ಉಡುಪಿ | ಹೊಂಡ ಗುಂಡಿಗಳಿರುವ ರಸ್ತೆಯ ದುರಸ್ತಿಗೆ ಆಗ್ರಹ

Date:

ಉಡುಪಿ ನಗರದ ಬಡಗುಪೇಟೆ ವಾರ್ಡಿನ ವಾಸುಕಿ ಅನಂತ ಪದ್ಮನಾಭ ದೇವಸ್ಥಾನ ರಸ್ತೆಯು ಶ್ರೀ ಕೃಷ್ಣ ಮಠ, ಮುಕುಂದಕೃಪ ಶಾಲೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದ್ದು, ಈವಾಗ ಈ ರಸ್ತೆ‌ ಹೊಂಡ ಗುಂಡಿಗಳಿಂದಾಗಿ ಸಂಚಾರ ಕಷ್ಟಕರವಾಗಿ ಸಾರ್ವಜನಿಕರು ಪ್ರಯಾಸಪಡುವ ಪರಿಸ್ಥಿತಿ ಎದುರಾಗಿದೆ.

- Advertisement -

ಈ ರಸ್ತೆಯ ನಡುವಿನ ತಳದಲ್ಲಿದ್ದ ಡ್ರೈನೇಜ್ ಕೊಳವೆಗಳನ್ನು ಬದಲಿಸುವ ಕಾಮಗಾರಿ ನಡೆದಿತ್ತು. ಗುಂಡಿ ಅಗೆದಿರುವ ಸ್ಥಳದಲ್ಲಿ ಜಲ್ಲಿಕಲ್ಲು, ಜಲ್ಲಿಹುಡಿ ಹಾಕಿ ಮುಚ್ಚಿಡಲಾಗಿತ್ತು. ಈವಾಗ ಗುಂಡಿ ತೋಡಿರುವ ಸ್ಥಳವು ಕುಸಿತಗೊಂಡಿದ್ದು, ರಸ್ತೆಯ ಉದ್ದಕ್ಕೂ ಗುಂಡಿಗಳು ಬಿದ್ದಿವೆ. ಕಿರುದಾಗಿರುವ ಈ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಪ್ರಯಾಸ ಪಡಬೇಕಾಗಿದೆ. ರಸ್ತೆಯು ಹದಗೆಟ್ಟ ಕಾರಣದಿಂದ ಅಪಘಾತಗಳು ಸಂಭವಿಸುವುದು ಕಂಡುಬರುತ್ತಿವೆ. ಶಾಲಾ ವಿದ್ಯಾರ್ಥಿಗಳು, ಶ್ರೀಕೃಷ್ಣ ಮಠಕ್ಕೆ ಬರುವ ಯಾತ್ರಿಕರು ಧೂಳುಣ್ಣಬೇಕಾದ ಪರಿಸ್ಥಿತಿ‌ ಇಲ್ಲಿ ಉದ್ಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಧೂಳೇಳುವ ರಸ್ತೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಶ್ವಾಸಕೋಶ, ಕಣ್ಣಿನ ತೊಂದರೆಗಳಿಗೆ ತುತ್ತಾಗಬೇಕಾದ ಅಪಾಯಕರ ಸ್ಥಿತಿಯು ಎದುರಾಗಿದೆ. ಜಿಲ್ಲಾಡಳಿತ, ನಗರಾಡಳಿತ ತಕ್ಷಣವಾಗಿ ದುಸ್ಥಿತಿಯಲ್ಲಿರುವ ವಾಸುಕಿ ಅನಂತ ಪದ್ಮನಾಭ ರಸ್ತೆಯನ್ನು ಡಾಮರೀಕರಣ ಮಾಡಿಸುವಂತೆ ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...