ಉಡುಪಿ | ಹೆಣ್ಣಾಗಿ ಹುಟ್ಟುವುದು ಶಾಪವಲ್ಲ, ಬದಲಾಗಿ ವರ: ಧರ್ಮಗುರು ಡೆನಿಸ್ ಡೇಸಾ

Date:

ಭೂಮಿ ತಾಯಿ ಹೆಣ್ಣು, ಜನ್ಮ ಕೊಟ್ಟ ತಾಯಿ ಹೆಣ್ಣು, ಹೆಂಡತಿಯಾಗಿ ಬರುವವಳು ಹೆಣ್ಣು, ಮಗಳಾಗಿ ಹುಟ್ಟುವವಳು ಹೆಣ್ಣು. ನಮ್ಮ ಜೀವನದಲ್ಲಿ ಇವರೆಲ್ಲರ ಪಾತ್ರ ಮುಖ್ಯ. ಹೀಗಿರುವಾಗ ಹೆಣ್ಣು ಮಗು ಹುಟ್ಟುವುದು ಶಾಪವಲ್ಲ ಬದಲಾಗಿ ವರ ಎಂದು ಉಡುಪಿಯ ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ವಂದನೀಯ ಡೆನಿಸ್ ಡೇಸಾ ಹೇಳಿದರು.

- Advertisement -

ಅವರು ಚರ್ಚಿನ ಸ್ತ್ರೀ ಸಂಘಟನೆ ಆಯೋಜಿಸಿದ್ದ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಸಮಾಜದಲ್ಲಿ ಹೆಣ್ಣು ಮನಸ್ಸು ಮಾಡಿದರೆ ಯಾವುದೇ ಸಾಧನೆ ಮಾಡಲು ಸಾಧ್ಯ ಎನ್ನುವುದಕ್ಕೆ ಹಲವಾರು ಉದಾಹರಣೆಗಳು ನಮ್ಮ ಮುಂದಿವೆ. ಸುನೀತಾ ವಿಲಿಯಮ್ಸ್, ಸೈನಾ ನೆಹ್ವಾಲ್ ಸಿಂಧು ಹಲವಾರು ಕ್ಷೇತ್ರಗಳಲ್ಲಿ ತಮ್ಮದೇ ಸಾಧನೆಗಳ ಮೂಲಕ ಹೆಸರುವಾಸಿಯಾಗಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇಂದು ಪುರುಷರಷ್ಟೇ ಸಮಾನರಾಗಿ ಹೆಣ್ಣು ಮಕ್ಕಳು ಸಾಧನೆಯನ್ನು ತೋರುತ್ತಿದ್ದಾರೆ. ಹೆಣ್ಣು ಮಕ್ಕಳೆ ತಮ್ಮ ರಕ್ಷಣೆಗೆ ತಾವು ಮುಂದಾಗಬೇಕು. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದರೊಂದಿಗೆ ಸ್ವತಂತ್ರವಾಗಿ ವಿಚಾರಿಸುವ, ನಿರ್ಧಾರ ಕೈಗೊಳ್ಳುವ ಅವಕಾಶ ಕಲ್ಪಿಸಬೇಕು ಎಂದರು.

ಇದನ್ನು ಓದಿದ್ದೀರಾ? ರಾಯಚೂರು | ಮಾನ್ವಿ ಸಿರವಾರದ ಕೊನೆಯ ಭಾಗಕ್ಕೆ ನೀರು ಹರಿಸಲು ಆಗ್ರಹಿಸಿ ಸೆ.20 ರಸ್ತೆ ತಡೆ: ರೈತರ ಎಚ್ಚರಿಕೆ

ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಜೆನವಿವ್ ಕವಿತಾ ಕುಟಿನ್ಹೊ ಹೆಣ್ಣು ಮಕ್ಕಳ ಸಮಸ್ಯೆಗಳು ಮತ್ತು ಪರಿಹಾರ ಕುರಿತು ಉಪನ್ಯಾಸ ನೀಡಿದರು. ಇದೇ ವೇಳೆ ಚರ್ಚಿನ ಮಹಿಳಾ ಸದಸ್ಯರುಗಳಿಗೆ ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಸ್ತ್ರೀ ಸಂಘಟನೆಯ ಉಡುಪಿ ಧರ್ಮಪ್ರಾಂತ್ಯದ ಅಧ್ಯಕ್ಷರಾದ ಗ್ರೇಸಿ ಕುವೆಲ್ಲೊ, ಕಲ್ಯಾಣಪುರ ವಲಯ ಅಧ್ಯಕ್ಷರಾದ ಮರೀನಾ ಲೂವಿಸ್, ತೊಟ್ಟಮ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸುನೀಲ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ತೊಟ್ಟಂ ಘಟಕದ ಅಧ್ಯಕ್ಷರಾದ ಲೂಸಿ ಫೆರ್ನಾಂಡಿಸ್ ಸ್ವಾಗತಿಸಿ, ಲವೀನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...