ಉಡುಪಿ | ಅಂಗನವಾಡಿ ನೌಕರರಿಗೆ ಸಾಮಾಜಿಕ ಸಮೀಕ್ಷೆಗೆ ರಿಯಾಯಿತಿ ನೀಡಲು ಆಗ್ರಹಿಸಿ ಧರಣಿ

Date:

ಸಾಮಾಜಿಕ ಸಮೀಕ್ಷೆ ಮಾಡದ ಅನಾರೋಗ್ಯ ಪೀಡಿತ ಮಹಿಳೆಯರಿಗೆ ಸಮೀಕ್ಷೆಯಿಂದ ರಿಯಾಯಿತಿ ನೀಡಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.

- Advertisement -

ಧರಣಿಯನ್ನುದ್ದೇಶಿಸಿ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲ ನಾಡ ಮಾತನಾಡಿ, ಕೆಲವು ಅಂಗನವಾಡಿ ನೌಕರರು ಕೆಲವು ಸಮಸ್ಯೆಗಳಿಗಾಗಿ ಸಮೀಕ್ಷೆಯಿಂದ ರಿಯಾಯಿತಿ ಕೇಳಿದರೂ ಜನಪ್ರತಿನಿಧಿ ಕಾಯ್ದೆಯಡಿ ವಜಾ ಮಾಡಲಾಗುವುದು ಎಂದು ಅಧಿಕಾರಿಗಳು ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಚುನಾವಣಾ ಆಯೋಗದ ಸುತ್ತೋಲೆಯಲ್ಲಿ ಮತಗಟ್ಟೆ ಅಧಿಕಾರಿ ಹಾಗೂ ಸಾಮಾಜಿಕ ಸಮೀಕ್ಷೆಗೆ ಸಿ ದರ್ಜೆ ನೌಕರರನ್ನು ನೇಮಿಸಿಕೊಳ್ಳಬೇಕು ಎಂದಿದ್ದರೂ ಸುತ್ತೋಲೆಯನ್ನು ಕೆಳ ಅಧಿಕಾರಿಗಳು ಕಡೆಗಣಿಸಿ ಅಧಿಕಾರಿಗಳು ನೌಕರರನ್ನು ಜೈಲಿಗೆ ಕಳುಹಿಸುವ ಬೆದರಿಕೆ ಮಹಿಳೆಯರಿಗೆ ಮಾನಸಿಕ ಹಿಂಸೆಯಾಗಿದೆ ಅಲ್ಲದೇ ಸಮೀಕ್ಷೆಯನ್ನು ಸ್ಥಳೀಯವಾಗಿ ನೀಡದೇ ಬೇರೆ ಬೇರೆ ದೂರದ ಗ್ರಾಮಗಳಿಗೆ ನಿಯೋಜಿಸಿರುವುದು ಅಂಗನವಾಡಿ ನೌಕರರಿಗೆ ಸಮಸ್ಯೆಯಾಗಿದೆ. ಈ ಕೆಲಸಗಳ ಜೊತೆ ಜೊತೆಗೆ ಎಫ್ ಎಸ್ ಆರ್ ಬಿಎಲ್ಓ ಕೆಲಸಗಳನ್ನು ಮಾಡಬೇಕು ಎಂದು ನೋಟಿಸ್ ನೀಡುತ್ತಿರುವುದು ನೌಕರರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೂಡ ಈ ಮಹಿಳೆಯರನ್ನು ಮಾನವೀಯತೆ ಇಲ್ಲದೆ ಗುಲಾಮರಂತೆ ದುಡಿಸುತ್ತಿದೆ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 09 30 at 12.27.37 AM 1

ಧರಣಿಗೆ ಅಪರ ಜಿಲ್ಲಾಧಿಕಾರಿ ಭೇಟಿ
ಧರಣಿ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿ ಸಿ ದರ್ಜೆಯ ನೌಕರರು ಜಿಲ್ಲೆಯಲ್ಲಿ ಕಡಿಮೆ ಇರುವುದರಿಂದ ಅಂಗನವಾಡಿ ನೌಕರರು ಸಮೀಕ್ಷಗೆ ಕೈಜೋಡಿಸಬೇಕು ಇಲ್ಲವಾದಲ್ಲಿ ನೌಕರರ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಧರಣಿಯಲ್ಲಿ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಭಾರತಿ, ಯಶೋಧ ಕೆ, ಆಶಾಲತಾ, ಶಾಂತ, ಪ್ರೇಮ, ಪ್ರಮೀಳಾ ಉಡುಪಿ, ಜಯಲಕ್ಷ್ಮಿ, ಸರೋಜ, ಸರೋಜಿನಿ ಬ್ರಹ್ಮಾವರ ಇದ್ದರು. ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಅಧ್ಯಕ್ಷ ಶಶಿಧರ ಗೊಲ್ಲ, ಜಿಲ್ಲಾ ಕೋಶಾಧಿಕಾರಿ ಕವಿರಾಜ್ ಎಸ್ ಕಾಂಚನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...