ದಕ್ಷಿಣ ಕನ್ನಡ | ಸುಹಾಸ್ ಶೆಟ್ಟಿ ಹತ್ಯೆ; ಜಿಲ್ಲೆಯ ಎರಡು ಸ್ಥಳಗಳಲ್ಲಿ ಇಬ್ಬರಿಗೆ ಚೂರಿ ಇರಿತ

Date:

ರೌಡಿಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಸ್ಥಳಗಳಲ್ಲಿ ಯುವಕರ ಮೇಲೆ ಚೂರಿ ಇರಿತ ನಡೆದಿದೆ. ಅಡ್ಯಾರ್ ಕಣ್ಣೂರು ಮತ್ತು ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯಲ್ಲಿ ಯುವಕರಿಗೆ ಚೂರಿ ಇರಿಯಲಾಗಿದೆ ಎಂಬ ಮಾಹಿತಿ ಲಭಿಸಿದೆ.

- Advertisement -

ಮಂಗಳೂರು ಕಮಿಷನರ್ ವ್ಯಾಪ್ತಿಯ ಅಡ್ಯಾರ್ ಕಣ್ಣೂರು ಎಂಬಲ್ಲಿ ಬೈಕ್‌ನಲ್ಲಿ ಬಂದ ತಂಡವೊಂದು ಯುವಕನೋರ್ವನಿಗೆ ಚೂರಿ ಇರಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಯುವಕ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ರೌಡಿಶೀಟರ್ ಹತ್ಯೆ ಹಿನ್ನೆಲೆ: ಸಂಘಪರಿವಾರದಿಂದ ಶುಕ್ರವಾರ ದ.ಕ. ಜಿಲ್ಲಾ ಬಂದ್‌ಗೆ ಕರೆ

ಅಡ್ಯಾರ್ ಕಣ್ಣೂರು ನಿವಾಸಿ ನೌಶಾದ್ ಎಂಬಾತ ತೊಕ್ಕೋಟು ಕಲ್ಲಾಪಿನ ಗ್ಲೋಬಲ್ ಮಾರುಕಟ್ಟೆಗೆ ತೆರಳಲು ಮುಂಜಾನೆ 3 ಗಂಟೆಗೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿರುವಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಫೋಟೋ

ಎರಡು ಬೈಕ್‌ನಲ್ಲಿ ಬಂದ ನಾಲ್ವರ ತಂಡ ಚೂರಿಯಿಂದ ದಾಳಿಗೆ ಮುಂದಾಗಿದ್ದು ಈ ವೇಳೆ ಅಪಾಯವನ್ನು ಅರಿತ ನೌಶಾದ್ ಓಡಿ ಪಾರಾಗಿದ್ದಾನೆ ಎನ್ನಲಾಗಿದೆ. ಇರಿತದಿಂದ ನೌಶಾದ್ ಬೆನ್ನಿಗೆ ಅಲ್ಪ ಪ್ರಮಾಣದ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯಲ್ಲಿ ಫೈಝಲ್ ಎಂಬ ಯುವಕನಿಗೆ ಚೂರಿ ಇರಿಯಲಾಗಿದ್ದು, ಬೆನ್ನಿಗೆ ಗಾಯವಾಗಿದೆ. ಫೈಝಲ್ ಕೂಡಾ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...