ಉಡುಪಿ | ಕಾರ್ಪೊರೇಟ್-ಕೋಮುವಾದ ಮೈತ್ರಿ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುತ್ತಿದೆ: ಸುರೇಶ್ ಕಲ್ಲಾಗರ

Date:

ಉಡುಪಿಯಲ್ಲಿ ಮೇ ದಿನಾಚರಣೆ ಕಾರ್ಪೊರೇಟ್-ಕೋಮುವಾದ ಮೈತ್ರಿಯಿಂದ ಕಾರ್ಮಿಕರನ್ನು ಬಂಡವಾಳಗಾರರ ಗುಲಾಮರಾಗಿ ಮಾಡಿ ಗುಲಾಮಗಿರಿಗೆ ತಳ್ಳುತ್ತಿದ್ದಾರೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.

ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿಂದ ಹೊರಟ ಮೆರವಣಿಗೆ ಅಜ್ಜರಕಾಡು ಹುತಾತ್ಮ ಚೌಕದಲ್ಲಿ ನಡೆದ ಮೇ ದಿನಾಚರಣೆ ಬಹಿರಂಗ ಸಭೆಯಲ್ಲಿ ಮಾತನಾಡಿದರು.

ಜಾತಿ, ಮತ, ಧರ್ಮದ ಆಧಾರದಲ್ಲಿ ಕಾರ್ಮಿಕರನ್ನು ಎತ್ತಿ ಕಟ್ಟಿ ಕೋಮುವಾದದ ಅಡಿಯಾಳಾಗಿ ಮಾಡುವ ಬಿಜೆಪಿ ಅಪಾಯಕಾರಿ ನೀತಿಯ ವಿರುದ್ಧ ರೈತರು ಕಾರ್ಮಿಕರು ಕೂಲಿಕಾರರು ನೌಕರರು ಒಂದಾಗಿ ವರ್ಗ ಹೋರಾಟವನ್ನು ತೀವ್ರಗೊಳಿಸ ಬೇಕು ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕರೋನದ ಸಂಕಷ್ಟದ ದಿನಗಳಲ್ಲಿ ಕೇಂದ್ರ ಸರ್ಕಾರದ ಮಂತ್ರಿಮಂಡಲದಲ್ಲಿ 44 ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಿ 4 ಸಂಹಿತೆ ತಂದು ಸೌಲಭ್ಯಗಳನ್ನು ಕಸಿದು ಕೊಳ್ಳಲಾಗಿದೆ ಎಂದರು.

ಕನಿಷ್ಠ ವೇತನ 31,000 ರೂ. ನೀಡಲು ಕಾರ್ಮಿಕ ವರ್ಗ ಹೋರಾಟ ನಡೆಸುತ್ತಿದ್ದಾರೆ ಆದರೆ ಮೋದಿಯವರು ತಳಮಟ್ಟದ ಕನಿಷ್ಠ ವೇತನ 178 ರೂ. ಕಾನೂನುಬದ್ಧ ಗೊಳಿಸಿರುವುದು ಕಾರ್ಮಿಕ ವರ್ಗದ ಬಗ್ಗೆ ಬಿಜೆಪಿ ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ ಜನವಿರೋಧಿ ನೀತಿಗೆ ಸಾಕ್ಷಿಯಾಗಿದೆ ಎಂದರು.

ಪ್ರಗತಿಪರ ಚಿಂತಕರಾದ ಪ್ರೊಫೆಸರ್ ಫಣಿರಾಜ್ ಮೇ ದಿನಾಚರಣೆಗೆ ಸೌಹಾರ್ದ ಮಾತುಗಳನ್ನಾಡಿ, ಕಾರ್ಮಿಕರು ತಮ್ಮ ಹಕ್ಕುಗಳ ರಕ್ಷಣೆಗಾಗಿ ರಾಜಕೀಯ ಮಾಡಬೇಕಾಗಿದೆ ದೇಶದ ಸಂಪತ್ತು ಸ್ರಷ್ಠಿ ಮಾಡುವವರಿಗೆ ದೇಶದ ಸಂಪತ್ತು ಸಿಗಬೇಕಾಗಿದೆ ಅಂತಹ ಅರಿವು ಪಡೆದಾಗ ಕಾರ್ಮಿಕರು ಮೇ ದಿನದ ಮಹತ್ವ ಮೂಡಲು ಸಾಧ್ಯ ಎಂದು ಹೇಳಿದರು.

ಸಿಐಟಿಯು ಮುಖಂಡ ಶೇಖರ ಬಂಗೇರ ಮೇ ದಿನಾಚರಣೆ ಸಭೆಯ ಅಧ್ಯಕ್ಷತೆವಹಿಸಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೀಟ್ ಅವ್ಯವಹಾರ: ನ್ಯಾಯಾಂಗ ತನಿಕೆಗೆ ಡಿವಿಪಿ ಆಗ್ರಹ

ನೀಟ್‌ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು....

ದರ್ಶನ್ ಪ್ರಕರಣ | ವಿಶೇಷ ಪ್ರಾಸಿಕ್ಯೂಟ‌ರ್ ಆಗಿ ಪಿ ಪ್ರಸನ್ನ ಕುಮಾರ್‌ ನೇಮಕ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳು...