ಉಡುಪಿ | ಅಬ್ಬಕ್ಕಳ ಧೈರ್ಯ, ಸಾಹಸ ಆದರ್ಶವಾಗಬೇಕು ; ವಸಂತ್ ಕುಮಾರ್

Date:

Advertisements

ರಾಣಿ ಅಬ್ಬಕ್ಕರವರ ಬದುಕಿನ ಬಗೆಗೆ ಇಂದಿನ ಯುವಪೀಳಿಗೆ ಅರಿತು, ಅವರ ಧೈರ್ಯ, ಸಾಹಸ, ದೇಶಪ್ರೇಮವನ್ನು ತಮ್ಮೊಳಗೆ ಮೈಗೂಡಿಸಿಕೊಳ್ಳಬೇಕು ಎಂದು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ| ವಸಂತ್ ಕುಮಾರ್ ಅಭಿಪ್ರಾಯಪಟ್ಟರು.

ಅವರು ಗುರುವಾರ, ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾಸಂಘದ ಜಂಟಿ ಆಶ್ರಯದಲ್ಲಿ ನಡೆದ “ರಾಣಿ ಅಬ್ಬಕ್ಕ – ಯುಗಯುಗಗಳಿಂದ ಧೈರ್ಯದ ಪ್ರತಿಧ್ವನಿ” ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಣಿ ಅಬ್ಬಕ್ಕೆ ಮೂಡಬಿದ್ರೆಯ ಚೌಟ ಮನೆತನಕ್ಕೆ ಸೇರಿದವರಾಗಿದ್ದು, 1525 ರಲ್ಲಿ ಜನಿಸಿದ್ದಾರೆ ಎಂದು ಇತಿಹಾಸಕಾರರು ಉಲ್ಲೇಖಿಸಿದ್ದಾರೆ. ಆದರೆ ಈ ಬಗ್ಗೆ ಅನೇಕ ದ್ವಂದ್ವಗಳಿದೆ. ಆದರೆ ಆಕೆ 40 ವರ್ಷ ನಿರಂತರವಾಗಿ ಪೋರ್ಚುಗೀಸರ ವಿರುದ್ದ ಹೋರಾಡಿರುವುದು ಸುಳ್ಳಲ್ಲ. ಇದು ಮೊದಲ ಸ್ವಾತಂತ್ರ್ಯ ಸಂಗ್ರಾಮ ಎಂದವರು ಬಣ್ಣಿಸಿದರು.

ಮೊದಲ ಬಾರಿಗೆ ನೌಕ ಪಡೆಯನ್ನು ಕಟ್ಟಿ, ಪೋರ್ಚುಗೀಸರಿಗೆ ಸೋಲಿನ ರುಚಿಯನ್ನು ಉಣಿಸಿದ ವೀರ ಮಹಿಳೆ ಅಬ್ಬಕ್ಕ. ಅವರ ಸಾಹಸಗಾಥೆಯನ್ನು ಓದಿ ಇಂದಿನ ಯುವಪೀಳಿಗೆ ಧೈರ್ಯ, ಸಾಹಸವನ್ನು ಕರಗತಮಾಡಿಕೊಳ್ಳಬೇಕು. ಮೊಬೈಲ್ ಎಂಬ ಮಾಯಜಾಲದೊಳಗೆ ಇಂತಹ ಅನೇಕ ಸಂಗತಿಗಳು ಅಡಗಿವೆ. ಕೇವಲ “ಪಬ್ಜಿ” ಆಟ, ಮನರಂಜನೆಗಾಗಿ ಮೊಬೈಲನ್ನು ಬಳಸದೇ, ಇಂತಹ ದೇಶಪ್ರೇಮದ ಸಂಗತಿಯನ್ನು ತಿಳಿಯಲು ಬಳಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳನ್ನು ಹೇಳುವಾಗ, ನಾವುಗಳು ಅನೇಕ ಹೋರಾಟಗಾರರ ಹೆಸರನ್ನು ಉಲ್ಲೇಖಿಸುತ್ತೇವೆ. ಆದರೆ ನಮ್ಮದೇ ನೆಲದ ಗಟ್ಟಿಗಿತ್ತಿ, ಸಿಂಹಿಣಿಯಂತೆ ಬದುಕಿದ ರಾಣಿ ಅಬ್ಬಕ್ಕಳ ಬಗ್ಗೆ ನಮಗೆಷ್ಟು ತಿಳಿದಿದೆ ಎಂದು ನಾವು ಪ್ರಶ್ನಿಸಿಕೊಳ್ಳಬೇಕು. ಇತಿಹಾಸದ ಅಧ್ಯಯನ ಅತೀ ಅಗತ್ಯ. ಅದರಲ್ಲೂ ನಮ್ಮ ನೆಲದ ಹೋರಾಟಗಾರರ ಬಗ್ಗೆ ನಾವು ಅಧ್ಯಯನ ನಡೆಸಿ, ಸಾಧ್ಯವಾದಷ್ಟು ಜ್ಞಾನವನ್ನು ಇತರರಿಗೆ ಧಾರೆ ಎರೆಯಬೇಕು ಎಂದು ನುಡಿದರು.

ಕಾಲೇಜಿನ ಪ್ರಾಂಶುಪಾಲೆ ಸುರೇಖಾ. ಕೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿಯರಾದ ರಕ್ಷಿತಾ ಸ್ವಾಗತಿಸಿ, ದಿಶಾ ಭಟ್ ನಿರೂಪಿಸಿ, ವಂದಿಸಿದರು. ಪ್ರಾಧ್ಯಾಪಕಿ ಚೈತ್ರಾ ಕುಮಾರಿ ನಿರ್ವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X