ಉಡುಪಿ | ತುರ್ತು ಸಂದರ್ಭದಲ್ಲೂ ಸಿಗದ 108 ಆಂಬುಲೆನ್ಸ್ ! ಗೂಡ್ಸ್ ಟೆಂಪೋದಲ್ಲಿ ರೋಗಿ ಆಸ್ಪತ್ರೆಗೆ

Date:

ಉಡುಪಿ ನಗರದ ಉದ್ಯಾವರದಲ್ಲಿ ಅಸ್ವಸ್ಥ ಗೊಂಡ ರೋಗಿಯೊಬ್ಬರಿಗೆ ರಾತ್ರಿ 7:00ಯಿಂದ 9 ಗಂಟೆ 30 ನಿಮಿಷದವರೆಗೆ ಅಂಬುಲೆನ್ಸ್ ಸಿಗದೆ ರೋಗಿ ಚಿಂತಾ ಜನಕ ಪರಿಸ್ಥಿತಿ ತಲುಪಿದಾಗ ವಿಶು ಶೆಟ್ಟಿ ಅಂಬಲಪಾಡಿ ತನ್ನ ಗೂಡ್ಸ್ ಟೆಂಪೋದಲ್ಲಿ ಮಂಚ ಇರಿಸಿ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.

- Advertisement -

ರೋಗಿಯ ಸಂಬಂಧಪಟ್ಟವರು108 ಅಂಬುಲೆನ್ಸ್ ಗೆ ಕರೆ ಮಾಡಿದಾಗ ಅಂಬುಲೆನ್ಸ್ ಲಭ್ಯವಿರಲಿಲ್ಲ. ಖಾಸಗಿ ಅಂಬುಲೆನ್ಸ್ ಗಳು ಕೂಡ ಲಭ್ಯವಿರದಿರುವುದರಿಂದ ರೋಗಿಯ ಕಡೆಯವರು ವಿಶು ಶೆಟ್ಟಿ ಅವರು ಸಂಪರ್ಕಿಸಿದ್ದಾರೆ. ವಿಶು ಶೆಟ್ಟಿ ಕೂಡ ಖಾಸಗಿ ಆಂಬುಲೆನ್ಸ್ ಸಂಪರ್ಕಿಸಿ ಸಿಗದೇ ಇರುವುದರಿಂದ ರೋಗಿ ತೀರ ಚಿಂತಾ ಜನಕ ಪರಿಸ್ಥಿತಿ ತಲುಪಿದ್ದರಿಂದ ಬೇರೆ ದಾರಿ ಕಾಣದೆ ತನ್ನ ಗೂಡ್ಸ್ ಟೆಂಪೋ ಗೆ ಮಂಚ ಇರಿಸಿ ಅದರ ಮುಖಾಂತರ ರೋಗಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಬೇಕಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಈ ಬಗ್ಗೆ ವಿಶು ಶೆಟ್ಟಿ ಅಂಬಲಪಾಡಿ ಪ್ರತಿಕ್ರಿಯಿಸಿದ್ದು, ಕಳೆದ ಒಂದು ವರುಷದಿಂದ 108 ಅಂಬುಲೆನ್ಸ್ ಸರಿಯಾಗಿ ಲಭ್ಯ ಇಲ್ಲದಿರುವುದರಿಂದ ನೂರಾರು ರೋಗಿಗಳು ಮೃತಪಟ್ಟಿದ್ದಾರೆ. ಈ ಬಗ್ಗೆ ನಾನು ಕಳೆದ ಒಂದು ವರ್ಷದಿಂದ ಸರಕಾರದ ಗಮನಕ್ಕೆ ತಂದರು ಯಾವುದೇ ಪ್ರಯೋಜನ ಆಗಲಿಲ್ಲ. ಈ ಘಟನೆಯಲ್ಲಿ ಕೂಡ ಎರಡುವರೆ ಗಂಟೆ ಅಂಬುಲೆನ್ಸ್ ಸಿಗದೇ ರೋಗಿ ಚಿಂತಾ ಜನಕ ಪರಿಸ್ಥಿತಿ ತಲುಪಿದ್ದು ವಿಧಿ ಇಲ್ಲದೆ ಗೂಡ್ಸ್ ಟೆಂಪೋದಲ್ಲಿ ರೋಗಿಯನ್ನು ಕರೆದುಕೊಂಡು ಹೋಗಬೇಕಾಯಿತು ಇನ್ನಾದರೂ ಸರಕಾರ ಜಿಲ್ಲಾಡಳಿತ ಈ ಬಗ್ಗೆ ಕ್ರಮ ತೆಗೆದುಕೊಂಡು ಸಹಕರಿಸಬೇಕು ಸಾರ್ವಜನಿಕರ ಪ್ರಾಣವನ್ನು ನಿರ್ಲಕ್ಷಿಸಬಾರದು ಉಡುಪಿ ಜಿಲ್ಲೆಯಲ್ಲಿ 108 ಆಂಬುಲೆನ್ಸ್ 18 ಇದ್ದರೂ ಸೇವೆಗೆ ಸಿಗುವುದು ಐದರಿಂದ ಆರು ಮಾತ್ರ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಾನಪದ ನೃತ್ಯ, ನಾಟಕ ಸ್ಪರ್ಧೆಯಲ್ಲಿ ಯರಗೋಳ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನ

ತಾಲೂಕು ಮಟ್ಟದ ಜಾನಪದ ನೃತ್ಯ ಮತ್ತು ನಾಟಕ ಸ್ಪರ್ಧೆಗಳಲ್ಲಿ ಯರಗೋಳ ಸರ್ಕಾರಿ...

ಕಲಬುರಗಿ | ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ...

ಕಲಬುರಗಿ | ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಮೇಲ್ಮಟ್ಟದ ತಂತಿಗಳ ಜಾಲವನ್ನು...

ವಿಜಯಪುರ |ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ;ಡಿಸಿ ಆನಂದ ಕೆ

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು....