ಉಡುಪಿ | “ಚಿಗುರು” ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಶುಕ್ರವಾರ ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಗುರು 2025-26 ನೇ ಸಾಲಿನ ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

- Advertisement -

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿಂದೂ ಹಿರಿಯ ಪ್ರಾಥಮಿಕ ಶಾಲೆ, ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಗಣಪತಿ ಕಾರಂತ, ಬಾಲ ಪ್ರತಿಭೆಗಳ ಅನಾವರಣಗೊಳಿಸಲು ಚಿಗುರು ಒಂದು ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಉದ್ಯಾವರ ನಾಗೇಶ್ ಕಾರ್ಯಕ್ರಮದ ಕುರಿತು ಮಾತನಾಡಿದರು. ಅಭಿರಾಮ್ ಪಾಠಕ್ ಮತ್ತು ತಂಡದಿಂದ ಏಕವ್ಯಕ್ತಿ ಪ್ರದರ್ಶನ, ವೀಕ್ಷಿತಾ ಮತ್ತು ತಂಡದಿAದ ಸುಗಮ ಸಂಗೀತ, ಶ್ರೀ ವಿಶ್ವ ಯಕ್ಷ ನೃತ್ಯ ಕಲಾ ನಿಕೇತನ ನೀಲಾವರ ಇದರ ಸಂಚಿತಾ ಮತ್ತು ತಂಡದಿಂದ ಶಾಸ್ತ್ರೀಯ ನೃತ್ಯ, ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಭವಿಷ್ ಮತ್ತು ತಂಡದಿಂದ ಜನಪದ ಗೀತೆ, ಶ್ರೀ ಸಾಯಿ ಸ್ವರಾಂಜಲಿ ಹೊಸೂರು ಕರ್ಜೆ ಇದರ ಹೆಚ್ ಪ್ರಣತಿ ಭಟ್ ಮತ್ತು ತಂಡದಿಂದ ಶಾಸ್ತ್ರಿಯ ಸಂಗೀತ ಮತ್ತು ಡಾ.ಚಂದ್ರಶೇಖರ್ ಕಂಬಾರ ಇವರು ರಚಿಸಿ ಶ್ರೀ ಸಂತೋಷ ನಾಯಕ್ ಪಟ್ಲ ಇವರು ನಿರ್ದೇಶಿಸಿದ “ಪುಷ್ಪ ರಾಣಿ” ನಾಟಕವು ಎಸ್.ವಿ.ಎಸ್ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಪ್ರದರ್ಶನ ನೀಡಲಾಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಮತ್ತು ಸಾಂಸ್ಕೃತಿಕ ಚಿಂತಕಿ ಹೇಮಲತಾ, ಕನ್ನಡ ಸಾಹಿತ್ಯ ಪರಿಷತ್ ನ ಕಾಪು ತಾಲೂಕು ಘಟಕದ ಜತೆ ಕಾರ್ಯದರ್ಶಿ ಕೃಷ್ಣ ಕುಮಾರ್ ರಾವ್, ಶಾಲೆಯ ಬೋಧಕ ಮತ್ತು ಬೋದಕೇತರ ವರ್ಗ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ವರ್ಷಾ ಬಿ ಕೋಟ್ಯಾನ್ ನಿರೂಪಿಸಿ, ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನುರಾಧ ಪಿ. ಶೆಟ್ಟಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸರ್ಕಾರಿ ಶಾಲೆಗಳನ್ನು ಖಾಸಗಿಯವರೊಂದಿಗೆ ಜೋಡಿಸುವ ಯೋಜನೆಗೆ ಎಸ್‌ಎಫ್‌ಐ ತೀವ್ರ ವಿರೋಧ

ರಾಜ್ಯದ 2 ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ಹಾಗೂ...

ಯಾದಗಿರಿ | ದೋರನಹಳ್ಳಿ ಪಟ್ಟಣ ಪಂಚಾಯಿತಿಗೆ ಅನುದಾನ ಬಿಡುಗಡೆಗೆ ಆಗ್ರಹ: ನಮ್ಮ ಕರ್ನಾಟಕ ಸೇನೆ ಮನವಿ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ...

ಯಾದಗಿರಿ | ಗೋಡೆಗೆ ಕಾರು ಡಿಕ್ಕಿ, ನಾಲ್ವರು ಯುವಕರು ಸ್ಥಳದಲ್ಲೇ ಸಾವು!

ನಿರ್ಮಾಣ ಹಂತದ ಚೆನ್ನೈ- ಸೂರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಗದಗ | ಸರ್ಕಾರಿ ಕನ್ನಡ ಶಾಲೆಗಳನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ದತ್ತು ನೀಡಲು ನಿರ್ಧಾರ; ಎಸ್ಎಫ್ಐ ಖಂಡನೆ

"ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವೈಯಕ್ತಿಕ ಕೊಡುಗೆದಾರರ (Individual CSR) ಸಭೆಯಲ್ಲಿ...