ಉಡುಪಿ | ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣ; ಚೆನ್ನೈ ಮೂಲದ ಎಂಜಿನಿಯರ್ ಯುವತಿ ಬಂಧನ

Date:

ಉಡುಪಿಯ ಶಾಲೆ, ಆಸ್ಪತ್ರೆ ಮತ್ತಿತರ ಕಡೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್‌ಗಳನ್ನು ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ಪೊಲೀಸರು ಚೈನ್ನೈ ಮೂಲದ ಎಂಜಿನಿಯರ್ ಯುವತಿಯನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಉಡುಪಿಯ ಶಾಲೆಗೆ ಬಂದಿದ್ದ ಬಾಂಬ್ ಬೆದರಿಕೆ ಕರೆಗೆ ಸಂಬಂಧಿಸಿ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಉಡುಪಿ ಪೊಲೀಸರು ತಮ್ಮ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

ಜೂನ್ 16ರಂದು ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಹುಸಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಇದರಲ್ಲಿ ‘ನಿಮ್ಮ ಶಾಲೆಯಲ್ಲಿ ಬಾಂಬ್ ಸ್ಪೋಟಿಸಿದರೆ ಮಕ್ಕಳು ಸಾಯುತ್ತಾರೆ. ಮಕ್ಕಳು ಸತ್ತರೆ ಮಾತ್ರ ಪೋಷಕರು ಪ್ರತಿಭಟನೆ ಮಾಡುತ್ತಾರೆ ಮತ್ತು ಪೊಲೀಸರು ಸರಿಯಾದ ತನಿಖೆ ನಡೆಸಿ ಹೈದರಾಬಾದಿನ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸುತ್ತಾರೆʼ ಎಂದು ಬರೆಯಲಾಗಿತ್ತು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಇದೇ ರೀತಿಯ ಇಮೇಲ್ ಸಂದೇಶ ಕಳುಹಿಸಿ ಶಾಲೆಗಳು, ಆಸ್ಪತ್ರೆಗಳು ಮತ್ತು ಕ್ರೀಡಾಂಗಣಗಳಿಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಗುಜರಾತಿನ ಅಹಮದಾಬಾದ್ ಪೊಲೀಸರು ಚೆನ್ನೈ ಆರೋಪಿ ಎಂಜಿನಿಯರ್ ಯುವತಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿದ್ದೀರಾ? ಕರ್ನಾಟಕದಲ್ಲೊಂದು ʼಮಿನಿ ಇರಾನ್‌ʼ- ಖಮೇನಿ ಜೊತೆ ಅಲಿಪುರಕ್ಕಿರುವ ನಂಟೇನು?

“ಉಡುಪಿ ಶಾಲೆಯ ಬಾಂಬ್ ಬೆದರಿಕೆ ಪ್ರಕರಣದ ಆರೋಪಿಯ ಹೆಚ್ಚಿನ ತನಿಖೆಗಾಗಿ ನಮ್ಮ ಕಸ್ಟಡಿಗೆ ನೀಡುವಂತೆ ಅಹಮದಾಬಾದ್‌ ಪೊಲೀಸರಿಗೆ ಪತ್ರ ಬರೆಯಲಾಗುವುದು. ಅವರ ತನಿಖೆ ಮುಗಿದ ಬಳಿಕ ಆರೋಪಿಯನ್ನು ನಮ್ಮ ವಶಕ್ಕೆ ನೀಡುವ ಸಾಧ್ಯತೆ ಇದೆ. ಅದರಂತೆ ಉಡುಪಿಯ ಪ್ರಕರಣದ ತನಿಖೆಯನ್ನು ನಡೆಸಲಾಗುವುದು” ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...