ಉಡುಪಿ | ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಸರ್ಕಾರದ ಪಾಲುದಾರರು: ಗೀತಾ ಶಿವರಾಜಕುಮಾರ್

Date:

ಗ್ಯಾರಂಟಿ ಯೋಜನೆಯ ಸವಲತ್ತು ಪಡೆಯುವ ಪ್ರತಿಯೊಬ್ಬರೂ ಕೂಡ ಸರ್ಕಾರದ ಪಾಲುದಾರು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

- Advertisement -

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿಯ ಅಣ್ಣಪ್ಪಯ್ಯ ಸಭಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಪೂರೈಸಲು ಮಾಸಿಕ ₹50 ಲಕ್ಷ ಹಣ ಖರ್ಚಾಗುತ್ತಿದೆ. ಇಲ್ಲಿ ವಾರ್ಷಿಕ ₹6 ಕೋಟಿ ಹಣ ವ್ಯಯಿಸಬೇಕು. ಆದ್ದರಿಂದ ದೇಶದಲ್ಲಿ ಇಂತಹ ಯೋಜನೆ ಎಲ್ಲಿಯೂ ಇಲ್ಲ” ಎಂದರು.

“ರಾಜ್ಯದಲ್ಲಿ ₹58 ಸಾವಿರ ಕೋಟಿ ಹಣದ ಹೊರೆ ಸರ್ಕಾರಕ್ಕೆ ಆಗುತ್ತಿದೆ. ಆದರೂ, ಈ ಬಗ್ಗೆ ಯಾವುದೇ, ಒಳ ಒಪ್ಪಂದಕ್ಕೆ ಸರ್ಕಾರ ಸಿದ್ದವಿಲ್ಲ. ಜನಸಾಮಾನ್ಯರ ತೆರಿಗೆ ಹಣವನ್ನು ಪುನಃ ಜನರಿಗೆ ತಲುಪಿಸಲಾಗುತ್ತಿದೆ ಎನ್ನುವ ಸಂತಸ ಸರ್ಕಾರಕ್ಕಿದೆ” ಎಂದು ಸಂತಸ ವ್ಯಕ್ತಪಡಿಸಿದರು.

“ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ತಮ್ಮ ಬದುಕಿನುದ್ದಕ್ಕೂ ಬಡವರು, ದಲಿತರು, ಶೋಷಿತ ವರ್ಗದವರ ಪರವಾಗಿಯೇ ಚಿಂತಿಸುತ್ತಿದ್ದರು. ಅಂದು, ಬಂಗಾರಪ್ಪ ಅವರು ಜನಸಾಮಾನ್ಯರಿಗೆ ನೀಡಿದ ಸೇವೆ, ಇಂದಿಗೂ ಜೀವಂತವಾಗಿದೆ” ಎಂದರು.

“ಬಂಗಾರಪ್ಪ ಅವರ, ಆರಾಧನ, ಗ್ರಾಮೀಣ ಕೃಪಾಂಕ, ಆಶ್ರಯ ಮತ್ತು ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸೇರಿದಂತೆ ಅನೇಕ ಯೋಜನೆಗಳು ಬಡವರಿಗೆ ಬದುಕಲು ನೆಲೆ ಕಲ್ಪಿಸಿಕೊಟ್ಟಿವೆ” ಎಂದರು.

ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ, “ದೇಶದಲ್ಲಿ ಬಿಜೆಪಿ ಆಡಳಿತದಿಂದ ಜನಸಾಮಾನ್ಯರು ಬದುಕು ನಡೆಸುವುದೇ ಶೋಚನೀಯ ಸ್ಥಿತಿ ತಲುಪಿದೆ” ಎಂದರು.

ಮಾಜಿ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ಮಾತನಾಡಿ, “ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಂಸದ ಬಿ ವೈ ರಾಘವೇಂದ್ರ ಅವರು ಧೋರಣೆ ತೋರಿದ್ದಾರೆ. ಅಧಿಕಾರದ ಗದ್ದಿಗೆ ಏರಿ 15 ವರ್ಷ ಕಳೆದವು. ಆದರೆ, ಕ್ಷೇತ್ರ ಮಾತ್ರ ಕತ್ತಲಲ್ಲಿ ಮುಳುಗಿದೆ” ಎಂದು ದೂರಿದರು.

ನಟ ಶಿವರಾಜಕುಮಾರ್ ಮಾತನಾಡಿ, “ಚಿಕ್ಕ ವಯಸ್ಸಿನಿಂದ ಪತ್ನಿ ಗೀತಾ ಅವರು ಬಂಗಾರಪ್ಪ ಅವರ ರಾಜಕೀಯ ಚಟುವಟಿಕೆಗಳನ್ನು ಹತ್ತಿರದಿಂದ ನೋಡಿ ಬೆಳೆದಿದ್ದಾರೆ. ಬಂಗಾರಪ್ಪ ಅವರು, ಎಲ್ಲ ಧರ್ಮ, ಸಮುದಾಯಗಳನ್ನು ಪ್ರೀತಿಯಿಂದ ಕಾಣುತ್ತಿದ್ದರು. ಅದೇ ಗುಣ ಗೀತಾ ಅವರಿಗೆ ಬಂದಿದೆ. ಜಿಲ್ಲೆಯಲ್ಲಿ ಬಂಗಾರಪ್ಪ ಅವರ ಋಣ ತೀರಿಸಲು ಒಂದು ಅವಕಾಶ ಕಲ್ಪಿಸಿಕೊಡಿ” ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಬಸವರಾಜ ಪಾಟೀಲ್ ಇಟಗಿ ನೇಮಕ

ಪ್ರಮುಖರಾದ ರಾಜು ಪೂಜಾರಿ, ಪ್ರದೀಪ್ ಕುಮಾರ್ ಶೆಟ್ಟಿ, ಅರವಿಂದ ಪೂಜಾರಿ, ಹರೀಶ್ ಕೊಡಪಾಡಿ, ಚಂದ್ರ ಶೇಖರ ಪೂಜಾರಿ, ಮಂಜುಳ ದೇವಾಡಿಗ ಸೇರಿದಂತೆ ಇತರೆ ಗಣ್ಯರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...