ಉಡುಪಿ | ಆತ್ಮಹತ್ಯೆಗೆ ಯತ್ನಿಸಿ ಕಾಲು ಮುರಿದುಕೊಂಡ ಮಾನಸಿಕ ಅಸ್ವಸ್ಥ

Date:

ಉಡುಪಿ ಜಿಲ್ಲೆಯ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಮಾನಸಿಕ ಅಸ್ವಸ್ಥಗೊಂಡ ಯುವಕನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿ ಕಾಲು ಮುರಿದುಕೊಂಡ ಘಟನೆ ಬುಧವಾರ ನಡೆದಿದೆ. ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ಸಾರ್ವಜನಿಕರ ಸಹಕಾರದಿಂದ ಆತನನ್ನು ರಕ್ಷಿಸಿ, ತನ್ನ ವಾಹದನಲ್ಲಿಯೇ ಕರೆದೊಯ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

ಯುವಕ ಮನೋ ರೋಗಿಯಾಗಿದ್ದು, ದೈಹಿಕವಾಗಿ ಹಾಗೂ ಮಾನಸಿಕವಾಗಿ ತೀವ್ರವಾಗಿ ಬಳಲಿರುವುದರಿಂದ ಯಾವುದೇ ವೈಯಕ್ತಿಕ ಮಾಹಿತಿಯನ್ನು ನೀಡುತ್ತಿಲ್ಲ. ಯುವಕ ಅಸ್ಸಾಂ ಮೂಲದವ ಎಂಬ ಮಾಹಿತಿ ಲಭಿಸಿದೆ. ಈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದ್ದ ಸಂದರ್ಭದಲ್ಲಿ ಸಾರ್ವಜನಿಕರು ರಕ್ಷಿಸಿದ್ದಾರೆ. ನಂತರ ನೇಣು ಬಿಗಿದು ಆತ್ಮಹತ್ಯೆ ನಡೆಸಲು ಪ್ರಯತ್ನಿಸಿರುವುದು ಕೂಡಾ ಬಯಲಾಗಿದೆ. ಇದೆಲ್ಲಾ ವಿಫಲವಾದ ಬಳಿಕ ಮರ ಏರಿ ಅಲ್ಲಿಂದ ಜಿಗಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತನ ಬಲಗಾಲಿನ ಎಲುಬು ಮುರಿತಕ್ಕೆ ಒಳಗಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರಕರಣದ ಕುರಿತು ಮಣಿಪಾಲ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ. ಯುವಕನ ವಾರೀಸುದಾರರು ಇದ್ದಲ್ಲಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...