ಉಡುಪಿ | ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ

Date:

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ ಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಕ್ರೈಸ್ತ ಸಮುದಾಯದ ಶಾಸಕ ಕೆ ಜೆ ಜಾರ್ಜ್ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಕರಾವಳಿಯ ಐವಾನ್ ಡಿಸೋಜಾ ಅವರಿಗೆ ಮಂತ್ರಿ ಸ್ಥಾನವನ್ನು ನೀಡುವಂತೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದೆ.

- Advertisement -

ಕೆ ಜೆ ಜಾರ್ಜ್ ಅವರು ಅತ್ಯಂತ ಹಿರಿಯ ರಾಜಕಾರಣಿಯಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಅತ್ಯುನ್ನತವಾದ ಸೇವೆಯನ್ನು ನೀಡಿರುತ್ತಾರೆ. ಕ್ರೈಸ್ತ ಸಮುದಾಯಕ್ಕೆ ಈ ವರೆಗೆ ಇಂತಹ ಉನ್ನತ ಹುದ್ದೆ ಲಭಿಸಿಲ್ಲ ಈ ಬಾರಿಯಾದರೂ ಇಂತಹ ಅವಕಾಶ ಒದಗಿ ಬರಲಿದೆ ಎಂಬ ಆಶಾಭಾವನೆಯಿದ್ದು ಈ ನಿಟ್ಟಿನಲ್ಲಿ ಪಕ್ಷ ಗಮನ ಹರಿಸಬೇಕಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕರಾವಳಿಯಲ್ಲಿ ಕ್ರೈಸ್ತ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಐವನ್ ಡಿಸೋಜಾ ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಪರಿಷತ್ ಮುಖ್ಯ ಸಚೇತಕಾರಾಗಿ ಕ್ರೈಸ್ತ ಅಭಿವೃದ್ದಿ ನಿಗಮದಲ್ಲಿ ವಿವಿಧ ರೀತಿಯ ಜವಾಬ್ದಾರಿಯನ್ನು ವಹಿಸಿಕೊಂಡಿರುತ್ತಾರೆ, ಕಾಂಗ್ರೆಸ್ ಪಕ್ಷದ ಗೆಲುವಿಗೆ ಕ್ರೈಸ್ತ ಸಮುದಾಯದ ಕೊಡುಗೆ ಅಪಾರವಾಗಿದ್ದು ರಾಜ್ಯದ 23 ಕ್ಷೇತ್ರಗಳಲ್ಲಿ ಕ್ರೈಸ್ತ ಸಮುದಾಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ.

ಸಮುದಾಯಕ್ಕೆ ಪ್ರತಿ ಬಾರಿ ಉನ್ನತ ಸ್ಥಾನಗಳನ್ನು ನೀಡುವಾಗ ಅವಕಾಶ ವಂಚಿತವಾಗಿದ್ದು ಈ ಬಾರಿ ಡಿ ಕೆ ಶಿವಕುಮಾರ್ ಅವರು ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಅವಕಾಶ ನೀಡುವ ಕೆಲಸವನ್ನು ಮಾಡಬೇಕು. ಈ ಮೂಲಕ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಅವರಿಗೆ ಸಚಿವ ಸ್ಥಾನವನ್ನು ನೀಡಿದ್ದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಏಳಿಗೆಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ಸಂಘಟನೆಯ ಅಧ್ಯಕ್ಷರಾದ ಮೆಲ್ವಿನ್ ಆರಾನ್ಹಾ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...