ಉಡುಪಿ | ಮರಾಠಿ ಸಮುದಾಯದ ಕುಟುಂಬಕ್ಕೆ ಜಾತಿನಿಂದನೆ; ದೂರು ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆ – ಆರೋಪ

Date:

ಮರಾಠಿ ಸಮುದಾಯದ ಕುಟುಂಬಕ್ಕೆ ಅವಾಚ್ಯವಾಗಿ ಜಾತಿ ನಿಂದನೆಗೈದು ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದಿಂದ ಎಸ್‌ಪಿಗೆ ಮನವಿ ಸಲ್ಲಿಸಿದರು.

- Advertisement -

“ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ, ಹೊಸೂರು ಗ್ರಾಮದ ಕರ್ಜೆ ಎಂಬಲ್ಲಿ ಮಾರ್ಚ್‌ 6ರಂದು  ಪರಿಶಿಷ್ಟ ಪಂಗಡದ ಮರಾಠಿ ಸಮುದಾಯದ ರಾಘವೇಂದ್ರ ನಾಯ್ಕ ಬಿನ್ ಸೋಮನಾಯ್ಕ ಅವರ ಮನೆಗೆ ಬಂದು ಮೃತ ತಾಯಿಯವರ 12ನೇ ದಿವಸದ ಕಾರ್ಯದಂದು, ಊರಿನ ಒಬ್ಬ ಪುರೋಹಿತರ ಮನೆಯ ಬ್ರಾಹ್ಮಣನಾಗಿ ದುಃಖತಪ್ತ ಕುಟುಂಬವನ್ನು ಸಂತೈಸುವುದನ್ನು ಬಿಟ್ಟು ಪೌರೋಹಿತ್ಯಕ್ಕೆ ತನ್ನನ್ನು ಕರೆಯಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ರಾಮಕೃಷ್ಣ ಅಡಿಗರು ಅವಾಚ್ಯ ಶಬ್ದಗಳಿಂದ ಹಿಯಾಳಿಸಿ ದೌರ್ಜನ್ಯ ಎಸಗಿರುವ ಬಗ್ಗೆ ದೂರು ನೀಡಿದರೂ ಕೂಡ ಈವರೆಗೆ ನ್ಯಾಯ ದೊರೆತಿಲ್ಲ” ಎಂದು ಮರಾಠಿ ಸಮಾಜ ಸೇವಾ ಸಂಘ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ಪ್ರಕರಣಕ್ಕೆ ಸಂಬಂಧಿಸಿ ಎಸ್‌ಸಿ/ಎಸ್‌ಟಿ ಕಾಯ್ದೆಯನ್ವಯ ದೂರು ದಾಖಲಿಸಿದರೂ ಇಂದಿಗೂ ನ್ಯಾಯ ದೊರಕದೇ ಇರುವುದು ಈ ಆಧುನಿಕ ಸಮಾಜದಲ್ಲಿ ಒಂದು ದುರಂತವೇ ಸರಿ. ಮರಾಠಿ ಸಮುದಾಯವು ಸಾತ್ವಿಕ ಹಾಗೂ ಸೌಮ್ಯ ಸ್ವಭಾವದ ಜನರನ್ನೊಳಗೊಂಡ ಸಮುದಾಯವಾದುದರಿಂದ ಇಲ್ಲಿಯ ತನಕ ತಾಳ್ಮೆ ಕಳೆದುಕೊಳ್ಳದೆ ನ್ಯಾಯ ಸಿಗಬಹುದೆಂಬ ನಿರೀಕ್ಷೆಯಲ್ಲಿ ದಿನ ಕಳೆದೆವು. ಮುಂದಿನ ದಿನಗಳಲ್ಲಿ ಜಿಲ್ಲಾ ಸಂಘಟನೆಯು ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದೆ.

“ಮರಾಠಿ ಸಮುದಾಯದವರು ರೊಚ್ಚಿಗೇಳುವ ಮುನ್ನ ಶ್ರೀಘ್ರದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯ ದೊರಕಿಸಿಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗರೆ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ ಏನು; ಬಿಜೆಪಿ ಪ್ರಶ್ನೆ

“ವಿಡಿಯೋ ಕ್ಲಿಪ್ ಸಾಕ್ಷಾಧಾರವಿದ್ದು, ಅದನ್ನು ಆಲಿಸಿದ ಮೇಲೂ ಸಂಬಂಧಿತ ಅಧಿಕಾರಿಗಳು ಕಾರ್ಯೋನ್ಮುಖರಾಗದೇ ಇರುವುದು ನಮಗೆ ಸಂಶಯಕ್ಕೊಳಪಡಿಸಿದೆ. ಇಂತಹ ಘಟನೆ ಇಡೀ ಸಮಾಜಕ್ಕೆ ಕಳಂಕ. ಪರಿಶಿಷ್ಟ ಪಂಗಡದ ನಮ್ಮ ಸಮುದಾಯ ಮಾತ್ರವಲ್ಲದೇ ಇತರ ದುರ್ಬಲರೊಂದಿಗೆ ಯಾವ ರೀತಿ ನಡೆದುಕೊಂಡರೂ ನಡೆಯುತ್ತದೆಂಬ ಸಂದೇಶವು ಅನಾಗರಿಕ, ದುರಂಹಾಕಾರಿಗಳಿಗೆ ಪ್ರಚೋದನೆ ನೀಡಿದಂತಾಗುತ್ತದೆ. ಆದುದರಿಂದ ಶೀಘ್ರವೇ ಆರೋಪಿಯನ್ನು ಬಂಧಿಸಿ ನ್ಯಾಯ ದೊರಕಿಸಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...