ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು.
ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ಉಡುಪಿ ಜಿಲ್ಲೆ ವತಿಯಿಂದ ಕೊಲ್ಕತ್ತಾ ಹಾಗೂ ದೇಶಾದ್ಯಂತ ಸ್ತ್ರೀಯರು ಮತ್ತು ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ, ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಯವರಿಗೆ ಜಿಲ್ಲಾಧಿಕಾರಿಯವರ ಮೂಲಕ ಮನವಿ ಸಲ್ಲಿಸಲಾಯಿತು.
ದೇಶಾದ್ಯಂತ ಇಂತಹ ಘಟನೆಗಳು ಪದೇಪದೇ ನಡೆಯುತ್ತಿದ್ದು, ಸ್ತ್ರೀಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ, ಭದ್ರತೆ ದೊರೆಯುವಂತೆ ಮಾಡಲು ಕಠಿಣ ಕ್ರಮಗಳನ್ನು ಜರುಗಿಸುವ ಕಾನೂನನ್ನು ರಚಿಸಬೇಕು. ಅದನ್ನು ಅನುಷ್ಠಾನಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಒಕ್ಕೂಟದ 6 ಸಾವಿರದಷ್ಟು ಸದಸ್ಯರ ಸಹಿಯನ್ನೊಳಗೊಂಡ ಮನವಿಯನ್ನು ನೀಡಲಾಯಿತು.
ಇದನ್ನು ಓದಿದ್ದೀರಾ? GST ಬಗ್ಗೆ ಪ್ರಶ್ನಿಸಿದ ಖ್ಯಾತ ಉದ್ಯಮಿಯನ್ನು ಕ್ಷಮೆ ಕೇಳುವಂತೆ ಮಾಡಿದ ನಿರ್ಮಲಾ ಸೀತಾರಾಮನ್; ವಿಡಿಯೋ ವೈರಲ್
ಮಾನಿನಿ ರಾಜ್ಯ ಮಹಿಳಾ ಒಕ್ಕೂಟದ ಪ್ರತಿನಿಧಿ ಜೆನೆಟ್ ಬರ್ಬೋಜಾರವರ ಮುಂದಾಳುತ್ವದಲ್ಲಿ ಮನವಿ ನೀಡಲಾಯಿತು. ಈ ಸಂದರ್ಭ ಒಕ್ಕೂಟದ ಅಧ್ಯಕ್ಷರಾದ ಗ್ರೇಸಿ ಕುವೆಲ್ಲೊ, ಕಾರ್ಯದರ್ಶಿ ಫ್ಲೇವಿಯಾ ಡಿಸೋಜ, ಉಪಾಧ್ಯಕ್ಷರಾದ ಅನ್ಸಿಲ್ಲಾ ಲೂವಿಸ್, ಕೋಶಾಧಿಕಾರಿ ಸಿಂತಿಯಾ ಡಿಸೋಜಾ, ಸಹಕಾರ್ಯದರ್ಶಿ ಫ್ಲೋರಿನ್ ಮೆಂಡೊನ್ಸಾ, ಮರಿನಾ ಲೂವಿಸ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
