ಉಡುಪಿ‌ | ಅಂಬಲಪಾಡಿ ಹೆದ್ದಾರಿಯಲ್ಲಿ ಬೈಕ್ -ಲಾರಿ ಡಿಕ್ಕಿ: ಸವಾರರಿಗೆ ಗಂಭೀರ ಗಾಯ

Date:

ಉಡುಪಿ‌ ನಗರದ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ, ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

- Advertisement -

ಮಾಹಿತಿ ತಿಳಿದ ಸಮಾಜ ಸೇವಕ ವಿಶು ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿ, ತನ್ನ ಜೀಪಿನಲ್ಲಿಯೇ ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸುವ ಮೂಲಕ ಬೈಕ್ ಸವಾರರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಬೈಕ್ ಚಲಾಯಿಸುತ್ತಿದ್ದ ನಿಖಿಲ್ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ, ಸಹ ಸವಾರ ಸಂದೀಪ್‌ಗೆ ಪ್ರಜ್ಞೆ ಮರಳಿದೆ. ಈ ಇಬ್ಬರೂ ಪಡುಬಿದ್ರೆ ನಿವಾಸಿಗಳಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿರುದ್ಧ ದಿಕ್ಕಿನಲ್ಲೇ ಜೀಪ್ ಚಲಾವಣೆ

ಗಂಭೀರವಾಗಿ ಗಾಯಗೊಂಡ ಬೈಕ್ ಸವಾರರನ್ನು ತಮ್ಮ ಜೀಪಿನಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ವಿಶು ಶೆಟ್ಟಿ ಅವರು ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದಲೇ ವಾಹನ ಚಲಾಯಿಸಬೇಕಾಯಿತು.

ಅಬ್ಕೋ ಸ್ಟೀಲ್‌ನಿಂದ ಹೈಟೆಕ್ ಆಸ್ಪತ್ರೆಗೆ ಬರಬೇಕಾದರೆ ಸುಮಾರು 1 ಕಿ.ಮೀ.ದೂರದ ಬಲಾಯಿಪಾದೆಗೆ ಹೋಗಿಯೇ ವಾಹನವನ್ನು ತಿರುಗಿಸಿಕೊಂಡು ಬರಬೇಕಾದ ಪರಿಸ್ಥಿತಿಯಿದೆ. ಆದರೆ ಜೀವ ಉಳಿಸುವ ಈ ಗೋಲ್ಡನ್ ಹವರ್‌ನಲ್ಲಿ ಈ ರಿಸ್ಕ್ ತೆಗೆದುಕೊಳ್ಳಲು ಇಚ್ಚಿಸದ ವಿಶು ಶೆಟ್ಟಿ ಅವರು, ವಿರುದ್ಧ ದಿಕ್ಕಿನಲ್ಲಿಯೇ ಹೆಡ್‌ಲೈಟ್ ಹಾಕಿ ವಾಹನ ಚಲಾಯಿಸಿ ಗಾಯಾಳುಗಳ ಪ್ರಾಣ ರಕ್ಷಣೆ ಮಾಡುವ ಅಪಾಯಕಾರಿ ಪ್ರಯತ್ನ ನಡೆಸಿದ್ದಾರೆ.

ಸಾಮಾನ್ಯವಾಗಿ ರಕ್ತ ಸುರಿಯುತ್ತಿದ್ದರೆ ಗಾಯಾಳುಗಳ ನೆರವಿಗೆ ಖಾಸಗಿ ವಾಹನಗಳು ನೆರವಿಗೆ ಬರುವುದು ಕಡಿಮೆ. ಆದರೆ ವಿಶು ಶೆಟ್ಟಿ ಅವರು ಇದನ್ನು ಲೆಕ್ಕಿಸದೆ ನೈಜ ಅಪತ್ಭಾಂಧವನಾಗಿ ಮಾನವೀಯತೆ ಮೆರೆದಿರುವುದು ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ. ಪ್ರಕರಣದ ಬಗ್ಗೆ ಉಡುಪಿ ಸಂಚಾರಿ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...