ಉಡುಪಿ | ಕ್ರೇನ್ ತೊಟ್ಟಿಲಿನಿಂದ ಉರುಳಿಬಿದ್ದು ಓರ್ವನ ಸಾವು, ಕೆಲಸದವಳು ಗಂಭೀರ

Date:

ಕ್ರೇನ್ ಬಳಸಿಕೊಂಡು, ಅದರ ತೊಟ್ಟಿಲಿನಲ್ಲಿ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸಲು ಹೋಗಿದ್ದ ಇರ್ವರು‌ ತೊಟ್ಟಿಲು ವಾಲಿಕೊಂಡಿದರಿಂದ ಇರ್ವರು ನೆಲಕ್ಕುರುಳಿ ಬಿದ್ದಿರುವ‌ ದುರ್ಘಟನೆ ಕೋರ್ಟ್ ಹಿಂಬಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಛೇರಿ ಸನಿಹ‌ ಶನಿವಾರ ನಡೆದಿದೆ.

- Advertisement -

ಘಟನೆ ತಿಳಿದು ಧಾವಿಸಿ ಬಂದು ಗಂಭೀರ ಸ್ಥಿತಿಯಲ್ಲಿದ್ದ ಇರ್ವರ ಗಾಯಾಳುಗಳನ್ನು ಒಮ್ಮೆಗೆ ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಅದಾಗಲೇ ಪರೀಕ್ಷಿಸಿದ ವೈದ್ಯರಿಂದ ಪ್ರಾನ್ಸಿಸ್ ಪಟೊರ್ಡೋ (65 ವ) ಮೃತಪಟ್ಟಿರುವುದು ದೃಢಪಟ್ಟಿತು. ಮೃತರು ಮನೆ ಮಾಲಕರ ಸಹೋದರ ಎಂದು ತಿಳಿದುಬಂದಿದೆ. ಇವರೊಂದಿಗೆ ಕ್ರೇನ್‌ನಲ್ಲಿ ತೆರಳಿದ್ದ ಮನೆ ಕೆಲಸದಾಕೆ ಶಾರದ (35ವ) ಇವರಿಗೆ ಗಂಭೀರ ಗಾಯಗಳಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಮಲ್ಪೆ ಕಲ್ಮಾಡಿಯವರೆಂದು ಹೇಳಲಾಗಿದೆ. ಬಿದ್ದು ಇರ್ವರು ನರಳಾಡುತ್ತಿದ್ದರೂ, ಕ್ರೇನ್ ಚಾಲಕ ಗಾಯಾಳುಗಳ ರಕ್ಷಣೆಗೆ ಮುಂದೆ ಬಾರದೆ, ಕ್ರೇನೊಂದಿಗೆ ಸ್ಥಳದಿಂದ ಪರಾರಿಯಾಗಿರುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.‌ ದುರಂತದ ಸ್ವಷ್ಟ ವಿವರಗಳು ಇನ್ನಷ್ಟೇ ತಿಳಿದುಬರಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...