ಉಡುಪಿ | ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ

Date:

ಭಾರತೀಯ ದಂಡ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಡುಪಿಯ ಹಿರಿಯ ನ್ಯಾಯವಾದಿ ಎಂ ಶಾಂತಾರಾಮ್ ಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ.

- Advertisement -

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ವಕೀಲರ ಸಂಘ, ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಇತರ ಎರಡು ಕಾನೂನುಗಳ ಕುರಿತು ಮಾತನಾಡಿ, “ಬ್ರಿಟೀಷರ ಕಾಲದಲ್ಲಿ ಜಾರಿಗೆ ಬಂದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜ಼ರ್ ಕೋಡ್(ಸಿಆರ್‌ಪಿಸಿ), ಭಾರತ ಸಾಕ್ಷ ಅಧಿನಿಯಮ(ಇಂಡಿಯನ್ ಎವಿಡೆನ್ಸ್ ಆ್ಯಕ್ಟ್) ತುಂಬಾ ಪ್ರಮುಖವಾದ ಕಾನೂನುಗಳು. ಇದೂ ಕೂಡ ನಿಜವಾದ ಕ್ರಿಮಿನಲ್ ಜಸ್ಟೀಸ್ ಸಿಸ್ಟಮ್. ಈ ಮೂರು ಕಾನೂನುಗಳು ರತ್ನಗಳಿದ್ದಂತೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲದಿದ್ದರೂ ಯಾವ ಉದ್ದೇಶಕ್ಕೆ ಹೊಸ ಕಾನೂನು ತರಲಾಗಿದೆ” ಎಂಬುದು ಅರ್ಥವಾಗುತ್ತಿಲ್ಲ” ಎಂದರು.

“ಭಾರತೀಯ ದಂಡ ಕ್ರಿಯಾ ಸಂಹಿತೆ ಕಾನೂನುಗಳನ್ನು ಬದಲಾಯಿಸುವಂತೆ ಜನರಿಂದ ಯಾವುದೇ ಒತ್ತಾಯಗಳು ಬಂದಿಲ್ಲ ಮತ್ತು ಯಾವುದೇ ಪಕ್ಷಗಳ ಪ್ರಣಾಳಿಕೆಯಲ್ಲೂ ಆ ಬೇಡಿಕೆ ಇರಲಿಲ್ಲ. ಆದರೂ ಏಕಾಏಕಿ ಈ ಹೊಸ ಕಾನೂನುಗಳನ್ನು ಜನರ ಮೇಲೆ ಏರಲಾಗುತ್ತಿದೆ. ಕಾಲಕ್ಕೆ ತಕ್ಕಂತೆ ಕಾನೂನು ಬದಲಾಗಬೇಕು. ಅದರಂತೆ ಹಲವು ಕಾನೂನುಗಳಿಗೆ ತಿದ್ದುಪಡಿ ಕೂಡ ಆಗಿದೆ. ಆದರೆ ಇಡೀ ಕಾನೂನುಗಳನ್ನೇ ಬದಲಾಯಿಸುವ ಅಗತ್ಯ ಇದೆಯೇ ಎಂಬುದು ಎಲ್ಲರ ಪ್ರಶ್ನೆಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕರ್ನಾಟಕ ಒನ್‌ನಲ್ಲಿ ಬಸ್ ಪಾಸ್ ವಿತರಣೆಗೆ ಹೆಚ್ಚಿನ ಹಣ ವಸೂಲಿ; ಆರೋಪ

ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ ರವೀಂದ್ರ ನಾಥ್ ಶಾನುಭೋಗ್,  ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಮುಖ್ಯ ಅತಿಥಿಯಾಗಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಪತ್ರಕರ್ತ ಮೈಕಲ್ ರೊಡ್ರಿಗಸ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...