ಉಡುಪಿ | ಮನರೇಗಾ ಪುನರ್ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ ಮುಷ್ಕರ

Date:

ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಮನರೇಗಾ) ಯನ್ನು ಪುನಃ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಬನ್ನಂಜೆ ವಾರ್ಡ್‌ನ ಕಾಂಗ್ರೆಸ್ ಕಾರ್ಯಕರ್ತರು ಇಂದು ಉಡುಪಿ ತಾಲೂಕು ಕಚೇರಿ ಪಕ್ಕದಲ್ಲಿ ಧರಣಿ ಮುಷ್ಕರ ನಡೆಸಿದರು.

- Advertisement -

ಬನ್ನಂಜೆ ಕಾಂಗ್ರೆಸ್ ಮುಖಂಡ ಸುರೇಶ್ ಶೆಟ್ಟಿ ಬನ್ನಂಜೆ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ ಮನರೇಗಾ ಯೋಜನೆಯ ಮೂಲ ಸ್ವರೂಪವನ್ನು ದುರ್ಬಲಗೊಳಿಸಿ ಗ್ರಾಮೀಣ ಜನರ ಉದ್ಯೋಗ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ಶ್ರೀ ಪ್ರಸಾದ್ ರಾಜ್ ಕಾಂಚನ್, ಕೆಪಿಸಿಸಿ ಸದಸ್ಯ ಶ್ರೀ ದಿನೇಶ್ ಪುತ್ರನ್, ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ದಿನಕರ್ ಹೇರೂರು ಮಾತನಾಡಿ, ಮನರೇಗಾ ಯೋಜನೆ ಗ್ರಾಮೀಣ ಬಡವರ ಜೀವನಾಡಿಯಾಗಿದ್ದು, ತಕ್ಷಣವೇ ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಶ್ರೀ ಶೇಖರ್ ಶೆಟ್ಟಿ, ಶ್ರೀ ಪ್ರಭಾಕರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಡಾ. ಸಂದೀಪ್ ಸನಿಲ್, ಶ್ರೀ ಸುರೇಂದ್ರ, ಶ್ರೀ ಅಜರುದ್ದೀನ್, ಶ್ರೀ ಪ್ರವೀಣ್ ಪ್ರಭಾಕರ್, ಶ್ರೀ ರವಿ ಶೆಟ್ಟಿ, ಶ್ರೀ ಪ್ರಭಾಕರ್ ಶೆಟ್ಟಿ (ಕರಾವಳಿ), ಶ್ರೀ ಹಬೀಬ್ ಆಲಿ, ಶ್ರೀ ಸದಾಶಿವ ಕಟ್ಟೆಗುಡ್ಡೆ, ಶ್ರೀ ಚೇತನ್ ಪೂಜಾರಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...