ಉಡುಪಿ | ಸಾಮ್ರಾಜ್ಯಶಾಹಿ ನೀತಿಗಳ ವಿರುದ್ಧ ಜಾಗೃತಿ ಅಗತ್ಯ: ಪ್ರೊ ಫಣಿರಾಜ್

Date:

ಕೆಂಪು ಪುಸ್ತಕ ದಿನಾಚರಣೆ ಅಂಗವಾಗಿ “ಯು ಎಸ್ ಸಾಮ್ರಾಜ್ಯಶಾಹಿ ಭಾರತದ ಜನತೆಯ ಶತ್ರು” ಎಂಬ ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮವು ಇಂದು ಉಡುಪಿಯ ಸಿಪಿಎಂ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಯಿತು.

- Advertisement -

ಕಾರ್ಯಕ್ರಮದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಪ್ರಗತಿಪರ ಚಿಂತಕ ಪ್ರೊ. ಫಣಿರಾಜ್, 1848ರಲ್ಲಿ ಕಾರ್ಲ್ ಮಾರ್ಕ್ಸ್ ಮತ್ತು ಫ್ರೆಡ್ರಿಕ್ ಎಂಗೆಲ್ಸ್ ರಚಿಸಿದ ಕಮ್ಯುನಿಸ್ಟ್ ಪ್ರಣಾಳಿಕೆಯ ಬಿಡುಗಡೆಯ ನೆನಪಿನಲ್ಲಿ ಜಗತ್ತಿನಾದ್ಯಂತ ಕೆಂಪು ಪುಸ್ತಕ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು. ಈ ಕೃತಿ ಬೈಬಲ್ ನಂತರ ಜಗತ್ತಿನಲ್ಲಿ ಅತಿ ಹೆಚ್ಚು ಮುದ್ರಣ ಕಂಡು ಅನೇಕ ಭಾಷೆಗಳಲ್ಲಿ ಪ್ರಕಟಗೊಂಡ ಮಹತ್ವದ ಗ್ರಂಥವೆಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
1009707450

ಮುಂದುವರೆದು ಮಾತನಾಡಿದ ಅವರು, ಅಮೇರಿಕಾ ಸಾಮ್ರಾಜ್ಯಶಾಹಿಯು ಸಮಾಜವಾದಿ ರಾಷ್ಟ್ರಗಳ ಸಂಪತ್ತನ್ನು ಲೂಟಿ ಮಾಡಲು ನಿರಂತರ ಮಿಲಿಟರಿ ದಾಳಿಗಳು ಮತ್ತು ರಾಜಕೀಯ ಒತ್ತಡಗಳನ್ನು ಬಳಸುತ್ತಿದೆ ಎಂದು ಆರೋಪಿಸಿದ ಅವರು, ಭಾರತದ ಮೇಲೂ ನೇರ ಸೈನಿಕ ದಾಳಿಯ ಬದಲಿಗೆ ರೈತರು ಹಾಗೂ ಕಾರ್ಮಿಕರ ಪರವಾದ ಕಾನೂನುಗಳನ್ನು ಬದಲಾಯಿಸುವ ಮೂಲಕ ನೀತಿಗಳನ್ನು ತಮ್ಮ ಪರ ಮಾಡಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು. ಕಡಿಮೆ ಬೆಲೆಗೆ ರಷ್ಯಾದಿಂದ ತೈಲ ಪಡೆಯುವುದನ್ನು ವಿರೋಧಿಸಿ ದುಬಾರಿ ತೈಲ ಖರೀದಿಸಲು ಒತ್ತಡ ತರುವ ನೀತಿಗಳು ಜನರ ಮೇಲೆ ಆರ್ಥಿಕ ಹೊರೆ ಹಾಕುವಂತಿವೆ ಎಂದರು.

1009707453

ಸಾಮ್ರಾಜ್ಯಶಾಹಿ ನೀತಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದ್ದು, ಅದಿಲ್ಲದೆ ದೇಶದ ಭವಿಷ್ಯಕ್ಕೆ ಅಪಾಯ ಎದುರಾಗಬಹುದು ಎಂದು ಎಚ್ಚರಿಸಿದರು. ಇದರ ವಿರುದ್ಧ ಸಂಘಟಿತ ಆಂದೋಲನಗಳು ನಡೆಯಬೇಕೆಂದು ಕರೆ ನೀಡಿದರು.

ಕಮ್ಯುನಿಸ್ಟ್ ಪ್ರಣಾಳಿಕೆ ಬಿಡುಗಡೆಯ ದಿನವನ್ನು ಕೆಂಪು ಪುಸ್ತಕ ದಿನವಾಗಿ ಆಚರಿಸುವ ಪರಂಪರೆ ವಿಶ್ವದಾದ್ಯಂತ ಇದೆ ಎಂದು ಹೇಳಿದ ಅವರು, ಸಂಘಟನೆಗಳನ್ನು ಬಲಪಡಿಸಲು ಮತ್ತು ಗಟ್ಟಿಗೊಳಿಸಲು ಈ ಕೃತಿಯನ್ನು ಪುನಃ ಪುನಃ ಓದುವುದು ಅಗತ್ಯವೆಂದು ಹೇಳಿದರು.

1009707452

ಬಂಡವಾಳಶಾಹಿಗಳ ಒಕ್ಕೂಟವೇ ಸಾಮ್ರಾಜ್ಯಶಾಹಿ ಎಂದು ಅಭಿಪ್ರಾಯಪಟ್ಟ ಅವರು, ಭಾರತದಲ್ಲಿ ಬ್ರಿಟಿಷರ ಕಾಲದಿಂದಲೇ ಹೊಸಹತುಷಾಹಿಯ ಲಕ್ಷಣಗಳು ಕಂಡುಬಂದಿವೆ ಎಂದು ಹೇಳಿದರು. ಯಾವುದೇ ರಾಷ್ಟ್ರ ಸ್ವತಂತ್ರವಾದರೂ ಅದರ ಆರ್ಥಿಕ-ರಾಜಕೀಯ ವ್ಯವಸ್ಥೆಯನ್ನು ತಮ್ಮ ಪ್ರಭಾವದಲ್ಲಿ ಇಡುವುದು ಸಾಮ್ರಾಜ್ಯಶಾಹಿ ಶಕ್ತಿಗಳ ಪ್ರಮುಖ ಅಜೆಂಡಾ ಎಂದು ಹೇಳಿದರು.

ಹೊಸ ಕಾರ್ಮಿಕ ನೀತಿಗಳು ಸಂಘಟನೆಗಳನ್ನು ದುರ್ಬಲಗೊಳಿಸುವ ಮೊದಲ ಹೆಜ್ಜೆಯಾಗಿದ್ದು, ಕಾನೂನುಗಳ ಮೂಲಕ ಕಾರ್ಮಿಕ ಸಂಘಟನೆಗಳ ಶಕ್ತಿಯನ್ನು ಒಡೆಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದರು. ಕರಾಳ ಕಾನೂನುಗಳನ್ನು ವಿರೋಧಿಸುವ ಸಂಘಟನೆಗಳ ಶಕ್ತಿಯನ್ನು ಏಕೀಕರಿಸಿ, ಚಳುವಳಿಗಳನ್ನು ಕಟ್ಟುವ ಮೂಲಕ ಸಾಮ್ರಾಜ್ಯಶಾಹಿ ಶಕ್ತಿಗಳ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯ ಮತ್ತು ಸಮಾಜದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಈದಿನ.ಕಾಮ್ ಜೊತೆ ಮಾತನಾಡಿದ ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, 1848ರ ಫೆಬ್ರವರಿ 21ರಂದು ಪ್ರಕಟವಾದ “ಕಮ್ಯುನಿಸ್ಟ್ ಪ್ರಣಾಳಿಕೆ”ಯ ಬಿಡುಗಡೆಯ ನೆನಪಿನಲ್ಲಿ ಕೆಂಪು‌ ಪುಸ್ತಕ ದಿನವನ್ನು ಆಚರಿಸಲಾಗುತ್ತದೆ. ಈ ಕೃತಿಯನ್ನು ಕಾರ್ಲ್ ಮಾರ್ಕ್ಸ್ ಮತ್ತು ಫ್ರೆಡ್ರಿಕ್ ಎಂಗೆಲ್ಸ್ ರಚಿಸಿದ್ದು, ಕಾರ್ಮಿಕ ವರ್ಗದ ಹಕ್ಕುಗಳು, ವರ್ಗ ಹೋರಾಟ ಮತ್ತು ಸಮಾಜ ಪರಿವರ್ತನೆಯ ತತ್ವಗಳನ್ನು ವಿವರಿಸುತ್ತದೆ ಎಂದು ಹೇಳಿದರು.

ರೆಡ್ ಬುಕ್ ದಿನದ ಉದ್ದೇಶ ಸಮಾಜದಲ್ಲಿ ಅಸಮಾನತೆ, ಶೋಷಣೆ, ಬಂಡವಾಳಶಾಹಿ ಮತ್ತು ಸಾಮ್ರಾಜ್ಯಶಾಹಿ ನೀತಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಾಗಿದೆ. ಈ ದಿನ ವಿವಿಧ ಎಡಪಂಥೀಯ ಸಂಘಟನೆಗಳು, ಸಾಹಿತ್ಯ ಸಂಘಗಳು ಮತ್ತು ಸಾಮಾಜಿಕ ಸಂಘಟನೆಗಳು ಪುಸ್ತಕ ವಾಚನ, ಚರ್ಚೆ, ಸಂವಾದ, ಪುಸ್ತಕ ಬಿಡುಗಡೆ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ ಎಂದು ಹೇಳಿದರು.

1009707449

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಸುಂದರ್ ಮಾಸ್ತರ್, ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಎಚ್ ನರಸಿಂಹ ಮಾತನಾಡಿದರು.

ವಿವಿಧ ಕ್ಷೇತ್ರಗಳಲ್ಲಿ ದುಡಿಯವವರು ಕಾರ್ಯಕ್ರಮದಲ್ಲಿದ್ದು ಸಂವಾದದಲ್ಲಿ ಭಾಗವಹಿಸಿದ್ದರು. ಬಿಡುಗಡೆ ಕಾರ್ಯಕ್ರಮದಲ್ಲಿ ಸಿಪಿಎಂ ಮುಖಂಡರಾದ ಕವಿರಾಜ್ ಎಸ್ ಕಾಂಚನ್, ವೆಂಕಟೇಶ್ ಕೋಣಿ, ಉಮೇಶ್ ಕುಂದರ್, ಸುಭಾಶ್ಚಂದ್ರ ನಾಯಕ್, ಶೀಲಾವತಿ, ಸಹಬಾಳ್ವೆ ಸಂಘಟನೆಯ ಇದ್ರಿಸ್ ಹೂಡೆ, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು ಉಪಸ್ಥಿತರಿದ್ದರು. ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...