ಉಡುಪಿ ನಗರದ ಬಾರ್‌ವೊಂದರ ಮಾಲೀಕರ ಮನೆಯಲ್ಲಿ ಎಸಿ ಸ್ಫೋಟದಿಂದ ಉಂಟಾದ ಅಗ್ನಿ ಅವಘಡದಲ್ಲಿ ಬಾರ್ ಮಾಲೀಕ ಮೃತಪಟ್ಟಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮನೆಯ ಬೆಡ್‌ರೂಮ್‌ನ ಎಸಿ ಬ್ಲಾಸ್ಟ್ ಆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್‌ನ ಮಾಲೀಕ ರಮಾನಂದ ಶೆಟ್ಟಿ(52) ಅವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಮಾನಂದ ಅವರ ಪತ್ನಿ ಅಶ್ವಿನಿ ಅವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕಾಕಲವಾರ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣ; ಪಿಡಿಒ ಅಮಾನತು
ಅಗ್ನಿ ಅವಘಡದಲ್ಲಿ ಮನೆಯು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮನೆಯ ಮಹಡಿಯಲ್ಲಿದ್ದ ಮಕ್ಕಳಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದರು.
