ದಾವಣಗೆರೆ | ಆರ್‌ಟಿಐ ಕಾರ್ಯಕರ್ತ ಸಾವು ಪ್ರಕರಣ; ಇಬ್ಬರು ಪೊಲೀಸರು ಅಮಾನತು

Date:

ಪೊಲೀಸರ ವಶದಲ್ಲಿದ್ದಾಗ ಆರ್‌ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಹಿನ್ನೆಲೆ ಚನ್ನಗಿರಿ ತಾಲೂಕಿನ ಗಾಂಧಿನಗರ ಠಾಣೆಯ ಪಿಎಸ್ಐ ಕೃಷ್ಣಪ್ಪ ಮತ್ತು ಪೇದೆ ದೇವರಾಜ್ ಎಂಬುವರನ್ನು ಅಮಾನತು ಮಾಡಲಾಗಿದೆ.

ನಿವೇಶನಗಳನ್ನು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಳ್ಳಲು ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ದಾಖಲಾಗಿದ್ದ ಪ್ರಕರಣದ ವಿಚಾರಣೆಗಾಗಿ ಪೊಲೀಸರು ಹರೀಶ್ ಹಳ್ಳಿ ಅವರನ್ನು ಭಾನುವಾರ ತಡರಾತ್ರಿ ಕಾಕನೂರಿನಲ್ಲಿ ವಶಕ್ಕೆ ಪಡೆದು ಕಾರಿನಲ್ಲಿ ದಾವಣಗೆರೆಗೆ ಕರೆದುಕೊಂಡು ಬರುತ್ತಿದ್ದರು.

ತೋಳಹುಣಸೆ ಬಳಿ ಬಂದಾಗ ಹರೀಶ್ ಅವರು ತಪ್ಪಿಸಿಕೊಂಡು ಮೇಲೇತುವೆಯಿಂದ ಜಿಗಿದು ಸರ್ವೀಸ್‌ ರಸ್ತೆಗೆ ಬಿದ್ದಿದ್ದರಿಂದ ಗಾಯಗೊಂಡು ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು. ಆದರೆ, ತಮ್ಮ ಪತಿಯನ್ನು ಪೊಲೀಸರೇ ಕೊಲೆ ಮಾಡಿದ್ದಾರೆ ಎಂದು ಹರೀಶ್ ಪತ್ನಿ ಕೆ ಆರ್ ಲತಾ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪೊಲೀಸರು ಬಂಧಿಸಿ ಕರೆತರುವಾಗ ಸೇತುವೆಯಿಂದ ಬಿದ್ದು ಆರ್‌ಟಿಐ ಕಾರ್ಯಕರ್ತ ಸಾವು

“ನಕಲಿ ದಾಖಲೆ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಕೊಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಬಲವಾದ ಸಾಕ್ಷಿ ಇಲ್ಲದಿರುವುದರಿಂದ ಕರ್ತವ್ಯದಲ್ಲಿದ್ದ ಪೊಲೀಸರನ್ನು ಇನ್ನೂ ಬಂಧಿಸಿಲ್ಲ. ಸದ್ಯಕ್ಕೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್ ತಿಳಿಸಿದ್ದಾರೆ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...