ಉಡುಪಿ | ಬೀಡಿ ಕಾರ್ಮಿಕರ 8ನೇ ಜಿಲ್ಲಾ ಸಮ್ಮೇಳನ

Date:

ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ 8ನೇ ಸಮ್ಮೇಳನ ಇಂದು ಉಡುಪಿ ವಿಮಾ ನೌಕರರ ಸಂಘದ ಕಛೇರಿ ಸಭಾಂಗಣದಲ್ಲಿ ಭಾವಪೂರ್ಣವಾಗಿ ನೆರವೇರಿತು. ಸಮ್ಮೇಳನವನ್ನು ಬೀಡಿ ಫೆಡರೇಶನ್ ರಾಜ್ಯಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು.

- Advertisement -

ಬೀಡಿ ಕಾರ್ಮಿಕರಿಗೆ ಸರಕಾರ ನಿಗದಿ ಮಾಡಿದ ತುಟ್ಟಿಭತ್ಯೆ ಮತ್ತು ಕನಿಷ್ಠ ಕೂಲಿ ನೀಡುವಲ್ಲಿ ಮಾಲೀಕರು ಹಿಂದೆಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಸರಕಾರ ನಿಗದಿ ಮಾಡಿದ ₹301 ಕನಿಷ್ಠ ಕೂಲಿ ನೀಡುವ ಬದಲು ₹287 ನೀಡುತ್ತೇವೆ ಎಂದು ಹೇಳಿ, ಅದನ್ನೂ ಕೊಡದೆ ಕಾರ್ಮಿಕರನ್ನು ಮೋಸಗೊಳಿಸಲಾಗುತ್ತಿದೆ. ಈ ಅನ್ಯಾಯದ ವಿರುದ್ಧ ಬೀಡಿ ಕಾರ್ಮಿಕರು ನಿರ್ಣಾಯಕ ಹೋರಾಟಕ್ಕೆ ಸಜ್ಜಾಗಬೇಕು ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...
WhatsApp Image 2025 11 09 at 4.42.04 AM

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೂರು ಲಕ್ಷಕ್ಕಿಂತ ಹೆಚ್ಚು ಬೀಡಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೂ ಶಾಸಕರು, ಸಂಸದರು ಅಥವಾ ಸರಕಾರದ ಪ್ರತಿನಿಧಿಗಳಿಂದ ನಮ್ಮ ಪರವಾಗಿ ಧ್ವನಿ ಏಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ನವೆಂಬರ್ 24ರಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟ ಅಹೋರಾತ್ರಿ ಹೋರಾಟ ಹಾಗೂ ನವೆಂಬರ್ 28ರಂದು ಸಹಾಯಕ ಕಮೀಷನರ್ ಕಚೇರಿ ಮುತ್ತಿಗೆ ಹೋರಾಟ ನಡೆಯಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬೀಡಿ ಫೆಡರೇಶನ್ ಉಪಾಧ್ಯಕ್ಷೆ ಬಲ್ಕೀಸ್, ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷೆ ಸುನೀತಾ ಶೆಟ್ಟಿ, ಜನವಾದಿ ಮಹಿಳಾ ಸಂಘದ ಕಾರ್ಯದರ್ಶಿ ಶೀಲಾವತಿ ಹಾಗೂ ಉಡುಪಿ ಬೀಡಿ ಸಂಘದ ಅಧ್ಯಕ್ಷೆ ನಳಿನಿ ಎಸ್. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಸಮ್ಮೇಳನದ ಅಧ್ಯಕ್ಷತೆಯನ್ನು ಬೀಡಿ ಫೆಡರೇಶನ್ ಅಧ್ಯಕ್ಷ ಮಹಸಬಲ ವಡೇಯರಹೊಬಳಿ ವಹಿಸಿದರು. ಫೆಡರೇಶನ್ ಕಾರ್ಯದರ್ಶಿ ಉಮೇಶ್ ಕುಂದರ್ ಸ್ವಾಗತ ಹಾಗೂ ವರದಿ ಮಂಡಿಸಿದರು. ಕಾರ್ಯಕ್ರಮ ನಿರೂಪಣೆ ಮತ್ತು ಧನ್ಯವಾದ ಪ್ರಸ್ತಾವನೆ ಕವಿರಾಜ್ ಎಸ್. ಕಾಂಚನ್ ನಿರ್ವಹಿಸಿದರು.

ದತದ್ಗ

ಈ ಸಂದರ್ಭ ಮುಂದಿನ ಮೂರು ವರ್ಷಗಳ ಅವಧಿಗೆ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ ನೂತನ 15 ಸದಸ್ಯರ ಸಮಿತಿ ಆಯ್ಕೆ ನಡೆಯಿತು. ಉಮೇಶ್ ಕುಂದರ್ ಅಧ್ಯಕ್ಷರಾಗಿ, ಕವಿರಾಜ್ ಎಸ್. ಕಾಂಚನ್ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಬಲ್ಕೀಸ್ ಕೋಶಾಧಿಕಾರಿಯಾಗಿ ಸರ್ವಾನುಮತದಿಂದ ಆಯ್ಕೆಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...