ಉಡುಪಿ | ಗಂಡನನ್ನೇ ಕೊಂದ ಪ್ರಕರಣ; ಹಣದ ಪ್ರಭಾವದಿಂದ ಕೇಸ್‌ ಮುಚ್ಚಿಹಾಕುವ ಹುನ್ನಾರ

Date:

ಕಾರ್ಕಳದ ಅಜೆಕಾರಿನಲ್ಲಿ ಪ್ರಿಯತಮನ ಜೊತೆ ಸೇರಿ ಗಂಡನನ್ನೇ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಸಾಕ್ಷಿಗಳು ಸಿಕ್ಕಿದರೂ ಕೂಡಾ ಕೊಲೆಗಡುಕರನ್ನು ಪೊಲೀಸರು ರಕ್ಷಿಸುವ ಕೆಲಸ ನಡೆಸುತ್ತಿದ್ದಾರೆ ಎಂದು ಕೊಲೆಯಾದ ಬಾಲಕೃಷ್ಣ ಪೂಜಾರಿ ಸಹೋದರ ಪ್ರಕಾಶ್ ಆರೋಪಿಸಿದ್ದಾರೆ.

- Advertisement -

ಉಡುಪಿಯಲ್ಲಿ ಸೋಮವಾರ ಬೆಳಿಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮಗೆ ಪೊಲೀಸ್ ಇಲಾಖೆ ಮೇಲೆ ಅನುಮಾನ ಬರುತ್ತಿದ್ದು, ಈ ತನಿಖೆ ನಮಗೆ ಬೇಜಾರು ತರುವ ರೀತಿಯಲ್ಲಿ ಹೋಗುತ್ತಿದೆ. ಇಷ್ಟೆಲ್ಲಾ ಸಾಕ್ಷ್ಯಾಧಾರಗಳು ಸಿಕ್ಕಿದರೂ ಕೂಡಾ ಇಲಾಖೆಯವರು ಈ ಪ್ರಕರಣವನ್ನು ವೇಗವಾಗಿ ಮುಗಿಸುತ್ತಿಲ್ಲ. ಹಣದ ಪ್ರಭಾವದಿಂದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದೆ. ಆರೋಪಿಯ ತಂದೆ ಸೂಟ್‌ಕೇಸ್ ಹಿಡಿದುಕೊಂಡು ಕಾರ್ಕಳ ಡಿವೈಎಸ್‌ಪಿ ಹಿಂದೆ ಸುತ್ತುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
ಗಂಡನನ್ನೇ ಕೊಂದ ಪ್ರಕರಣ

“ಸರಿಯಾದ ತನಿಖೆ ಮಾಡದೆ ಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಕರಣವನ್ನು ಮುಚ್ಚಲು ಪ್ರಯತ್ನಿಸಿದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದು ಖಚಿತ” ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ದುಷ್ಕರ್ಮಿಗಳ ತಂಡದಿಂದ ಯುವಕನ ಹತ್ಯೆ

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಕೆ ಅರುಣ್ ಕುಮಾರ್ ಅವರನ್ನು ಕುಟುಂಬದ ಸದಸ್ಯರು ಭೇಟಿಯಾಗಿ ಆರೋಪಗಳಿಗೆ ಕಾನೂನಿನಡಿಯಲ್ಲಿ ಸರಿಯಾದ ಶಿಕ್ಷೆಯಾಗುವಂತೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಕೊಲೆಯಾದ ಬಾಲಕೃಷ್ಣ ಪೂಜಾರಿಯ ತಂದೆ ಸಂಜೀವ ಪೂಜಾರಿ, ಸಹೋದರಿ ಶಶಿರೇಖಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...