ಉಡುಪಿ | ಜನತಾದರ್ಶನದ ಎಲ್ಲ ಕಡತಗಳನ್ನೂ ವಿಲೇವಾರಿ ಮಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

Advertisements

ಅಧಿಕಾರಿಗಳು ಹೃದವಂತಿಕೆಯಿಂದ ಜನರ ಸಮಸ್ಯೆ ಬಗೆಹರಿಸಬೇಕು. ಜನತಾದರ್ಶನದ ಎಲ್ಲ ಕಡತಗಳನ್ನೂ ವಿಲೇವಾರಿ ಮಾಡಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದರು.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜನತಾದರ್ಶನ ಉದ್ಘಾಟಿಸಿ ಮಾತನಾಡಿದರು.

“ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು. ಕಾನೂನಿನನ್ವಯ ಯಾವ ಸಮಸ್ಯೆಗಳಿಗೆಲ್ಲ ಪರಿಹಾರ ನೀಡಲು ಸಾಧ್ಯವೋ ಅದೆಲ್ಲಕ್ಕೂ ಕೂಡಲೇ ಪರಿಹಾರ ಸೂಚಿಸುವ ಕೆಲಸವಾಗಬೇಕು” ಎಂದರು.

Advertisements

ಕಂದಾಯ, ಅರಣ್ಯ, ಪೊಲೀಸ್, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಸಾಕಷ್ಟು ಕಡತಗಳು ಬಾಕಿ ಇವೆ. ಕಡತವು ಒಂದು ಟೇಬಲ್‌ನಿಂದ ಇನ್ನೊಂದು ಟೇಬಲ್‌ಗೆ ಹೋಗುತ್ತಿರಬಾರದು. ಎಲ್ಲದಕ್ಕೂ ವಿಲೇವಾರಿ ಮೂಲಕ ಪರಿಹಾರ ನೀಡಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾರ್ವಜನಿಕರ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಜನತಾ ದರ್ಶನ: ಸಚಿವ ಶರಣಪ್ರಕಾಶ ಪಾಟಿಲ್

ಈ ವೇಳೆ ಅಪರ ಜಿಲ್ಲಾಧಿಕಾರಿ ಮಮತಾದೇವಿ, ಜಿ.ಪಂ ಸಿಇಒ ಪ್ರಸನ್ನ ಎಚ್, ಎಸ್‌ಪಿ ಡಾ. ಅರುಣ್, ಉಪವಿಭಾಗ ಆಯುಕ್ತೆ ರಶ್ಮಿ ಸಹಿತ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X