ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಎನ್‌ಕೌಂಟರ್‌ಗೆ ಬಲಿಯಾಗಿದ್ದ ದಲಿತ, ಆದಿವಾಸಿ ನಾಯಕ ವಿಕ್ರಂ ಗೌಡರ ಮೃತದೇಹವನ್ನು ಇಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಕೊಂಡೊಯ್ಯುತ್ತಿದ್ದಾಗ ಹೆಬ್ರಿ ಬಳಿ ಆ್ಯಂಬುಲೆನ್ಸ್ ರಸ್ತೆ ಬದಿಗೆ ವಾಲಿದ ಘಟನೆ ನಡೆದಿದೆ.

ಆ್ಯಂಬುಲೆನ್ಸ್ ವೇಗವಾಗಿ ಚಲಿಸುತ್ತಿದ್ದಾಗ ದನ ಅಡ್ಡ ಬಂದದ್ದರಿಂದ ರಸ್ತೆ ಬದಿಗೆ ವಾಲಿದ್ದು, ಆ್ಯಂಬುಲೆನ್ಸ್‌ನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ನಂತರ ಸ್ಥಳೀಯರ ನೆರವಿನಿಂದ ಆ್ಯಂಬುಲೆನ್ಸ್ ಅನ್ನು ರಸ್ತೆಗೆ ತಂದು ಮೃತದೇಹವನ್ನು ನಿಗದಿತ ಪ್ರದೇಶಕ್ಕೆ ಕೊಂಡೊಯ್ಯಲಾಯಿತು ಎಂದು ಪೊಲೀಸರ ಮೂಲಗಳು ತಿಳಿಸಿವೆ.
ಇದನ್ನು ಓದಿದ್ದೀರಾ? ಬೆಂಗಳೂರು ದಕ್ಷಿಣ | ಪಟ್ಟಾರೆಡ್ಡಿಪಾಳ್ಯ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಒತ್ತಾಯ: ರೈತ ಸಂಘದಿಂದ ಪ್ರತಿಭಟನೆ
‘ಆ್ಯಂಬುಲೆನ್ಸ್ ವೇಗವಾಗಿ ಸಂಚರಿಸುತ್ತಿದ್ದಾಗ ರಸ್ತೆ ಮಧ್ಯೆ ದನ ಅಡ್ಡ ಬಂದಿದೆ. ಇದರಿಂದಾಗಿ ಆ್ಯಂಬುಲೆನ್ಸ್ ರಸ್ತೆ ಬದಿಗೆ ಸರಿದಿದೆ. ಯಾರಿಗೂ ಗಾಯಗಳಾಗಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಮಾಹಿತಿ ನೀಡಿದ್ದಾರೆ.
