಡೆಸುವವರಿಗೆ ಪ್ರವೃತ್ತಿಗೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...