ಉಡುಪಿ | ಎ.10 ರಂದು ‘ಜನಾಕ್ರೋಶ ಯಾತ್ರೆ’ ಜಿಲ್ಲೆಗೆ ಆಗಮನ

Date:

Advertisements

ರಾಜ್ಯ ಕಾಂಗ್ರೆಸ್ ಸರಕಾರ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ದಲಿತರ ಹಣ ಲೂಟಿ ಮಾಡುತ್ತಿದೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಜನಾಕ್ರೋಶ ಯಾತ್ರೆ’ಯು ಎ.10ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿ.ವೈ ವಿಜಯೇಂದ್ರ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ನಂತರ ಕಲ್ಸಂಕ, ಕಡಿಯಾಳಿ ಮಾರ್ಗವಾಗಿ ಬಿಜೆಪಿ ಕಚೇರಿಯ ಹಿಂಭಾಗದ ಮೈದಾನದವರೆಗೆ ಪ್ರತಿಭಟನಾ ಜಾಥಾ ಸಾಗಿ ಬರಲಿದೆ. ಬಳಿಕ ಮೈದಾನದಲ್ಲಿ ಬಹೃತ್ ಪ್ರತಿಭಟನಾ ಸಮಾವೇಶ ನಡೆಯಲಿದೆ ಎಂದರು.

ಜಾಥಾದಲ್ಲಿ ವಿವಿಧ ಮೋರ್ಚಾ, ಮಂಡಲಗಳಿಂದ ವಿನೂತನ ಟ್ಯಾಬ್ಲೋ ನಿರ್ಮಿಸಿ, ಅದರ ಮೂಲಕ ಸರಕಾರದ ಜನವಿರೋಧಿ ನೀತಿಗೆ ಖಂಡನೆ ವ್ಯಕ್ತಪಡಿಸಲಾಗುವುದು. ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ತಂಡದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

Advertisements

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ್ ಶೆಟ್ಟಿ, ರಾಘವೇಂದ್ರ ಕಿಣಿ, ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X