ಉಡುಪಿ | ಹೆಚ್ಚುವರಿ ಪಾನಿಪೂರಿ ವಿಚಾರಕ್ಕೆ ಜಗಳ : ಪ್ರಕರಣ ದಾಖಲು

Date:

ಬೀಚ್ ಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗರು ಪಾನಿಪೂರಿ ತಿನ್ನುವ ವೇಳೆ ಒಂದು ಹೆಚ್ಚುವರಿ ಪಾನಿಪೂರಿ ಕೇಳಿದ್ದಕ್ಕೆ ಅಂಗಡಿಯವರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿರುವ ಘಟನೆ ಮಲ್ಪೆ ಬೀಚ್ ಬಳಿ ಮಂಗಳವಾರ ರಾತ್ರಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

- Advertisement -

ಮಲ್ಪೆ ಬೀಚ್‌ ಬಳಿಯ ಪಾನಿಪೂರಿ ಅಂಗಡಿಯೊಂದರಲ್ಲಿ ಮಂಗಳವಾರ ರಾತ್ರಿ 8:30ರ ಸುಮಾರಿಗೆ ಪಾನಿಪೂರಿ ತಿನ್ನುವ ವೇಳೆ ಹೆಚ್ಚುವರಿಯಾಗಿ ಒಂದು ಪಾನಿ ಪೂರಿ ನೀಡುವಂತೆ ಕೇಳಿದ ವಿಚಾರಕ್ಕೆ ಮಾತಿನ ಚಕಮಕಿ ನಡೆದು ಪ್ರವಾಸಕ್ಕೆ ಬಂದಿದ್ದ ಮಂಡ್ಯ ಜಿಲ್ಲೆಯ ಪ್ರವಾಸಿಗರಿಗೆ ಮತ್ತು ಸ್ಥಳೀಯ ಪಾನಿಪೂರಿ ಅಂಗಡಿಯ ಎರಡೂ ಕಡೆಯವರಿಂದ ಹಲ್ಲೆ ನಡೆದಿದ್ದು ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಲಾಟೆ ಸಂಬಂಧ ಮಲ್ಪೆ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 71/2025 ಕಲಂ: 189(2), 191(2), 191(3), 115(2), 118(1), 352, 351 (2) ಜೊತೆಗೆ 190 BNS ಮತ್ತು 72/2025, ಕಲಂ: 189(2),191(2), 191(3), 115(2), 118(1), 352, 351 (2) ಜೊತೆಗೆ 190 BNS ರಂತೆ ಪ್ರಕರಣ ದಾಖಲಾಗಿರುತ್ತದೆ.

ಇದನ್ನು ಓದಿದ್ದೀರಾ ? ವಾಲ್ಮೀಕಿ ಹಗರಣ | ಸಂಸದ ತುಕಾರಾಂ, ಶಾಸಕರಾದ ಭರತ್ ರೆಡ್ಡಿ, ಗಣೇಶ್‌ ನಿವಾಸದ ಮೇಲೆ ಇಡಿ ದಾಳಿ

ಈ ಎರಡು ಪ್ರಕರಣಗಳು ಕೇಸ್ ಮತ್ತು ಕೌಂಟರ್‌ ಕೇಸ್‌ ಆಗಿದ್ದು, ಮೊದಲ ಪ್ರಕರಣದ ಆರೋಪಿಗಳಾದ ಸುದೀಪ, ಸಂಪತ್, ಪುನೀತ, ಮಹೇಶ, ಕನ್ನ ವೈಜಿ ಅರವಿಂದ ಹಾಗೂ ಎರಡನೇ ಪ್ರಕರಣದ ಆರೋಪಿಗಳಾದ ರಮೇಶ, ಮೋನು, ವಿನೋದ್ ಎಂಬಾತನನ್ನು ‌ಪೊಲೀಸರು ದಸ್ತಗಿರಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...