ಉಡುಪಿ | ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಒತ್ತು ನೀಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

ಉಡುಪಿ ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಕಡಲ ತೀರದಲ್ಲಿ ತೆಗೆದುಕೊಳ್ಳಬೇಕಾದ ಭದ್ರತೆ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...


ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಕಡಲಲ್ಲಿ ವಿಹರಿಸಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿ ಬೋಟ್‌ಗಳ ಮೊರೆ ಹೋಗುತ್ತಾರೆ. ಆದ್ದರಿಂದ ಜಿಲ್ಲೆಯ ಎಲ್ಲಾ ಪ್ರವಾಸಿ ಬೋಟ್‌ಗಳು ಬಂದರು, ಪೊಲೀಸ್, ಕರಾವಳಿ ಕಾವಲು ಪಡೆ, ಸ್ಥಳೀಯ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆದೇ ಕಡಲಿಗೆ ಇಳಿಯಬೇಕು ಎಂದರು.

ಜಿಲ್ಲೆಯಲ್ಲಿರುವ ಎಲ್ಲಾ ಪ್ರವಾಸಿ ಬೋಟುಗಳು ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ 45 ದಿನಗಳ ಒಳಗಾಗಿ ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮಾಡಿಕೊಂಡು ಅನುಮತಿ ಪಡೆದುಕೊಳ್ಳಬೇಕು. ಅನುಮತಿ ಪಡೆಯದೇ ಇರುವ ಪ್ರವಾಸೀ ಬೋಟ್‌ಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದ ಅವರು, ಅನುಮತಿ ಪಡೆದ ಪ್ರವಾಸಿ ಬೋಟ್‌ಗಳು ಪ್ರತೀ ವರ್ಷ ತಮ್ಮ ಪರವಾನಿಗೆಯನ್ನು ನವೀಕರಿಸಿಕೊಳ್ಳಬೇಕು ಎಂದರು.

ಪ್ರವಾಸಿ ಬೋಟ್‌ಗಳಲ್ಲಿ ಪ್ರವಾಸಿಗರ ಹಿತದೃಷ್ಠಿಯಿಂದ ಲೈಫ್ ಜಾಕೆಟ್ ಧರಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿಯೊಬ್ಬ ಪ್ರವಾಸಿಗರು ಕಡಲಿಗೆ ಇಳಿಯುವ ಮುನ್ನ ಲೈಫ್ ಜಾಕೆಟ್ ಧರಿಸುವಂತೆ ನೋಡಿಕೊಳ್ಳಬೇಕು. ಲೈಫ್ ಜಾಕೆಟ್ ಬಳಸುವ ಕುರಿತು ಕರಪತ್ರಗಳನ್ನು ಸಮುದ್ರ ತೀರ ಸೇರಿದಂತೆ ಪ್ರವಾಸಿಗರು ಹೆಚ್ಚಾಗಿ ಸೇರುವಲ್ಲಿ ಪ್ರದರ್ಶಿಸಬೇಕು. ಪ್ರವಾಸಿ ಬೋಟ್‌ಗಳಲ್ಲಿ ಎಲ್ಲರೂ ಲೈಫ್ ಜಾಕೆಟ್ ಧರಿಸಿದ್ದಲ್ಲಿ ಮಾತ್ರ ಬೋಟ್ ಮುಂದೆ ಸಾಗಲಿದೆ ಎಂಬ ಪ್ರೀ-ರೆಕಾರ್ಡೆಡ್ ಆಡಿಯೋವನ್ನು ಬೋಟ್‌ಗಳಲ್ಲಿ ಹೊರಡಿಸಬೇಕು ಎಂದರು.

ಎಲ್ಲಾ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರನ್ನು ಎಚ್ಚರಿಸುವ ಕುರಿತು ಸೂಚನಾ ಫಲಕಗಳನ್ನು ಅಲ್ಲಲ್ಲಿ ಅಳವಡಿಸಬೇಕು. ಪ್ರವಾಸೋದ್ಯಮ ಉದ್ದೇಶಕ್ಕೆ ಬಳಸುವ ಪ್ರವಾಸಿ ಬೋಟ್ ಮಾಲೀಕರುಗಳ ಸಭೆಯನ್ನು ಶೀಘ್ರದಲ್ಲಿ ಕರೆದು ಪರವಾನಿಗೆ ಪಡೆಯುವಂತೆ ಸೂಚನೆ ನೀಡಬೇಕು ಎಂದ ಅವರು, ಜಿಲ್ಲೆಯ ಪ್ರವಾಸಿ ಬೋಟ್‌ಗಳ ಮಾಲೀಕರುಗಳು ಹಾಗೂ ಅದನ್ನು ಚಲಾಯಿಸುವವರಿಗೆ ಕಾರ್ಯಾಗಾರ ಆಯೋಜಿಸಿ, ಸುರಕ್ಷತಾ ವಿಧಾನ ಅನುಸರಿಸುವ ಬಗ್ಗೆ, ವಿಮೆ ಸೌಲಭ್ಯ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಬೇಕು. ಜೀವ ರಕ್ಷಕ ಸಿಬ್ಬಂದಿಗಳೂ ಸಹ ಜೀವ ರಕ್ಷಣಾ ವಿಧಾನಗಳ ಬಗ್ಗೆ ಮಾಹಿತಿ ಹೊಂದಿರುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂಧ್ಯ ಎನ್.ಎಂ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...