ಉಡುಪಿ | ಅಂಬೇಡ್ಕರ್ 133ನೇ ಜನ್ಮ ದಿನಾಚರಣೆ; ಮಹಾನಾಯಕ ಜೈ ಭೀಮ್ ಜಾಥಾ

Date:

ದಲಿತ ಸಂಘಟನೆಗಳು ಹಾಗೂ ಇತರ ಸಮಾನ ಮನಸ್ಕ ಸಂಘನೆಗಳ ನೇತೃತ್ವದಲ್ಲಿ ಸಂವಿಧಾನಶಿಲ್ಪಿ ಡಾ. ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಪ್ರಯುಕ್ತ ಶಕ್ತಿಶಾಲಿ ಭಾರತಕ್ಕಾಗಿ ಭೀಮ ಸಂವಿಧಾನ ಮಹಾನಾಯಕ ಜೈ ಭೀಮ್ ರ್ಯಾಲಿಯನ್ನು ಏ.14ರಂದು ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಸಹಬಾಳ್ವೆ ಉಡುಪಿ ಅಧ್ಯಕ್ಷ ಹಾಗೂ ಹಿರಿಯ ಚಿಂತಕ ಪ್ರೊ.ಫಣಿರಾಜ್‌ ತಿಳಿಸಿದರು.

- Advertisement -

ಉಡುಪಿಯಲ್ಲಿನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಂದೂರಿನಿಂದ ಹೊರಡುವ ರ್ಯಾಲಿಯು ಕುಂದಾಪುರ, ಬ್ರಹ್ಮಾವರ, ಹೆಬ್ರಿ, ಕಾರ್ಕಳ, ಕಾಪು ಮಾರ್ಗವಾಗಿ ಉಡುಪಿಯಲ್ಲಿ ಸಮಾಪ್ತಿಗೊಳ್ಳಲಿದೆ. ಬೆಳಗ್ಗೆ 9ಗಂಟೆಗೆ ರ್ಯಾಲಿಗೆ ಬೈಂದೂರು ಶ್ರೀಸೇನೇಶ್ವರ ದೇವಸ್ಥಾನದ ಎದುರು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಚಾಲನೆ ನೀಡಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಪೂರ್ವಾಹ್ನ 11ಗಂಟೆಗೆ ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ನಡೆಯುವ ಪ್ಯಾಲಿಯಲ್ಲಿ ಪ್ರಗತಿಪರ ಚಿಂತಕ ಪ್ರೊ. ಫಣಿರಾಜ್, ಮಧ್ಯಾಹ್ನ 12ಗಂಟೆಗೆ ಬ್ರಹ್ಮಾವರ ಅಂಬೇಡ್ಕರ್ ವೃತ್ತದಲ್ಲಿ ಕುಂದಾಪುರ ಸಹಬಾಳ್ವೆಯ ರಾಮಕೃಷ್ಣ ಹೇರ್ಳೆ, ಮಧ್ಯಾಹ್ನ 1:30ಕ್ಕೆ ಹೆಬ್ರಿ ಬಸ್ ನಿಲ್ದಾಣದಲ್ಲಿ ದಸಂಸ ಮುಖಂಡ ಟಿ.ಮಂಜು ನಾಥ ಗಿಳಿಯಾರು, 3ಗಂಟೆಗೆ ಕಾರ್ಕಳ ಬಸ್‌ ನಿಲ್ದಾಣದಲ್ಲಿ ಪತ್ರಕರ್ತ ಶಶಿಧರ ಹೆಮ್ಮಾಡಿ, ಸಂಜೆ 5ಗಂಟೆಗೆ ಕಾಪು ಬಸ್ ನಿಲ್ದಾಣದಲ್ಲಿ ಉಪನ್ಯಾಸಕ ಜಯ ಪ್ರಕಾಶ್ ಶೆಟ್ಟಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು.

ಸಂಜೆ 6:30ಕ್ಕೆ ಉಡುಪಿ ಹುತಾತ್ಮರ ಚೌಕಿ ಬಳಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಡಾ.ಎಚ್.ಎಸ್.ಅನುಪಮ ಸಮಾರೋಪ ಭಾಷಣ ಮಾಡ ಲಿರುವರು. ಮುಖ್ಯ ಅತಿಥಿಗಳಾಗಿ ಎದ್ದೇಳು ಕರ್ನಾಟಕ ಸಂಚಾಲಕ ಕೆ.ಎಲ್‌. ಅಶೋಕ್, ಗೌರಿ ಬೆಂಗಳೂರು, ಫಾ.ವಿಲಿಯಂ ಮಾರ್ಟಿಸ್ ಮೊದಲಾದವರು ಭಾಗವಹಿಸಲಿರುವರು ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ದಸಂಸ ಮುಖಂಡರಾದ ಸುಂದರ್ ಮಾಸ್ಟರ್, ಟಿ. ಮಂಜುನಾಥ ಗಿಳಿಯಾರು, ವಾಸುದೇವ ಮೂದೂರು, ಶ್ಯಾಂ ಸುಂದರ್ ತೆಕ್ಕಟ್ಟೆ ಮಂಜುನಾಥ ಬಾಳ್ಳುದ್ರು, ಸಿಐಟಿಯು ಮುಖಂಡ ಬಾಲಕೃಷ್ಣ ಶೆಟ್ಟಿ ಸಲಾವುದ್ದೀನ್, ಇದ್ರೀಸ್ ಹೂಡೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...