ಉಡುಪಿ | ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿ ಹೊಂದಿರುವ ಬಜೆಟ್: ರಮೇಶ್ ಕಾಂಚನ್

Date:

ಭಾರತದ ಇತಿಹಾಸದಲ್ಲೇ ದಾಖಲೆಯ 15ನೇ ಬಜೆಟ್ ಮಂಡಿಸಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ 5 ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸುವುದರ ಜತೆಗೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿಯನ್ನು ಹೊಂದಿರುವ ಹೊಸ ಯೋಜನೆಗಳನ್ನು ನೀಡಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

- Advertisement -

ಉಡುಪಿಯಲ್ಲಿ ಪತ್ರಿಕಾ ಪ್ರಕಟಣೆಗೆ ತಿಳಿಸಿರುವ ಅವರು, “ಸಮುದ್ರದ ಮೀನುಗಾರಿಕೆಗೆ ತೆರಳಿದಾಗ ಅಪಘಾತ, ಅನಾರೋಗ್ಯಕ್ಕೆ ತುತ್ತಾದ ಮೀನುಗಾರರ ರಕ್ಷಣೆಗೆ ₹7 ಕೋಟಿ ವೆಚ್ಚದಲ್ಲಿ ರಾಜ್ಯದ ಪ್ರಪ್ರಥಮ ಸಮುದ್ರ ಆಂಬುಲೆನ್ಸ್ ಖರೀದಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿದೆ. ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಮೀನುಗಾರರಿಗೆ ನೀಡುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು ₹1,500 ರಿಂದ ₹3,000ಕ್ಕೆ ಹೆಚ್ಚಳ ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಅಂಗನವಾಡಿ ಕಾರ್ಯಕರ್ತೆಯರಿಗೆ ₹90 ಕೋಟಿ ವೆಚ್ಚದಲ್ಲಿ 75.938 ಸ್ಮಾರ್ಟ್‌ಫೋನ್ ಹಾಗೂ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರ ಪ್ರಾರಂಭಿಸಲು ತೀರ್ಮಾನಿಸಿದೆ” ಎಂದು ಹೇಳಿದರು.

‘ಹಸಿವು ಮುಕ್ತ ಕರ್ನಾಟಕ’ ನಿರ್ಮಾಣದ ಗುರಿಯೊಂದಿಗೆ ‘ಅನ್ನ–ಸುವಿಧಾ’ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲಿವೆರಿ ಆಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ವ್ಯವಸ್ಥೆ ಜಾರಿ ಮಾಡಲಿದೆ.

“ಶಿಕ್ಷಣ ಕ್ಷೇತ್ರಕ್ಕೆ ಹಿಂದಿನ ಅವಧಿಗಿಂತ ದುಪ್ಪಟ್ಟು ಹಣ ನೀಡಿರುವ ಕ್ರಮ ಅಭೂತಪೂರ್ವ ನಿರ್ಧಾರವಾಗಿದೆ. ಸಮಾಜ ಕಲ್ಯಾಣ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಮೀಸಲಿಟ್ಟಿರುವುದು ಅಭಿನಂದನಾರ್ಹ. ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ, ಬಸವಣ್ಣ ಜನಿಸಿದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ವಚನ ಪ್ರಚಾರ ಕಾರ್ಯ ಸರ್ಕಾರದ ಬಸವಣ್ಣನ ವಿಚಾರಗಳೆಡೆಗೆ ಇರುವ ಬದ್ಧತೆಯನ್ನು ಪ್ರದರ್ಶಿಸಿದೆ” ಎಂದು ಹೇಳಿದರು.

“ಇ-ಆಡಳಿತ, ಆಡಳಿತ ಸುಧಾರಣೆ, ವೇತನ ಪರಿಷ್ಕರಣೆ, ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡಾ ಕ್ಷೇತ್ರಗಳ ಹೆಚ್ಚಿನ ಉತ್ತೇಜನಕ್ಕೆ ನೀಡಲಾಗಿದೆ. ನಾರಾಯಣಗುರು, ಪೆರಿಯಾರ್ ರಾಮಸ್ವಾಮಿ, ರಾಮಮನೋಹರ ಲೋಹಿಯಾ, ಬಾಬು ಜಗಜೀವನ್ ರಾಮ್ ಅವರ ಕೃತಿಗಳ ಕನ್ನಡ ಅನುವಾದಗಳನ್ನು ಮಾಡಲು ಉದ್ದೇಶಿಸಿರುವುದು ಕನ್ನಡಿಗರನ್ನು ಸೈದ್ಧಾಂತಿಕವಾಗಿ ಗಟ್ಟಿಗೊಳಿಸುವ ಪ್ರಯತ್ನವಾಗಿದೆ” ಎಂದು ಹೇಳಿದರು.

“ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದ್ದು, ಬಜೆಟ್‌ನಲ್ಲಿ ಇದನ್ನು ಉಲ್ಲೇಖಿಸಿ, ಅಗತ್ಯ ಕ್ರಮಕೈಗೊಂಡಿರುವುದು ಕನ್ನಡದ ಅಭಿವೃದ್ಧಿಯೆಡೆಗೆ ಕಾಂಗ್ರೆಸ್ ಸರ್ಕಾರದ ಬದ್ಧತೆಯ ಪ್ರತೀಕವಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಪಾಸ್ ಸೇರಿದಂತೆ ವಿವಿಧ ಯೋಜನೆಗಳನ್ನು ನೀಡುವ ಮೂಲಕ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಸರ್ಕಾರ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ₹100 ಕೋಟಿ ಅನುದಾನ ಮೀಸಲಿಟ್ಟಿದೆ. ಕುಡಿಯುವ ನೀರು, ಕೃಷಿ ಹಾಗೂ ಕೈಗಾರಿಕೆಗಳಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಜನವಿರೋಧಿ ನೀತಿ‌ಗೆ ಖಂಡನೆ; ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಪ್ರತಿಭಟನೆ

“ಪ್ರಸಕ್ತ ಸಾಲಿನಲ್ಲಿ ₹200 ಕೋಟಿ ಅಂದಾಜು ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿ, ಚೆಕ್ ಡ್ಯಾಂ ಮತ್ತು ಬ್ರಿಡ್ಜ್ ಕಂ ಬ್ಯಾರೇಜ್‌ನಂತಹ 115 ಕಾಮಗಾರಿ ಪ್ರಾರಂಭಿಸಲು ತೀರ್ಮಾನ ಮಾಡಲಾಗಿದೆ. ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ 46,829 ಶಾಲೆಗಳು 1,234 ಪಿಯು ಕಾಲೇಜುಗಳಿಗೆ ಉಪಯೋಗವಾಗಲಿದೆ” ಎಂದರು.

ಸಮಾಜದ ಎಲ್ಲ ವರ್ಗದ ಜನರಿಗೆ ಸಹಕಾರಿಯಾಗಲಿರುವ ಬಜೆಟ್ ಇದಾಗಿದ್ದು, ಇಂತಹ ಜನಪರ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...