ಉಡುಪಿ | ಕಸಾಯಿಖಾನೆಗೆ ದನ-ಕರು ಮಾರಾಟ ಮಾಡಿದ್ದ ಸಂಘಪರಿವಾರದ ಕಾರ್ಯಕರ್ತನ ಬಂಧನ

Date:

ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಲ್ಲೂರಿನಲ್ಲಿರುವ ಕಸಾಯಿಖಾನೆಗೆ ದನ ಮತ್ತು ಕರುವನ್ನು ಮಾರಾಟ ಮಾಡಿದ ಆರೋಪದಲ್ಲಿ ಸ್ಥಳೀಯ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ನಲ್ಲೂರಿನ ಶಿವಪ್ರಸಾದ್(28) ಬಂಧಿತ ಆರೋಪಿ. ನ.12ರಂದು ನಲ್ಲೂರಿನ ಮನೆಯೊಂದರ ಮೇಲೆ ದಾಳಿ ನಡೆಸಿದ ಕಾರ್ಕಳ ಗ್ರಾಮಾಂತರ ಪೊಲೀಸರು ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಆರೋಪದಲ್ಲಿ ಅಶ್ರಫ್ ಅಲಿ ಹಾಗೂ ಆತನ ಪತ್ನಿಯನ್ನು ಬಂಧಿಸಿದ್ದರು. ಈ ಬಗ್ಗೆ ವಿಶ್ವ ಹಿಂದೂ ಪರಿಷತ್, ಬಜರಂಗ ದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ದನ-ಕರುವನ್ನು ಕಳವು ಮಾಡಿ ತಂದು, ಕಡಿದು ಮಾಂಸ ಮಾರಾಟ ಮಾಡಲಾಗುತ್ತಿದೆ. ಈ ಕಸಾಯಿಖಾನೆಯನ್ನು ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇದನ್ನೂ ಓದಿ: ಉಡುಪಿ | ಅಕ್ರಮ ವಲಸೆ ಪ್ರಕರಣದ ವಿಚಾರಣೆ : 10 ಮಂದಿ ಬಾಂಗ್ಲಾ ಪ್ರಜೆಗಳಿಗೆ ಜೈಲು, ದಂಡ

ತನಿಖೆ ಚುರುಕುಗೊಳಿಸಿದ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿದ್ದು, ಈ ವೇಳೆ ಅವರು ಈ ದನ ಮತ್ತು ಕರುವನ್ನು ಸಂಘ ಪರಿವಾರದ ಕಾರ್ಯಕರ್ತ ಶಿವಪ್ರಸಾದ್ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಶಿವಪ್ರಸಾದ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತ ಈ ದನ ಹಾಗೂ ಕರುವನ್ನು ಬೇರೆಯವರಿಂದ ಖರೀದಿಸಿ ತಂದು ಅಶ್ರಫ್ ಅಲಿಗೆ ಮಾರಾಟ ಮಾಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...