ಉಡುಪಿ | ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಕ್ರಮವಹಿಸಿ : ಜಿಲ್ಲಾಧಿಕಾರಿ

Date:

Advertisements

ಇದೇ ಜನವರಿ 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಭಾರತ ಗಣರಾಜ್ಯೋತ್ಸವ ದಿನಾಚರಣೆಯು ದೇಶಪ್ರೇಮ, ದೇಶಭಕ್ತಿ ಹಾಗೂ ಭಾರತ ಸಂವಿಧಾನ ಆಚರಣೆಯ ಪ್ರತೀಕವಾಗಿದ್ದು, ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಗಣರಾಜ್ಯೋತ್ಸವವನ್ನು ಆಚರಿಸಬೇಕು. ಇಲಾಖೆಯ ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ, ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದರು.

Advertisements

ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಜನವರಿ 26 ರಂದು ಬೆಳಿಗ್ಗೆ 9 ಕ್ಕೆ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಗುವುದು. ಶಿಷ್ಟಾಚಾರದ ನಿಯಮಗಳಂತೆ ಭಾರತ ಗಣರಾಜ್ಯೋತ್ಸವ ಸಮಾರಂಭದ ಆಹ್ವಾನ ಪತ್ರಿಕೆ ಮುದ್ರಿಸಿ, ಮುದ್ರಿತ ಆಹ್ವಾನ ಪತ್ರಿಕೆಗಳನ್ನು ಜನಪ್ರತಿನಿಧಿಗಳಿಗೆ, ಗಣ್ಯರಿಗೆ ವಿತರಿಸಲು ಕ್ರಮವಹಿಸಬೇಕು ಎಂದರು,

ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಪಟ್ಟಂತೆ ಸ್ವಾಗತ, ಶಿಷ್ಟಾಚಾರ, ಆಹ್ವಾನ ಪತ್ರಿಕೆ ಹಾಗೂ ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯಲ್ಲಿರುವ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮ, ಉತ್ತಮ ಧ್ವನಿವರ್ಧಕ ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಸ್ವಾತಂತ್ರ‍್ಯ ಹೋರಾಟಗಾರರು, ಗಣ್ಯರು, ಅಧಿಕಾರಿಗಳು, ಮಾಧ್ಯಮದವರು ಆಸಿನರಾಗಲು ಪ್ರತ್ಯೇಕವಾಗಿ ಆಸನದ ವ್ಯವಸ್ಥೆ ಮಾಡಬೇಕು ಅಧಿಕಾರಿಗಳಿಗೆ ತಿಳಿಸಿದರು.

ಭಾರತ ಗಣರಾಜ್ಯೋತ್ಸವದ ಪೆರೇಡ್ ವ್ಯವಸ್ಥೆಯನ್ನು ಏರ್ಪಡಿಸಲು ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ರಾಷ್ಟ್ರ ಧ್ವಜಾರೋಹಣದ ನಂತರ ಶಾಲಾ ಮಕ್ಕಳಿಂದ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಮತ್ತು ಸ್ವಯಂಪ್ರೇರಿತವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್‌ಪಿ ಸಿದ್ಧಲಿಂಗಪ್ಪ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್, ಡಿಡಿಪಿಐ ಗಣಪತಿ ಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X