ಉಡುಪಿ | ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟಕ್ಕೆ ಯತ್ನ, ಇಬ್ಬರ ಬಂಧನ

Date:

ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ಪಾಡಿಗಾರಿನ ರಾಘವೇಂದ್ರ (36) ಹಾಗೂ ಪೆರ್ಡೂರು ಕುಂಜದಕಟ್ಟೆಯ ಸುಧೀಂದ್ರ ಶೆಟ್ಟಿ ಯಾನೆ ಬಾಬು (36) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಫೆ.17ರ ರಾತ್ರಿ ಸುಮಾರು 10:30ರ ವೇಳೆ ಪೆರ್ಡೂರು ದೇವಸ್ಥಾನದ ಎದುರಿನ ಗದ್ದೆಯಲ್ಲಿ ಮೇಯುತ್ತಿದ್ದ ಕರುವನ್ನು ಕಳವು ಮಾಡಿ, ಕಸಾಯಿಖಾನೆಗೆ ಮಾರಾಟ ಮಾಡುವ ಉದ್ದೇಶದಿಂದ ಆಟೋ ರಿಕ್ಷಾದಲ್ಲಿ ಸಾಗಿಸಲು ಯತ್ನಿಸಿದ್ದರೆಂದು ಆರೋಪಿಸಲಾಗಿದೆ. ಈ ಕುರಿತು ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ-2020ರ ಕಲಂ 5 ಹಾಗೂ 12ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ನಿರ್ದೇಶನದಂತೆ, ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪೀಕೃಷ್ಣ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಹಿರಿಯಡಕ ಠಾಣೆಯ ಪೊಲೀಸರು ಆರೋಪಿಗಳಾದ ರಾಘವೇಂದ್ರ ಹಾಗೂ ಸುಧೀಂದ್ರ ಶೆಟ್ಟಿ ಅವರನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...