ವಿಧಾನಸಭೆ ಸ್ವೀಕರ್‌ ಸ್ಥಾನಕ್ಕೆ ಯು ಟಿ ಖಾದರ್‌ ನಾಮಪತ್ರ ಸಲ್ಲಿಕೆ; ಅವಿರೋಧ ಆಯ್ಕೆ ಸಾಧ್ಯತೆ

Date:

Advertisements
  • ಮೇ 24 ರಂದು ವಿಧಾನ ಸಭಾಧ್ಯಕ್ಷರ ಆಯ್ಕೆ ನಡೆಯಲಿದೆ
  • ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಯು ಟಿ ಖಾದರ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ಸಮ್ಮುಖದಲ್ಲಿ ವಿಧಾನಸಭೆ ಸ್ವೀಕರ್‌ ಸ್ಥಾನಕ್ಕೆ ಕಾಂಗ್ರೆಸ್‌ ಶಾಸಕ ಯು ಟಿ ಖಾದರ್ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಯು ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅನುಮೋದಿಸಿದ ಅರ್ಜಿಯನ್ನು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಸಲ್ಲಿಸಿದರು.

ಎಚ್ ಕೆ ಪಾಟೀಲ, ಆರ್ ವಿ ದೇಶಪಾಂಡೆ ಸೇರಿದಂತೆ ಹಿರಿಯ ಶಾಸಕರ ಪೈಕಿ ಒಬ್ಬರನ್ನು ಸಭಾಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ವರಿಷ್ಠರು ಮುಂದಾಗಿದ್ದರು. ಆದರೆ, ಅವರು ಯಾರೂ ಸ್ಥಾನ ವಹಿಸಿಕೊಳ್ಳಲು ಮುಂದಾಗದ ಕಾರಣ ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ. ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಲಹೆಯಂತೆ ಸಭಾಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಖಾದರ್ ಒಪ್ಪಿದ್ದಾರೆ.

Advertisements

ಯು ಟಿ ಖಾದರ್‌ ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಮೇ 24 ರಂದು ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಹಿರಿಯ ನಾಯಕ ಆರ್‌ ವಿ ದೇಶಪಾಂಡೆ ಈಗ ಹಂಗಾಮಿ ಸ್ಪೀಕರ್ ಆಗಿದ್ದಾರೆ.

ಯು ಟಿ ಖಾದರ್ ವ್ಯಕ್ತಿ ಪರಿಚಯ

1969ರ ಅಕ್ಟೋಬರ್‌ 12ರಂದು ಜನಿಸಿದ ಯು ಟಿ ಅಬ್ದುಲ್ ಖಾದರ್ ಫರೀದ್ ಅವರ ತಂದೆ ಹೆಸರು ಯು ಟಿ ಫರೀದ್ ಮತ್ತು ತಾಯಿ ಯು ಟಿ ನಸೀಮಾ ಫರೀದ್ ಇವರು ಬಿ.ಎ ಎಲ್‌ಎಲ್‌ಬಿ ವಿದ್ಯಾರ್ಹತೆ ಹೊಂದಿದ್ದಾರೆ. ಯು ಟಿ ಖಾದರ್ ಅವರು ಪದವಿ ಪೂರ್ವ ಶಿಕ್ಷಣವನ್ನು ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಕಲಿತು ನಂತರ ಎಸ್‌ಡಿಎಂ ಕಾಲೇಜಿನಲ್ಲಿ ಬಿ.ಎ ಎಲ್ಎಲ್‌ಬಿ ಪದವಿ ಶಿಕ್ಷಣ ಮುಗಿಸಿದರು.

ರಾಜಕೀಯವಾಗಿ ನಡೆದು ಬಂದ ದಾರಿ

1990ರಲ್ಲಿ ಎನ್‌ಎಸ್‌ಯುಐ ದಕ್ಷಿಣಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, 1994 ರಿಂದ 1999ರ ವರೆಗೆ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷರಾಗಿ, 1999 ರಿಂದ 2001ರ ವರೆಗೆ ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 2003 ರಲ್ಲಿ ಘಟಪ್ರಭದಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ, 2004 ರಲ್ಲಿ ಹಿಮಾಚಲ ಪ್ರದೇಶದ ಕಂದಘಾಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ ಭಾಗವಹಿಸಿ 2005ರಲ್ಲಿ ಸೇವಾದಳದ ಹೆಚ್ಚುವರಿ ಮುಖ್ಯ ಸಲಹೆಗಾರರಾಗಿ ಆಯ್ಕೆಯಾಗಿದ್ದರು. ನಂತರ ಕೆಪಿಸಿಸಿ ಸದಸ್ಯರಾಗಿ 2008 ರಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾದರು.

2008 ರಲ್ಲಿ ತಮ್ಮ ತಂದೆಯ ನಿಧನದಿಂದ ತೆರವಾದ ಶಾಸಕ ಸ್ಥಾನಕ್ಕೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ನಂತರ 2008, 2013, 2018 ಹಾಗೂ 2023ರಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾದರು. ಅಲ್ಲದೆ ತಾವು ಶಾಸಕರಾಗಿದ್ದ 2008 ರಿಂದ 2013 ರ ಅವಧಿಯ ವಿಧಾನಸಭೆಯ ಅತ್ಯುತ್ತಮ ಕಾರ್ಯ ವೈಖರಿಗಾಗಿ ಸದನ ವೀರ ಹಾಗೂ ಶೈನಿಂಗ್ ಇಂಡಿಯಾ ಅವಾರ್ಡ್ ಪ್ರಶಸ್ತಿ ಗಳಿಸಿದರು.

2013ರ ಸಿದ್ದರಾಮಯ್ಯ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿ 2016ರ ತನಕ ಕಾರ್ಯ ನಿರ್ವಹಿಸಿದರು. ಈ ಅವಧಿಯಲ್ಲಿ ರಾಜ್ಯದಲ್ಲಿ ಗುಟ್ಕಾ ನಿಷೇಧ, ಬೈಕ್ ಆಂಬ್ಯುಲೆನ್ಸ್, 108, ಆರೋಗ್ಯಶ್ರೀ, ದಂತ ಭಾಗ್ಯ, ಸರ್ಕಾರಿ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕ, ಹರೀಶ್ ಸಾಂತ್ವನ ಯೋಜನೆ ಮುಂತಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದು ಕೇಂದ್ರ ಸರ್ಕಾರ ನೀಡುವ ಉತ್ತಮ ಆರೋಗ್ಯ ಸಚಿವ ಪ್ರಶಸ್ತಿ ಕೂಡ ತನ್ನದಾಗಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಹಿಂದಿನ ಸರ್ಕಾರದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡದಂತೆ ಸಿಎಂ ಸಿದ್ದರಾಮಯ್ಯ ನಿರ್ದೇಶನ

2016 ರಿಂದ 2018ರ ವರೆಗೆ ಆಹಾರ ಸಚಿವರಾಗಿ ಅಧಿಕಾರ ಸ್ವೀಕರಿಸಿ, ಬಡವರು ಪಡಿತರ ಚೀಟಿಗಾಗಿ ಸಲ್ಲಿಸಬೇಕಾಗಿದ್ದ 10 ರಿಂದ 13 ದಾಖಲೆಗಳನ್ನು ಕಡಿತಗೊಳಿಸಿ ಕೇವಲ ಆಧಾರ್ ಕಾರ್ಡ್ ಮೂಲಕ ಅರ್ಜಿ ಸಲ್ಲಿಸಿ ಮನೆ ಬಾಗಿಲಿಗೆ ರೇಷನ್ ಕಾರ್ಡ್ ತಲುಪಿಸುವ ಯೋಜನೆಗೆ ಚಾಲನೆ ನೀಡಿದರು. ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಿದ್ದ ಆದಾಯ ಮಿತಿಯನ್ನು ಕಡಿತಗೊಳಿಸಿ ಬಿಪಿಎಲ್ ಕಾರ್ಡ್ ನಿಂದ ವಂಚಿತರಾಗಿದ್ದ ಲಕ್ಷಾಂತರ ಮಂದಿ ರೇಷನ್ ಕಾರ್ಡ್ ಪಡೆಯಲು ನೆರವಾದರು.

2018 ರ ಮೈತ್ರಿ ಸರ್ಕಾರದಲ್ಲಿ ನಗರಾಭಿವೃದ್ಧಿ, ವಸತಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ಮಂಗಳೂರು ಸ್ಮಾರ್ಟ್ ಸಿಟಿ ಸಹಿತ ಅನೇಕ ಯೋಜನೆಗಳನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ವಸತಿ ನಿಗಮದ ಅಧ್ಯಕ್ಷರಾಗಿ, ಕರ್ನಾಟಕ ನಗರನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ, ರಾಜೀವ್ ಗಾಂಧಿ ಹೌಸಿಂಗ್ ಬೋರ್ಡ್ ನ ಅಧ್ಯಕ್ಷರಾಗಿ, ಕರ್ನಾಟಕ ಕೊಳಗೇರಿ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2021 ರಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿ 2023ರ ವರೆಗೆ ಕಾರ್ಯ ನಿರ್ವಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

Download Eedina App Android / iOS

X