ಉಡುಪಿ | ಏ.12ರಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

Date:

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಏಪ್ರಿಲ್‌ 12ರಂದು  ಸಂಘದ ಸ್ಥಾಪನಾ ದಿನಾಚರಣೆಯನ್ನು ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ.

ಉಡುಪಿಯಲ್ಲಿ ಬುಧವಾರದಂದು ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು 1997ರಲ್ಲಿ ಉಡುಪಿ ಪ್ರತ್ಯೇಕ ಜಿಲ್ಲೆಯಾಗಿ ರಚನೆಗೊಂಡ ಬಳಿಕ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವಾಗಿ ರೂಪುಗೊಂಡಿತು. ಇದರ ಉದ್ಘಾಟನೆಯು 1998ರ ಏಪ್ರಿಲ್‌ 12ರಂದು ಉಡುಪಿ ಎಂಜಿಎಂ ಕಾಲೇಜಿನ ಸಭಾಂಗಣದಲ್ಲಿ ನಡೆದಿತ್ತು. ಆ ದಿನವನ್ನು ಕಳೆದ ವರ್ಷ ಸಂಘದ ರಜತ ಮಹೋತ್ಸವ ಸಂಭ್ರಮದಲ್ಲಿ ಸ್ಥಾಪನಾ ದಿನವನ್ನಾಗಿ ಆಚರಿಸಲು ನಿರ್ಧರಿಸಿ ಚಾಲನೆ ನೀಡಲಾಗಿತ್ತು.ಅದರಂತೆ ಈ ವರ್ಷವೂ ಕೂಡ ಸಂಘ ಸ್ಥಾಪನಾ ದಿನವನ್ನು ಆಚರಿಸಲು ಉದ್ದೇಶಿಸಲಾಗಿದೆ. ಮುಂದೆ ಪ್ರತಿವರ್ಷವೂ ಈ ದಿನವನ್ನು ಸ್ಥಾಪನಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ” ಎಂದರು.

“ಸ್ಥಾಪನಾ ದಿನಾಚರಣೆಯನ್ನು ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ್ ಶ್ಯಾನುಭಾಗ್ ಉದ್ಘಾಟಿಸುವರು, ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆ ವಹಿಸುವರು, ಸಂಘದ ಸ್ಥಾಪಕ ಪ್ರಧಾನ ಕಾರ್ಯದರ್ಶಿ ಹಾಗೂ ಕುಂದಪ್ರಭಾ ವಾರಪತ್ರಿಕೆಯ ಸಂಪಾದಕ ಯು ಎಸ್ ಶೆಣೈ ಸ್ಥಾಪನಾ ದಿನದ ಬಗ್ಗೆ ಮಾತನಾಡುವರು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಂಘ ಸ್ಥಾಪನೆಯಿಂದ ಈವರೆಗೆ ಸೇವೆ ಸಲ್ಲಿಸಿರುವ ಸಂಘದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ನಾಮಫಲಕದ ಅನಾವರಣವನ್ನು ʼಗಿರಿಜಾ ಗ್ರೂಪ್ ಆಫ್ ಕನ್ಸರ್ನ್ʼ ಇದರ ಆಡಳಿತ ನಿರ್ದೇಶಕ ರವೀಂದ್ರ ಕೆ ಶೆಟ್ಟಿ ಅನಾವರಣಗೊಳಿಸುವರು. ಇದೇ ವೇಳೆ ಹಿರಿಯ ಪತ್ರಕರ್ತ ಸುಭಾಷ್‌ ಚಂದ್ರ ವಾಗ್ಳೆ ಅವರಿಗೆ ಸ್ಥಾಪನಾ ದಿನದ ಗೌರವ ಸಲ್ಲಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎರಡು ಲಕ್ಷ ಮತಗಳ ಅಂತರದಿಂದ ಆಲಗೂರ್ ದಿಗ್ವಿಜಯ: ಮಲ್ಲಿಕಾರ್ಜುನ್ ಲೋಣಿ

“ಸಂಘದ ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ, ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿರುವರು “ಎಂದು ಮಾಹಿತಿ ನೀಡಿದರು.

ಪತ್ರಿಕಾ ಭವನ ಸಮಿತಿಯ ಸಹ ಸಂಚಾಲಕ ಅಂಕಿತ್ ಶೆಟ್ಟಿ, ಉಡುಪಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಮೈಕಲ್ ರೊಡ್ರಿಗಸ್, ಹರೀಶ್ ಕುಂದರ್ ಇದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಸಿಪಿಎಂ ಸಂಘಟಿಸುವ ಜವಾಬ್ದಾರಿ ಎಲ್ಲರ ಮೇಲಿದೆ; ಎಂ.ಪಿ.ಮುನಿವೆಂಕಟಪ್ಪ

ಆಧುನಿಕ ಶೋಷಣೆಯಂತಹ ದಬ್ಬಾಳಿಕಾ ಪ್ರವೃತ್ತಿಯನ್ನು ತಡೆದು, ಸಿಪಿಎಂ ಪಕ್ಷದ ಬಲಿಷ್ಟ ಸಂಘಟನೆಯ...

ಗುಬ್ಬಿ | ಬಡ್ಡಿ ದಂಧೆಗೆ ಮತ್ತೋರ್ವ ಬಲಿ : ನಿಟ್ಟೂರು ವಾಸಿ ನೇಣಿಗೆ ಶರಣು; ಆತಂಕದಲ್ಲಿ ಜನತೆ

ಮೀಟರ್ ಬಡ್ಡಿ ದಂಧೆಗೆ ಬೇಕರಿ ಮಾಲೀಕ ಬಲಿಯಾದ ಘಟನೆ ಮಾಸುವ ಮುನ್ನವೇ...

ರಾಮನಗರ | ಸಾಲ ತೀರಿಸಲು ನೆರೆಮನೆಯ ಬಾಲಕಿಯ ಅಪಹರಣಕ್ಕೆ ಯತ್ನ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕ

ಮನೆ ಬಾಡಿಗೆ ಸೇರಿದಂತೆ ಕೈ ಸಾಲ ತೀರಿಸಲು ಪಕ್ಕದ ಮನೆಯಲ್ಲಿನ ಬಾಲಕಿಯನ್ನೇ...

ಚಿಂತಾಮಣಿ | ಬೊಲೆರೋ ಟೆಂಪೋ ಬಸ್ ನಡುವೆ ಅಪಘಾತ; ಚಾಲಕ ಸಾವು

ಬೊಲೆರೋ ಟೆಂಪೊಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ...