ಉಡುಪಿ | ಕ್ರೆಡಿಟ್ ಕಾರ್ಡ್ ನೆಪದಲ್ಲಿ ₹2.47 ಲಕ್ಷ ವಂಚನೆ: ಪ್ರಕರಣ ದಾಖಲು

Date:

ಮಣಿಪಾಲದ ಶಿವಳ್ಳಿ ಗ್ರಾಮದ ಮಾಂಡವಿ ಪರ್ಲ್ ಸಿಟಿ ಅಪಾರ್ಟ್‌ಮೆಂಟ್‌ ನಿವಾಸಿ ಸಂತೋಷ್ ಸಿ. ಕಾಮತ್ (60) ಎಂಬವರಿಗೆ ಕ್ರೆಡಿಟ್ ಕಾರ್ಡ್ ನೀಡುವ ನೆಪದಲ್ಲಿ ಅಪರಿಚಿತರು ಸುಮಾರು ₹2.47 ಲಕ್ಷ ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -

ಡಿಸೆಂಬರ್ 15 ರಂದು ಸಂಜೆ ಸುಮಾರು 6 ಗಂಟೆಗೆ ಸಂತೋಷ್ ಕಾಮತ್ ತಮ್ಮ ನಿವಾಸದಲ್ಲಿರುವ ವೇಳೆ, HDFC ಬ್ಯಾಂಕಿನ ಕ್ರೆಡಿಟ್ ಕಾರ್ಡ್ ವಿಭಾಗದ ಚಾನೆಲ್ ಪಾರ್ಟನರ್ ಎಂದು ಪರಿಚಯಿಸಿಕೊಂಡ MBYC11 ಸಂಸ್ಥೆಯ ಸೇಲ್ಸ್ ಅಸೋಸಿಯೇಟ್ ಆರೋಹಿ ಶರ್ಮ ಎಂಬವರು 7348179208 ಸಂಖ್ಯೆಯಿಂದ ವಾಟ್ಸಪ್ ಕರೆ ಮಾಡಿದ್ದರು. ಕರೆ ವೇಳೆ HDFC ಬ್ಯಾಂಕಿನ ರೆಗಾಲಿಯಾ ಗೋಲ್ಡ್ ಕ್ರೆಡಿಟ್ ಕಾರ್ಡ್ ನೀಡುವುದಾಗಿ ಹೇಳಿ, ವಾಟ್ಸಪ್ ವಿಡಿಯೋ ಕರೆ ಮೂಲಕ ಪಾನ್ ಕಾರ್ಡ್ ತೋರಿಸುವಂತೆ ಕೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಕರೆ ಮಾಡಿದವರ ಮಾತನ್ನು ನಂಬಿದ ಸಂತೋಷ್ ಸಿ. ಕಾಮತ್ ತಮ್ಮ ಪಾನ್ ಕಾರ್ಡ್ ಅನ್ನು ತೋರಿಸಿದ್ದು, ನಾಲ್ಕು ದಿನಗಳಲ್ಲಿ ನೋಂದಾಯಿತ ವಿಳಾಸಕ್ಕೆ ಕಾರ್ಡ್ ತಲುಪುತ್ತದೆ ಎಂದು ತಿಳಿಸಿ ಕರೆ ಕಡಿತಗೊಳಿಸಲಾಗಿದೆ.

ಆದರೆ, ಒಂದು ಗಂಟೆಯ ಬಳಿಕ ತಮ್ಮ ಮೂರು ಕ್ರೆಡಿಟ್ ಕಾರ್ಡ್‌ಗಳನ್ನು ಪರಿಶೀಲಿಸಿದಾಗ, ಒಟ್ಟು ₹2,47,283 ಮೊತ್ತ ಡೆಬಿಟ್ ಆಗಿರುವುದು ಕಂಡುಬಂದಿದೆ. ಪಿರ್ಯಾದಿದಾರರಿಗೆ ತಿಳಿಯದಂತೆ ಯಾರೋ ಅಪರಿಚಿತರು ಮೋಸದಿಂದ ಹಣ ವರ್ಗಾವಣೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...